ದಕ್ಷಿಣ ಚಿತ್ರರಂಗದ ಖ್ಯಾತ ನಟ ನಾಗ ಚೈತನ್ಯ ಹಾಗೂ ಬಹುಭಾಷಾ ನಟಿ ಶೋಭಿತಾ ಧೂಳಿಪಾಲ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಬುಧವಾರ ತಡ ರಾತ್ರಿ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಅನ್ನಪೂರ್ಣ ಸ್ಟುಡಿಯೋದಲ್ಲಿ ಜೋಡಿ ಸಾಂಪ್ರದಾಯಿಕ ಹಿಂದೂ ಶೈಲಿಯಲ್ಲಿ ಹಸೆಮಣೆ ಏರಿದರು. ಈ ಸಮಾರಂಭದಲ್ಲಿ ಕುಟುಂಬದವರು, ಚಿತ್ರರಂಗದ ಗಣ್ಯರು, ಆಪ್ತರು, ಬಂಧುಗಳು ಪಾಲ್ಗೊಂಡಿದ್ದರು. ಮೆಗಾಸ್ಟಾರ್ ಚಿರಂಜೀವಿ ಕೂಡಾ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳನ್ನು ಆಶೀರ್ವದಿಸಿದರು.
ಅದ್ಧೂರಿ ವಿವಾಹ ಸಮಾರಂಭದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಸದ್ಯ ಈ ಮದುವೆ ಕಾರ್ಯಕ್ರಮದ ಫೋಟೋ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವದಂಪತಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ನೆಟಿಜನ್‌ಗಳು ಪ್ರೀತಿಯ ಧಾರೆಯೆರೆಯುತ್ತಿದ್ದಾರೆ.
Heartfelt congratulations to our beloved brother @chay_akkineni and #SobhitaDhulipala on this beautiful new chapter of life ❤️Wishing you both endless love, joy, and togetherness 👫
— Akhil Akkineni Trends (@AkhilTrends8) December 5, 2024
Look at our @AkhilAkkineni8 happiness in his brother's wedding 😂
He is whistling 🥳#SoChay https://t.co/A2BQnLEsQ6 pic.twitter.com/Slj94FJEWv
ಈ ಪ್ರೇಮಪಕ್ಷಿಗಳ ನಿಶ್ಚಿತಾರ್ಥ ಸಮಾರಂಭ ಆಗಸ್ಟ್ನಲ್ಲಿ ನಡೆದಿದ್ದು ನಿಮಗೆ ತಿಳಿದೇ ಇದೆ. ಮತ್ತೊಂದೆಡೆ, ನಾಗ ಚೈತನ್ಯ ಸಹೋದರ, ನಟ ಅಖಿಲ್ ಅವರು ಸಹ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ.
" we are delighted to announce the engagement of our son, naga chaitanya, to sobhita dhulipala, which took place this morning at 9:42 a.m.!!
— Nagarjuna Akkineni (@iamnagarjuna) August 8, 2024
we are overjoyed to welcome her into our family.
congratulations to the happy couple!
wishing them a lifetime of love and happiness. 💐… pic.twitter.com/buiBGa52lD
ಶೋಭಿತಾ ಧೂಳಿಪಾಲ ಅವರು 2013ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. 2016ರಲ್ಲಿ ಚಿತ್ರರಂಗ ಪ್ರವೇಶಿಸಿದರು. ಸದ್ಯ ಸೌತ್ ಫಿಲ್ಮ್ ಇಂಡಸ್ಟ್ರಿಯಲ್ಲಿ ಸರಣಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಹಾಲಿವುಡ್ ನಲ್ಲೂ ಅವಕಾಶ ಗಿಟ್ಟಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಮುನ್ನುಗ್ಗುತ್ತಿದ್ದಾರೆ.
ಪುಷ್ಪ-2 ಚಿತ್ರದ ಬೆನಿಫಿಟ್ ಶೋದಲ್ಲಿ ಅಲ್ಲು ಅರ್ಜುನ್: ಕಾಲ್ತುಳಿತದಲ್ಲಿ ಮಹಿಳೆ ಸಾವು
ಮತ್ತೊಂದೆಡೆ, ನಾಗ ಚೈತನ್ಯ ತಂಡೆಲ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಸಿನಿಮಾ ಇಂಡಸ್ಟ್ರಿಯ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಜೊತೆ ತೆರೆ ಹಂಚಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬಿಗ್ ಹಿಟ್ಗಾಗಿ ಕಾಯುತ್ತಿರುವ ನಾಗಚೈತನ್ಯ ಈ ಬಾರಿ 'ತಂಡೆಲ್' ಮೂಲಕ ಕನಸು ನನಸು ಮಾಡಿಕೊಳ್ಳಲಿದ್ದಾರೆ ಅಂತಿದ್ದಾರೆ ಅಭಿಮಾನಿಗಳು.
ಇದನ್ನೂ ಓದಿ: ಪುಷ್ಪ 2: ಅಭಿಮಾನಿಗಳೊಂದಿಗೆ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ - ಸೆಲೆಬ್ರೇಶನ್ ವಿಡಿಯೋ ನೋಡಿ
ಸೌತ್ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆ ನಟಿ ಸಮಂತಾ ರುತ್ ಪ್ರಭು ಅವರೊಂದಿಗೆ ನಾಗ ಚೈತನ್ಯ 2017ರಲ್ಲಿ ದಾಂಪತ್ಯ ಜೀವನ ಆರಂಭಿಸಿದ್ದರು. ಬಹಳ ವರ್ಷಗಳ ಪ್ರೀತಿ ಅಭಿಮಾನಿಗಳ ಮನಗೆದ್ದಿತ್ತು. ಆದರೆ 2021ರಲ್ಲಿ ಪರಸ್ಪರ ಒಪ್ಪಿಗೆಯೊಂದಿಗೆ ಈ ಜೋಡಿ ವಿಚ್ಛೇದನ ಪಡೆಯಿತು. ಸ್ಟಾರ್ ಹೀರೋಯಿನ್ ಸಮಂತಾ ರುತ್ ಪ್ರಭು ಸದ್ಯ ತಮ್ಮ ಆರೋಗ್ಯ ಮತ್ತು ವೃತ್ತಿಜೀನದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ. ನಾಗ ಚೈತನ್ಯ ಅವರು ನವಾರಂಭದ ಖುಷಿಯಲ್ಲಿದ್ದಾರೆ. ಸಾಮಾಜಿಕ ಜಾಳತಾಣದಲ್ಲೀಗ ಮದುವೆಯ ಫೋಟೋ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ನವದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.