ETV Bharat / entertainment

ಮಗಳ ಜೊತೆ ವಿಜಯ್​ ಅಭಿನಯದ ಸಿನಿಮಾ ಮುಹೂರ್ತ: ಹೆಸರು ಬದಲಿಸಿಕೊಂಡ ದುನಿಯಾ ಪುತ್ರಿ - Duniya Vijay - DUNIYA VIJAY

ದುನಿಯಾ ವಿಜಯ್ ಹಾಗೂ ಅವರ ಪುತ್ರಿ ಒಟ್ಟಿಗೆ ಅಭಿನಯಿಸುತ್ತಿರುವ ಚಿತ್ರದ ಶೂಟಿಂಗ್ ಆರಂಭವಾಗಿದೆ.

Etv Bharat
Etv Bharat
author img

By ETV Bharat Karnataka Team

Published : Apr 12, 2024, 9:36 AM IST

ದುನಿಯಾ ವಿಜಯ್ ಹಾಗೂ ಅವರ ಪುತ್ರಿ ಮೋನಿಕಾ ಒಂದೇ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ಗೊತ್ತಿರುವ ವಿಚಾರ. ಇನ್ನೂ ಹೆಸರಿಡದ ಚಿತ್ರದ ಪೋಸ್ಟರ್ ರಿವೀಲ್ ಮಾಡಲಾಗಿದ್ದು, ವಿಜಯ್ ನಾಯಕರಾಗಿ ನಟಿಸುತ್ತಿರುವ 29ನೇ ಸಿನಿಮಾ ವಿಕೆ 29 ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.

duniya vijay new movie
ದುನಿಯಾ ವಿಜಯ್-ಪುತ್ರಿ ಹೊಸ ಸಿನಿಮಾ ಮುಹೂರ್ತ

ಶಾಸಕ ಗೋಪಾಲಯ್ಯ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ಶುಭ ಕೋರಿದರು.

'ಜಂಟಲ್ ಮ್ಯಾನ್', 'ಗುರುಶಿಷ್ಯರು' ಚಿತ್ರಗಳ ನಿರ್ದೇಶಕ ಹಾಗೂ 'ಕಾಟೇರ' ಕಥೆ ಬರೆದಿದ್ದ ಜಡೇಶ್ ಕೆ.ಹಂಪಿ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಬಹಳ ವರ್ಷಗಳ ಬಳಿಕ ರಚಿತಾ ರಾಮ್ ದುನಿಯಾ ವಿಜಯ್ ಜೊತೆ ಸ್ಕ್ರೀನ್ ಹಂಚಿಕೊಳ್ಳುತ್ತಿದ್ದಾರೆ. ವಿಜಯ್ ಪುತ್ರಿ ಮೋನಿಕಾ ಹೆಸರು ಬದಲಾವಣೆ ಮಾಡಿಕೊಂಡು ಚಿತ್ರರಂಗಕ್ಕೆ ರಿತನ್ಯಾ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. 'ಡೇರ್ ಡೆವಿಲ್ ಮುಸ್ತಫಾ' ಖ್ಯಾತಿಯ ಶಿಶಿರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮುಹೂರ್ತದ ಬಳಿಕ ಮಾತನಾಡಿದ ‌ನಿರ್ದೇಶಕ ಜಡೇಶ್ ಹಂಪಿ, ''ಇದು ನಾನು ಕಂಡು, ಕೇಳಿದ ಹಾಗೂ ನೋಡಿದ ನೈಜ ಕಥೆ. ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಅಲ್ಲಿನ ಭಾಷೆಯಲ್ಲೇ ಇರಲಿದೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೇ ಆಗಿರುವುದು ವಿಶೇಷ. ಇದು 90ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ 'ಚೋಮನ ದುಡಿ'ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಫೂರ್ತಿ. ಹಾಗಂತ ಚೋಮನ ದುಡಿ ಚಿತ್ರಕ್ಕೂ ಇದಕ್ಕೂ ಸಂಬಂಧವಿಲ್ಲ'' ಎಂದರು

''ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರಗಳಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಸತ್ಯಪ್ರಕಾಶ್ ಹಾಗೂ ಅವರ ಮಗ ಸೂರಜ್ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ 24 ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕಿದೆ. ಬೆಂಗಳೂರಿನಲ್ಲಿ ಅದ್ಧೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ ಹಾಗೂ ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ'' ಎಂದು ಹೇಳಿದರು.

duniya vijay new movie
ದುನಿಯಾ ವಿಜಯ್-ಪುತ್ರಿ ಹೊಸ ಸಿನಿಮಾ ಮುಹೂರ್ತ

ದುನಿಯಾ ವಿಜಯ್ ಮಾತನಾಡಿ, ''ಈ ಚಿತ್ರದ ವಿಶೇಷವೆಂದರೆ ತಂದೆ - ಮಗ ನಿರ್ಮಿಸುತ್ತಿದ್ದಾರೆ. ತಂದೆ - ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯಾ, ಮುಂಬೈನ ಅನುಪಮ್ ಖೇರ್ ಇನ್ಸ್​ಟಿಟ್ಯೂಟ್​​ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು 30 ವರ್ಷ ಹಾಗೂ ನಾಯಕನಾಗಿ 18 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ'' ಎಂದು ಸಂತಸ ವ್ಯಕ್ತಪಡಿಸಿದರು.

''ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು.. ಸ್ಕ್ರಿಪ್ಟ್​ನಲ್ಲೂ ಅರ್ಧಭಾಗ ಕೊಡಬಹುದು. ನಿರ್ದೇಶಕ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಅವರು ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ'' ಎಂದರು ವಿಜಯ್.

''ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯಾ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ'' ಎಂದು ವಿಜಯ್ ಪುತ್ರಿ ರಿತನ್ಯಾ ಹೇಳಿದರು.

''ಸಾರಥಿ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರಗಳಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ 24 ದಿನಗಳಲ್ಲಿಯೇ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ'' ಎಂದು ನಿರ್ಮಾಪಕ ಸತ್ಯ ಪ್ರಕಾಶ್ ಮನವಿ ಮಾಡಿದರು.

'ಸಾರಥಿ' ಚಿತ್ರ ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ 12 ವರ್ಷಗಳ ಬಳಿಕ ಸಾರಥಿ ಫಿಲಂಸ್ ಮೂಲಕ ನೂತನ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಚಿತ್ರಕ್ಕೆ ಸ್ವಾಮಿ ಗೌಡ ಛಾಯಾಗ್ರಹಣವಿದ್ದು, ಸೂರಜ್ ಗೌಡ ಸಹ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ‌. ನಿರ್ಮಾಣ ನಿರ್ವಾಹಕರಾಗಿ ನರಸಿಂಹ ಜಾಲಹಳ್ಳಿ ಕೆಲಸ ಮಾಡಲಿದ್ದು, ಮಾಸ್ತಿ ಅವರ ಸಂಭಾಷಣೆ ಚಿತ್ರಕ್ಕಿದೆ.

ಇದನ್ನೂ ಓದಿ: ಡಬ್ಬಿಂಗ್​ನಲ್ಲಿ ಬ್ಯುಸಿಯಾದ ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಚಿತ್ರ: ಏನಂತಾರೆ ಡೈರೆಕ್ಟರ್?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.