'ಫಾರ್ ರಿಜಿಸ್ಟ್ರೇಷನ್' ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ಒಟ್ಟಿಗೆ ನಟಿಸಿರುವ ಈ ಚಿತ್ರದ 'ಕದ್ದ ಕದ್ದ' ಹಾಡನ್ನು ಬಿಡುಗಡೆ ಮಾಡಲಾಗಿದೆ. ನಿರ್ದೇಶಕ ಕಂ ನಟರಾಗಿರುವ ಡಾರ್ಲಿಂಗ್ ಕೃಷ್ಣ ಸಾಂಗ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಹಾಡು ಬಿಡುಗಡೆ ಬಳಿಕ ಮಾತನಾಡಿದ ಡಾರ್ಲಿಂಗ್ ಕೃಷ್ಣ, ಬ್ಯೂಟಿಫುಲ್ ಸಾಂಗ್. ನನಗೆ ತುಂಬಾ ಇಷ್ಟವಾಯಿತು. ಮೇಕಿಂಗ್ ವಿಚಾರವಾಗಿ ಅದ್ಭುತವಾಗಿದೆ. ಪೃಥ್ವಿ ಹಾಗೂ ಮಿಲನಾ ಇಬ್ಬರು ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಸಾಂಗ್ ಔಟ್ ಫುಟ್ ಚೆನ್ನಾಗಿ ಬಂದಿದೆ. ಎಲ್ಲಾ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ಮಿಲನಾ ತುಂಬಾ ಮುದ್ದಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪೃಥ್ವಿ ವಂಡರ್ ಫುಲ್ ಆಕ್ಟರ್. ಇವರಿಬ್ಬರ ಕಾಂಬಿನೇಷನ್ ಕ್ಲಿಕ್ ಆಗುತ್ತದೆ ಎಂದರು.
ನಟಿ ಮಿಲನಾ ನಾಗರಾಜ್ ಮಾತನಾಡಿ, ನೆಲ ಹಾಗೂ ಸ್ನೊ ಮೇಲೆ ಸಾಂಗ್ ಮಾಡಿದ್ದೇವೆ. ಫೂಲ್ ಒಳಗಡೆ ಸಾಂಗ್ ಎಂದಾಗ ಡಿಫರೆಂಟ್ ಇರುತ್ತದೆ ಎಂದು ಎಕ್ಸೈಟ್ ಆಯ್ತು. ಆದರೆ ಸಿಕ್ಕ ಪಟ್ಟೆ ಕಷ್ಟವಾಯಿತು. ಕಾಸ್ಟ್ಯೂಮ್ ಹೇವಿ ಅನಿಸುತಿತ್ತು. ನನ್ನ ಇಷ್ಟು ವರ್ಷದ ಕರಿಯರ್ ನಲ್ಲಿ ಶೂಟಿಂಗ್ ಅಂತಾ ಕಷ್ಟಪಟ್ಟ ದಿನ ಅದು. ಅವತ್ತು ಔಟ್ ಪುಟ್ ಬಗ್ಗೆ ಚಿಂತೆ ಹೋಗಿತ್ತು. ಇವತ್ತು ಔಟ್ ಪುಟ್ ನೋಡ್ತಿದ್ದ ವರ್ತ್ ಅನಿಸುತ್ತದೆ. ಆರ್ಟಿಸ್ಟ್ ಆಗಿ ಎಲ್ಲಾ ಸಾಂಗ್ ಮಾಡುತ್ತಿದ್ದೆವು. ಎಲ್ಲಾ ಸೇಮ್ ಸಾಂಗ್ಸ್ ಮಾಡುತ್ತಿದ್ದೇವು. ಆದರೆ ಇದು ವಿಭಿನ್ನ ಎಂದು ಹೇಳಿದರು.
ನಟ ಪೃಥ್ವಿ ಅಂಬಾರ್ ಮಾತನಾಡಿ, ಸಾಂಗ್ ತುಂಬಾ ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕರು ಫ್ಯಾಷನೇಟೆಡ್ ಪ್ರೊಡ್ಯೂಸರ್. ಸದಾ ಅಭಿರುಚಿ ಸಿನಿಮಾ ಮಾಡಬೇಕು ಅನ್ನೋದು ನನ್ನ ಆಸೆ. ನವೀನ್ ಸರ್ ಐಟಿ ಬ್ಯಾಕ್ ಡ್ರಾಪ್ ನಿಂದ ಬಂದಿರೋದ್ರಿಂದ ಅವರ ಜೊತೆ ಕೆಲಸ ಮಾಡುವ ಟೈಫ್ ಬೇರೆ ಇದೆ. ಪೂರ್ತಿ ಸಿನಿಮಾ ಎಂಜಾಯ್ ಮಾಡಿಕೊಂಡು ಶೂಟ್ ಮಾಡಿದ್ದೇವೆ. ಕದ್ದು ಕದ್ದು ಹಾಡು ಎಲ್ಲರಿಗೂ ಹಾಡು ಇಷ್ಟವಾಗುತ್ತದೆ ಎಂದು ತಿಳಿಸಿದರು.
ನಿರ್ದೇಶಕ ನವೀನ್ ದ್ವಾರಕನಾಥ್ ಮಾತನಾಡಿ, ಕಾಲೇಜ್ ಸಮಯದಲ್ಲಿ ಹಾಡು ಬರೆಯಲು ಯೋಚನೆ ಮಾಡುತ್ತಿದ್ದೇವು. ಆಗ ಸಮಯದಲ್ಲಿ ಬರೆದ ಹಾಡು ಇದು. ಈಗ ಅದನ್ನು ಬಳಸಿಕೊಂಡಿದ್ದೇವೆ. ನಕುಲ್ ಹಾಡಿಗೆ ಬೇರೆ ಆಯಾಮ ಕೊಟ್ಟಿದ್ದಾರೆ. ಪರ್ಫಾಮೆನ್ಸ್ ವಿಚಾರಕ್ಕೆ ಬಂದರೆ. ಯಾವ ರೀತಿ ಮಾಡುವುದು ಅಂದಾಗ ಸುಮಾರು ಐಡಿಯಾ ಬಂತು. ಅಂಡರ್ ವಾಟರ್ ಪ್ಲಾನ್ ಮಾಡಿದ್ದು ಇರ್ಮಾನ್ ಸರ್. ಅವರಿಗೆ ಕ್ರೆಡಿಟ್ ಸಲ್ಲಬೇಕು. ಇದೊಂದು ಒಳ್ಳೆ ಅನುಭವ ಹಾಗೂ ಸಾಹಸ. ಮಿಲನಾ ಮತ್ತು ಪೃಥ್ವಿ ಬೆಂಬಲದಿಂದ ಹಾಡು ಚೆನ್ನಾಗಿ ಬಂದಿದೆ ಎಂದು ತಿಳಿಸಿದರು.
ಕದ್ದ ಕದ್ದ ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ, ಆರ್ ಕೆ ಹರೀಶ್ ಸಂಗೀತ, ನಕುಲ್ ಅಭಯಂಕರ್ ಕಂಠ ದಾನ ಮಾಡಿದ್ದಾರೆ. ಅಂಡರ್ ವಾಟರ್‌ನಲ್ಲಿ ಹಾಡು ಮೂಡಿಬಂದಿದ್ದು, ಇರ್ಮಾನ್ ಸರ್ದಾರಿಯಾ ನೃತ್ಯ ಸಂಯೋಜನೆಯಲ್ಲಿ ಪೃಥ್ವಿ ಹಾಗೂ ಮಿಲನಾ ಹೆಜ್ಜೆ ಹಾಕಿದ್ದಾರೆ. ದ್ವಾರಕನಾಥ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಆರ್.ಕೆ ಹರೀಶ್ ಮತ್ತು ಅಭಿಲಾಷ್ ಕಲಾತಿ ಸಂಗೀತ ಸಂಯೋಜನೆ ಮಾಡಿದ್ದು, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ.ಫಾರ್ ರಿಜಿಸ್ಟ್ರೇಷನ್ ಚಿತ್ರ ಫೆಬ್ರವರಿ 23ಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ.
ಇದನ್ನೂ ಓದಿ: ಸಿನಿಮಾ ಪ್ರೇಮಿಗಳಿಗೆ ಬಂಪರ್ ಆಫರ್ ಕೊಟ್ಟ ರವಿಕೆ ಪ್ರಸಂಗ ಸಿನಿಮಾ ತಂಡ