ETV Bharat / entertainment

'ಡಾಲಿ ಧನಂಜಯ್ ಕನ್ನಡದಲ್ಲಿ ಅದ್ಭುತ ನಟ, ತೆಲುಗಿನಲ್ಲಿ ಸ್ಟಾರ್ ಆಗ್ತಾರೆ': ಚಿರಂಜೀವಿ - ZEBRA TRAILER

ಡಾಲಿ ಧನಂಜಯ್ ಹಾಗೂ ಸತ್ಯದೇವ್ ನಟನೆಯ ಬಹುನಿರೀಕ್ಷಿತ ''ಜೀಬ್ರಾ'' ಚಿತ್ರದ ಟ್ರೇಲರ್​ ಅನಾವರಣಗೊಂಡಿದೆ.

Zebra Trailer release event
ಜೀಬ್ರಾ ಟ್ರೇಲರ್​ ರಿಲೀಸ್​ ಈವೆಂಟ್​​ (Photo: ETV Bharat)
author img

By ETV Bharat Entertainment Team

Published : Nov 14, 2024, 12:56 PM IST

ತೆಲುಗಿನ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಸಿನಿಮಾ ''ಜೀಬ್ರಾ'' ಬಿಡುಗಡೆಗೆ ಸಜ್ಜಾಗಿದೆ. ಚಿತ್ರ ತೆರೆಕಾಣಲು ಕೆಲ ದಿನಗಳಷ್ಟೇ ಬಾಕಿ ಇದ್ದು, ಪ್ರಚಾರ ಕೆಲಸಗಳು ಭರದಿಂದ ಸಾಗಿದೆ. ಅದರ ಭಾಗವಾಗಿ ಇತ್ತೀಚೆಗೆ ಹೈದರಾಬಾದ್​​ನಲ್ಲಿ 'ಜೀಬ್ರಾ' ಟ್ರೇಲರ್ ಈವೆಂಟ್ ನಡೆದಿದೆ. ಭಾರತೀಯ ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರು ಡಾಲಿ ಧನಂಜಯ್ ಹಾಗೂ ಸತ್ಯದೇವ್ ನಟನೆಯ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ. 'ಜೀಬ್ರಾ' ಟ್ರೇಲರ್ ಅನಾವರಣಗೊಳಿಸಿ, ಸಿನಿಮಾದ ಯಶಸ್ಸಿಗೆ ಹಾರೈಸಿದ್ದಾರೆ.

ಟ್ರೇಲರ್​ ಬಿಡುಗಡೆ ಬಳಿಕ ಮಾತನಾಡಿದ ಮೆಗಾಸ್ಟಾರ್ ಚಿರಂಜೀವಿ, ''ಜೀಬ್ರಾ ಸಿನಿಮಾ ಸೂಪರ್ ಹಿಟ್ ಆಗಲಿ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಡಾಲಿ ಧನಂಜಯ್ ಕನ್ನಡದಲ್ಲಿ ಅದ್ಭುತ ನಟ. ತೆಲುಗಿನಲ್ಲಿ ಸ್ಟಾರ್ ಆಗ್ತಾರೆ'' ಎಂದು ನಟರಾಕ್ಷಸನ ಪ್ರತಿಭೆ ಕುರಿತು ಕೊಂಡಾಡಿದ್ದಾರೆ.

'ನಾನು ಸ್ನೇಹ ಜೀವಿ, ನೀನು ಸ್ನೇಹ ಜೀವಿ' ಅಂತಾ ಸಿಪಾಯಿ ಸಿನಿಮಾ ಹಾಡು ಹೇಳಿ ಚಿರಂಜೀವಿ ಅವರಿಗೆ ನಮಸ್ಕಾರ ಮಾಡಿದ ಡಾಲಿ ಧನಂಜಯ್, ಜೀಬ್ರಾ ಚಿತ್ರವನ್ನು ಕನ್ನಡಕ್ಕೆ ತುಂಬಾ ಚೆನ್ನಾಗಿ ಡಬ್ ಮಾಡಲಾಗಿದೆ. ನಮ್ಮ ಡೇರ್ ಡೆವಿಲ್ ಮುಸ್ತಫಾ ಚಿತ್ರತಂಡ ಡಬ್ ಮಾಡಿದೆ. ಇದೇ ನವೆಂಬರ್ 22ಕ್ಕೆ ಚಿತ್ರ ತೆರೆಗೆ ಬರುತ್ತಿದೆ. ನಿಮ್ಮ ಬೆಂಬಲವಿರಲಿ ಎಂದು ಕೋರಿದರು.

Daali Dhananjay
ನಟ ಡಾಲಿ ಧನಂಜಯ್ (Photo: ETV Bharat)

'ಜೀಬ್ರಾ' ಒಂದು ಕ್ರೈಂ ಥ್ರಿಲ್ಲರ್. ನೈಜ ಘಟನೆಗಳಿಂದ ಪ್ರೇರಣೆಗೊಂಡು ಕಥೆ ಹೆಣೆಯಲಾಗಿದೆ. ಬ್ಯಾಂಕ್ ಫ್ರಾಡ್ ಸುತ್ತ ಸಿನಿಮಾದ ಕಥೆ ಸುತ್ತಲಿದೆ. ಈಶ್ವರ್ ಕಾರ್ತಿಕ್ ನಿರ್ದೇಶನದ ಚಿತ್ರದಲ್ಲಿ ಸತ್ಯದೇವ್ ಹೀರೋ ಆಗಿ ನಟಿಸಿದ್ದಾರೆ. ಆದಿ ಎಂಬ ಖಡಕ್ ರೋಲ್‌ನಲ್ಲಿ ಧನಂಜಯ್ ಅಬ್ಬರಿಸಿದ್ದಾರೆ. ಕನ್ನಡಕ್ಕೂ ಸಿನಿಮಾ ಡಬ್ ಆಗಿ ರಿಲೀಸ್ ಆಗಲಿದೆ ಎಂದು ತಿಳಿಸಿದರು.

ಧನಂಜಯ್‌ ಅಭಿನಯದ 26ನೇ ಸಿನಿಮಾ 'ಜೀಬ್ರಾ'ಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಪ್ರಿಯಾ ಭವಾನಿ ಶಂಕರ್ ಹಾಗೂ ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸತ್ಯ ಅಕಾಲ್ ಮತ್ತು ಸುನಿಲ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: 'ಓ ಮೈ ಗಾಡ್, ಅದ್ಭುತ': ಅನುಭವ ಹಂಚಿಕೊಂಡ ಕನ್ನಡತಿ​ ರಶ್ಮಿಕಾ ಮಂದಣ್ಣ; ಏನಂದ್ರು?

ಎಸ್‌.ಎನ್‌ ರೆಡ್ಡಿ, ಎಸ್‌. ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್‌ ಸುಂದರಂ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ, ಮೀರಾಖ್ ಸಂಭಾಷಣೆ ಸಿನಿಮಾಗಿದೆ. ಇದೇ ತಿಂಗಳ 22ಕ್ಕೆ ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಕೊನೆ ಚಿತ್ರದಲ್ಲಿ ಶಿವಣ್ಣ: ಸೌತ್ ಸೂಪರ್​​ಸ್ಟಾರ್ಸ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿರುವ ಸೆಂಚುರಿ ಸ್ಟಾರ್

ನಟರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ್​ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ತಮ್ಮ ಅಮೋಘ ಅಭಿನಯದಿಂದ ಸಿನಿರಂಗದಲ್ಲಿ ಗೆಲುವು ಕಂಡಿದ್ದಾರೆ. ಜೊತೆಗೆ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಬಿಡುಗಡೆ ಹೊಸ್ತಿಲಿನಲ್ಲಿರುವ ತೆಲುಗಿನ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಸಿನಿಮಾ ಎಷ್ಟರ ಮಟ್ಟಿಗೆ ಗೆಲುವು ಕಾಣಲಿದೆ ಅನ್ನೋದು ಈ ತಿಂಗಳಾಂತ್ಯ ತಿಳಿಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.