ETV Bharat / entertainment

'ದ್ವಂದ್ವಂ ದ್ವಯಂ' ಕಿರುಚಿತ್ರಕ್ಕೆ ನಾಗತಿಹಳ್ಳಿ ಚಂದ್ರಶೇಖರ್ ಸಾಥ್

'ದ್ವಂದ್ವಂ ದ್ವಯಂ' ಕಿರುಚಿತ್ರದ ಪ್ರದರ್ಶನ ಹಾಗೂ ಸಂವಾದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನೆರವೇರಿತು.

author img

By ETV Bharat Karnataka Team

Published : Mar 19, 2024, 1:44 PM IST

Dwandwam Dwayam
'ದ್ವಂದ್ವಂ ದ್ವಯಂ'

ಸ್ಯಾಂಡಲ್​ವುಡ್​ನಲ್ಲಿ ಸೂಪರ್ ಸ್ಟಾರ್ಸ್ ಸಿನಿಮಾಗಳ ಜೊತೆ ಕಂಟೆಂಟ್ ಓರಿಯೆಂಟೆಡ್, ಸಾಮಾಜಿಕ ಕಳಕಳಿ ಇರುವ ಕಿರುಚಿತ್ರಗಳು ನಿರ್ಮಾಣ ಆಗುತ್ತಿವೆ. ಹೆಸರಾಂತ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸ್ಕೂಲ್ ಆಫ್ ಸಿನಿಮಾದಲ್ಲಿ ಕಾರ್ಯಾಗಾರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮನ್ ಚಂಗಪ್ಪ ನಿರ್ದೇಶಿಸಿರುವ ಮೊದಲ ಕಿರುಚಿತ್ರ 'ದ್ವಂದ್ವಂ ದ್ವಯಂ'. ಇತ್ತೀಚಿಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಸಂವಾದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನೆರವೇರಿತು.

Dwandwam Dwayam
'ದ್ವಂದ್ವಂ ದ್ವಯಂ'

ನಾಗತಿಹಳ್ಳಿ ಚಂದ್ರಶೇಖರ್, ಡಾ. ನಾದ ಶೆಟ್ಟಿ, ಅಶೋಕ್ ಕಶ್ಯಪ್, ಅನೂಪ್ ಭಂಡಾರಿ ಹಾಗೂ ಚಂಪಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಿರುಚಿತ್ರವನ್ನು ವೀಕ್ಷಿಸಿದರು. ಜೊತೆಗೆ, ತಮ್ಮ ಪ್ರೋತ್ಸಾಹಭರಿತ ಮಾತುಗಳೊಂದಿಗೆ ಕಿರುಚಿತ್ರ ತಂಡದವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಮರಣದಂಡನೆಗೆ ಮುನ್ನ ಜೈಲು ಕೈದಿಯೊಬ್ಬನ ಕೊನೆಯ ರಾತ್ರಿಯ ಕ್ಯಾನ್ವಾಸ್​ನಲ್ಲಿ ತೆರೆದುಕೊಳ್ಳುವ ಚಿತ್ರವಿದು. ಪ್ರತಿಯೊಬ್ಬ ವ್ಯಕ್ತಿಯ ಅಸ್ತಿತ್ವದಲ್ಲಿ ಅಂತರ್ಗತವಾಗಿರುವುದನ್ನು ಪರಿಶೀಲಿಸುವ ಚಿತ್ರವಿದು. 17 ನಿಮಿಷಗಳ ಅವಧಿಯಲ್ಲಿ ಮಾನವ ಬದುಕಿನ ಸಂಕೀರ್ಣತೆಗಳನ್ನು ಆಳವಾಗಿ ಪರಿಶೋಧಿಸುವ ಪ್ರಯತ್ನವನ್ನು ಈ ಕಿರುಚಿತ್ರ ಮಾಡುತ್ತದೆ. ನಮ್ಮೆಲ್ಲರೊಳಗಿನ ಜೀವನ ಹಾಗೂ ಆಯ್ಕೆಗಳ ಅನ್ವೇಷಣೆಯೇ ಈ "ದ್ವಂದ್ವಂ ದ್ವಯಂ" ಎಂದು ಕಿರುಚಿತ್ರದ ಬಗ್ಗೆ ನಿರ್ದೇಶಕ ಮನ್ ಚಂಗಪ್ಪ ಕಿರು ಪರಿಚಯ ಮಾಡಿಕೊಟ್ಟರು.

Dwandwam Dwayam
'ದ್ವಂದ್ವಂ ದ್ವಯಂ'

ಇದನ್ನೂ ಓದಿ: ವಿಯೆಟ್ನಾಂನಲ್ಲಿ 'ಕೃಷ್ಣಂ ಪ್ರಣಯ ಸಖಿ' ಚಿತ್ರೀಕರಣ ಪೂರ್ಣ: ಗಣೇಶ್​​ ಸಿನಿಮಾ ಬಗ್ಗೆ ಹೆಚ್ಚಿದ ಕುತೂಹಲ

ನನ್ನ ಮೊದಲ ಕಿರುಚಿತ್ರದ ಪ್ರದರ್ಶನ, ನನ್ನ ಇಬ್ಬರು ಗುರುಗಳಾದ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ನಾದ ಶೆಟ್ಟಿ ಅವರ ಮುಂದೆ ನಡೆದಿರುವುದು ಬಹಳ ಖುಷಿಯಾಗಿದೆ. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಛಾಯಾಗ್ರಾಹಕ ಹಾಗೂ ನಿರ್ದೇಶಕ ಅಶೋಕ್ ಕಶ್ಯಪ್, ನಿರ್ದೇಶಕಿ ಚಂಪಾ ಶೆಟ್ಟಿ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮತ್ತು ನನ್ನ ಇಡೀ ತಂಡಕ್ಕೆ ಧನ್ಯವಾದ ಅರ್ಪಿಸುತ್ತೇನೆ. ನನ್ನ ಮೊದಲ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ದೇಶಕರು ಕೇಳಿಕೊಂಡರು.

ಇದನ್ನೂ ಓದಿ: ಪವನ್ ಒಡೆಯರ್ ನಿರ್ಮಾಣದ ಚಿತ್ರದಲ್ಲಿ ನಟನೆಯೊಂದಿಗೆ ನಿರ್ದೇಶನಕ್ಕಿಳಿದ ಸಾಗರ್ ಪುರಾಣಿಕ್

ಈಗಾಗಲೇ ಕೆಲ ಚಿತ್ರಗಳಲ್ಲಿ ನಟಿಸಿರುವ ವಿಕಾಶ್ ಉತ್ತಯ್ಯ ಅವರು ಸೂರ್ಯ ಎಂಬ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರ್ಯ ಹಾಗೂ ಸುಮೋಕ್ಷ ತಾರಾಬಳಗದಲ್ಲಿದ್ದಾರೆ. ಮನ್ ಚಂಗಪ್ಪ ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ನಾದ ಶೆಟ್ಟಿ ಅವರದ್ದು. ರಾಜಾರಾವ್ ಅಂಚಲ್ಕರ್ ಛಾಯಾಗ್ರಹಣ ಹಾಗೂ ಉದಯ್ ಕುಮಾರ್ ಅವರ ಸಂಕಲನ "ದ್ವಂದ್ವಂ ದ್ವಯಂ" ಕಿರುಚಿತ್ರಕ್ಕಿದೆ. ಯೆಲ್ಲೋ ಡೈರಿಸ್​ ಮೂಲಕ ಹರ್ಷಿಕಾ ವಸಂತ್ ಈ ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.