ETV Bharat / entertainment

ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣಾ ನಿಧನ - Actress Aparna Dies - ACTRESS APARNA DIES

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ(57) ಅವರು ನಿಧನರಾಗಿದ್ದಾರೆ. ಅವರು ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಗುರುತಿಸಿಕೊಂಡಿದ್ದರು. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.

ಖ್ಯಾತ ನಿರೂಪಕಿ ಅಪರ್ಣಾ
ಖ್ಯಾತ ನಿರೂಪಕಿ ಅಪರ್ಣಾ (ETV Bharat)
author img

By ETV Bharat Karnataka Team

Published : Jul 11, 2024, 11:05 PM IST

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ(57) ಅವರು ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಗುರುವಾರ (ಜುಲೈ 11) ನಿಧನರಾಗಿದ್ದಾರೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದರು. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.

ಕಳೆದ ಹಲವು ತಿಂಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅಪರ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರಮವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ'ಗೆ ಧ್ವನಿ ನೀಡಿದ್ದರು.

ಇದನ್ನೂ ಓದಿ: ನಟ ದರ್ಶನ್ ಪ್ರಕರಣದ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಹೇಳಿದ್ದೇನು ? - Tharun Sudhir

ETV Bharat Logo

Copyright © 2025 Ushodaya Enterprises Pvt. Ltd., All Rights Reserved.