ಸ್ಯಾಂಡಲ್ವುಡ್ನಲ್ಲಿ ಸೂಪರ್ ಹಿಟ್ ಸಿನಿಮಾಗಳ ಸೀಕ್ವೆಲ್ಗಳು ಮೂಡಿಬರುತ್ತಿವೆ. ಈ ಸಾಲಿನಲ್ಲಿ ನಾನು ಮತ್ತು ಗುಂಡ ಚಿತ್ರದ ಸೀಕ್ವೆಲ್ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಕನ್ನಡದ ಈ ಬಹುನಿರೀಕ್ಷಿತ ಚಿತ್ರದಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಡಾಗ್ ಸಿಂಬಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ರಘುಹಾಸನ್ ಆ್ಯಕ್ಷನ್ ಕಟ್ ಹೇಳುತ್ತಿರುವ ನಾನು ಮತ್ತು ಗುಂಡ 2 ಚಿತ್ರ ತನ್ನ ಮೋಷನ್ ಪಿಕ್ಚರ್ಸ್ನಿಂದಲೇ ಪ್ರೇಕ್ಷಕರ ಗಮನ ಸೆಳೆದಿದ್ದು, ಪ್ರೇಕ್ಷಕರು ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಬಹುತೇಕ ಶೂಟಿಂಗ್ ಮುಗಿಸಿರೋ ಈ ಚಿತ್ರದಲ್ಲಿ ಶ್ವಾನ ಸಿಂಬಾ ಡಬ್ಬಿಂಗ್ ಮಾಡಿರೋದು ವಿಶೇಷ.
ಈ ಬಗ್ಗೆ ಮಾತನಾಡಿರುವ ನಿರ್ದೇಶಕ ರಘು ಹಾಸನ್, ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಡಬ್ಬಿಂಗ್ ಕೆಲಸ ಈಗಷ್ಟೇ ಶುರುವಾಗಿದೆ. ಇಡೀ ಸಿನಿಮಾದಲ್ಲಿ ಎಲ್ಲಾ ರೀತಿಯ ಎಮೋಷನ್ಸ್ ಇರಲಿದೆ. ವಿಶೇಷವಾಗಿ ಡಾಗ್ ಸಿಂಬಾ ರೆಕಾರ್ಡಿಂಗ್ ಸ್ಟುಡಿಯೋಗೆ ಬಂದು ತನ್ನ ಪಾತ್ರಕ್ಕೆ ತಾನೇ ಡಬ್ ಮಾಡುತ್ತಿದೆ. ಇಡೀ ಚಿತ್ರದಲ್ಲಿ ಸಿಂಬಾ ಶ್ವಾನದ ಒರಿಜಿನಲ್ ಸೌಂಡ್ ಇರಲಿದೆ. ಡಬ್ಬಿಂಗ್ ಅಂದ್ರೆ, ಸಿಂಬಾ ಮಾತನಾಡೋದಿಲ್ಲ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಅದರ ಬೊಗಳೋ ಸೌಂಡ್ ಅನ್ನು ರೆಕಾರ್ಡ್ ಮಾಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು.
ಸಿಂಬಾ ಡಾಗ್ನ ಒರಿಜಿನಲ್ ಸೌಂಡ್ ಅನ್ನು ನಾವು ರೆಕಾರ್ಡ್ ಮಾಡುತ್ತಿದ್ದೇವೆ. ಎಮೋಷನಲ್ ಸೀನ್‌ಗಳಲ್ಲೂ ಸಿಂಬಾ ಡಬ್ಬಿಂಗ್ ಮಾಡುತ್ತಿದೆ. ಪ್ರತಿ ಜಾತಿಯ ನಾಯಿಯದ್ದೂ ಒಂದೊಂದು ರೀತಿಯ ಸೌಂಡ್ ಇರುತ್ತದೆ. ಹಾಗಾಗಿಯೇ ನಾವು ನಮ್ಮ ಗುಂಡನ ಪಾತ್ರ ಮಾಡಿರೋ ಸಿಂಬಾನಿಂದಲೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ ಎಂದು ತಿಳಿಸಿದರು.
ಶ್ವಾನದ ಜೊತೆ ಡಬ್ಬಿಂಗ್ ಮಾಡಿಸುತ್ತಿರುವುದು ನಾವೇ ಮೊದಲೆನ್ನಬಹುದು. 'ನಾನು ಮತ್ತು ಗುಂಡ 1' ಚಿತ್ರದಲ್ಲೂ ಡಾಗ್‌ನಿಂದಲೇ ಡಬ್ಬಿಂಗ್ ಮಾಡಿಸಿದ್ದೇವೆ. ಆದರೆ, ಅದು ಕೆಲವೇ ಕೆಲವು ದೃಶ್ಯಗಳಲ್ಲಿ ಮಾತ್ರ ಆಗಿತ್ತು. ಪಾರ್ಟ್-2ನ ಇಡೀ ಸಿನಿಮಾದಲ್ಲಿ ಡಾಗ್ ಸಿಂಬಾನೇ ಡಬ್ ಮಾಡಿದ್ದಾನೆ ಎಂದರು.
ಭಾರತದಲ್ಲಿ ಯಾರೂ ಈ ಪ್ರಯತ್ನ ಮಾಡಿಲ್ಲ ಎಂದು ನಿರ್ದೇಶಕ ರಘು ಹಾಸನ್ ಹೇಳಿದ್ದಾರೆ. ಡಬ್ಬಿಂಗ್ ಕೆಲಸ ಆದ್ಮೇಲೆ ಚಿತ್ರದ ಡಿ ಐ ಮತ್ತು ಆರ್ ಆರ್ ಕೆಲಸ ಶುರು ಮಾಡಲಾಗುತ್ತದೆ. ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ 2 ಚಿತ್ರಕ್ಕೆ ಆರ್.ಪಿ ಪಟ್ನಾಯಕ್ ಅವರ ಸಂಗೀತ ಹಾಗೂ ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತವಿದೆ. ತನ್ವಿಕ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯ ನಿರ್ದೇಶನವಿದೆ. ಈ ಚಿತ್ರ ಕನ್ನಡ, ತೆಲುಗು, ಹಿಂದಿ ಸೇರಿ 5 ಭಾಷೆಗಳಲ್ಲಿ ತೆರೆಕಾಣಲಿದೆ. ಸಿನಿಮಾದ ಶೀಘ್ರ ಬಿಡುಗಡೆ ನಿಟ್ಟಿನಲ್ಲಿ ಚಿತ್ರತಂಡ ಕೆಲಸ ಮಾಡುತ್ತಿದೆ.
ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಅಭಿಷೇಕ್-ಐಶ್ವರ್ಯಾ 'ವಿಚ್ಛೇದನ' ವೈರಲ್ ವಿಡಿಯೋ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ - Abhishek Aishwarya
ಕನ್ನಡ ಚಿತ್ರರಂಗದಲ್ಲೀಗ ಸೀಕ್ವೆಲ್ ಸಿನಿಮಾಗಳ ಅಬ್ಬರ ಜೋರಾಗಿದೆ. ಕೆಲ ಚಿತ್ರಗಳ ಸೀಕ್ವೆಲ್ಗಳು ಯಶ ಕಂಡಿದ್ದರೆ, ಕೆಲವು ಮೊದಲ ಭಾಗದಷ್ಟು ಸದ್ದು ಮಾಡದ ಉದಾಹಣೆ ಇದೆ. 2020ರಲ್ಲಿ ತೆರೆಗೆ ಬಂದಿದ್ದ 'ನಾನು ಮತ್ತು ಗುಂಡ' ಭಾವನಾತ್ಮಕವಾಗಿ ಪ್ರೇಕ್ಷಕರನ್ನು ತಲುಪಿದ್ದು, ಸದ್ಯ ಬರುತ್ತಿರುವ ಈ ಸೀಕ್ವೆಲ್ ಎಷ್ಟರ ಮಟ್ಟಿಗೆ ಗೆಲುವು ಕಾಣಲಿದೆ ಅನ್ನೋದನ್ನು ಕಾದು ನೋಡಬೇಕಿದೆ.