ETV Bharat / entertainment

'ಗಿಚ್ಚಿ-ಗಿಲಿಗಿಲಿ' ಮತ್ತೆ ಶುರು; ವೀಕ್ಷಕರಿಗೆ ಮನರಂಜನೆಯ ರಸದೌತಣ

Gicchi Gili Gili show: ವೀಕ್ಷಕರಿಗೆ ಮನರಂಜನೆಯ ರಸದೌತಣ ಉಣಬಡಿಸುವ 'ಗಿಚ್ಚಿ-ಗಿಲಿಗಿಲಿ' ಸೀಸನ್​​ 3 ಶನಿವಾರ ಸಂಜೆ ಆರಂಭವಾಗಿದೆ.

Gicchi Gili Gili
'ಗಿಚ್ಚಿ-ಗಿಲಿಗಿಲಿ'
author img

By ETV Bharat Karnataka Team

Published : Feb 4, 2024, 12:18 PM IST

ಬಿಗ್‌ ಬಾಸ್‌ ಸೀಸನ್‌ 10ರ ಯಶಸ್ಸಿನ ನಂತರ ಕಲರ್ಸ್‌ ಕನ್ನಡ ವಾಹಿನಿ ಇದೀಗ ವಾರಾಂತ್ಯದ ಮನರಂಜನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಮುಂದಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಮನೆಮಾತಾಗಿರುವ ಹಾಸ್ಯಗಾರರು ಮತ್ತು ಹಾಸ್ಯಗಾರರಲ್ಲದವರೂ ಜೋಡಿಯಾಗಿ ವೀಕ್ಷಕರನ್ನು ರಂಜಿಸುವ ವಿನೂತನ ಆಲೋಚನೆಯ ಟಿವಿ ಶೋ 'ಗಿಚ್ಚಿಗಿಲಿಗಿಲಿ'. ಎರಡು ಸೂಪರ್‌ ಹಿಟ್‌ ಸೀಸನ್‌ಗಳ ನಂತರ ಇದೀಗ ಮೂರನೇ ಸೀಸನ್ ಫೆಬ್ರವರಿ 3ರಿಂದ ಆರಂಭವಾಗಿದೆ.

ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಈ ಕಾಯಕ್ರಮ ಪ್ರಸಾರವಾಗುತ್ತಿದೆ. ಈ ಹಿಂದೆ ನಟಿ ಶ್ರುತಿ ಹಾಗೂ ಹಾಸ್ಯನಟ ಸಾಧುಕೋಕಿಲ ಶೋನ ತೀರ್ಪುಗಾರರಾಗಿದ್ದರು. ಪ್ರಸ್ತುತ ಇವರಿಬ್ಬರೊಂದಿಗೆ ಮೂರನೇ ತೀರ್ಪುಗಾರರಾಗಿ ಜನಪ್ರಿಯ ಕಾಮಿಡಿ ನಟ ಕೋಮಲ್ ಸೇರಿಕೊಂಡಿದ್ದಾರೆ.

ಹೊಸ ಸೀಸನ್​ನಲ್ಲಿ ಹತ್ತು ಹೊಸ ಜೋಡಿಗಳು ಭಾಗವಹಿಸಲಿದ್ದು, 'ಗಿಚ್ಚಿಗಿಲಿಗಿಲಿ'ಗೆ ಹೊಸ ರಂಗು ತುಂಬಲಿದ್ದಾರೆ. ಬಿಗ್‌ ಬಾಸ್‌ ಗ್ರ್ಯಾಂಡ್‌ ಫಿನಾಲೆಯಲ್ಲಿ ಬಿಗ್‌ ಬಾಸ್‌ ಅಣಕು ಪ್ರದರ್ಶನ ಮಾಡಿ ರಂಜಿಸಿದ್ಧ ಗಿಚ್ಚಿಗಿಲಿಗಿಲಿ ಶೋ ಬಿಗ್‌ ಬಾಸ್‌ ಸಮಯದಲ್ಲೇ ಪ್ರಸಾರವಾಗಲಿದೆ. ವಾಹಿನಿಯ ಅದ್ಭುತ ಕಾಮಿಡಿಯನ್‌ಗಳ ಜೊತೆಗೆ ಬಿಗ್‌ ಬಾಸ್‌ನ ಈ ಸೀಸನ್‌ ಸೇರಿದಂತೆ ವಿವಿಧ ಸೀಸನ್‌ಗಳಲ್ಲಿ ಭಾಗವಹಿಸಿದ್ದ ಹಲವು ಸ್ಪರ್ಧಿಗಳು ಗಿಚ್ಚಿ ಗಿಲಿಗಿಲಿಯಲ್ಲಿ ಭಾಗವಹಿಸಿರುವುದು ಹಲವು ವಿಶೇಷಗಳಲ್ಲಿ ಒಂದು ಎನ್ನುತ್ತಾರೆ ಕಲರ್ಸ್‌ ಕನ್ನಡದ ಬ್ಯುಸಿನೆಸ್‌ ಹೆಡ್‌ ಪ್ರಶಾಂತ್‌ ನಾಯಕ್.

ಈ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತೀರ್ಪುಗಾರರಾದ ಶ್ರುತಿ, ಸಾಧುಕೋಕಿಲ, ಕೋಮಲ್ ಕುಮಾರ್, ಶೋ ನಿರ್ದೇಶಕ ಪ್ರಕಾಶ್, ನಿರ್ಮಾಪಕರಾದ ಶಿವಧ್ವಜ್, ಪ್ರಶಾಂತ್ ರೈ ಹಾಗೂ ನಿರೂಪಕ ನಿರಂಜನ್ ದೇಶಪಾಂಡೆ ಉಪಸ್ಥಿತರಿದ್ದರು.

''ನಾನು ಹಾಸ್ಯ ಕಲಾವಿದ, ನಿರ್ದೇಶಕನಾಗಿ ಎಲ್ಲರಿಗೂ ಪರಿಚಯ. ಆದರೆ "ಕನ್ನಡ ಕೋಗಿಲೆ" ಶೋ ಮೂಲಕ ಎಲ್ಲರಿಗೂ ಸಂಗೀತ ನಿರ್ದೇಶಕ ಎಂದು ಗೊತ್ತಾಯಿತು. ಈಗ ಜನರು ಕಿರುತೆರೆಯನ್ನು ಹೆಚ್ಚಾಗಿ ವೀಕ್ಷಿಸುತ್ತಿದ್ದಾರೆ. "ಗಿಚ್ಚಿ ಗಿಲಿಗಿಲಿ" ಈಗಾಗಲೇ ಎರಡು ಸೀಸನ್ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮೂರನೇ ಸೀಸನ್ ಕೂಡ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ" ಎಂದರು- ಹಾಸ್ಯನಟ ಸಾಧುಕೋಕಿಲ.

"ಗಿಚ್ಚಿ ಗಿಲಿಗಿಲಿ ಶೋ ಮೂಲಕ ಸಾಕಷ್ಟು ಪ್ರತಿಭೆಗಳು ಚಿತ್ರರಂಗಕ್ಕೆ ಸಿಕ್ಕಿದ್ದಾರೆ. ಇಂತಹ ಶೋ ಆಯೋಜಿಸಿರುವ ವಾಹಿನಿಗೆ ನನ್ನ ಧನ್ಯವಾದಗಳು. ಎರಡು ಸೀಸನ್​​ಗಳಿಗೆ ನಾನು ಹಾಗೂ ಸಾಧುಕೋಕಿಲ ಅವರು ತೀರ್ಪುಗಾರರಾಗಿದ್ದೆವು. ಇದೀಗ ನಮ್ಮೊಂದಿಗೆ ಕೋಮಲ್ ಕುಮಾರ್ ಸೇರ್ಪಡೆಯಾಗಿದ್ದಾರೆ''- ನಟಿ ಶ್ರುತಿ.

Gicchi Gili Gili
'ಗಿಚ್ಚಿ-ಗಿಲಿಗಿಲಿ'

ನಾನು ಈ ಹಿಂದೆ ಒಂದು ಕಾಮಿಡಿ ಶೋ ನಿರ್ಮಾಣ ಮಾಡಿದ್ದೆ‌ ಎಂದು ಮಾತು ಆರಂಭಿಸಿದ ಕೋಮಲ್ ಕುಮಾರ್, "ಕಲರ್ಸ್ ವಾಹಿನಿಯ ಅನುಬಂಧ ಅವಾರ್ಡ್ಸ್​​ನಲ್ಲಿ ಸಿಕ್ಕ ಈ ಕಾರ್ಯಕ್ರಮದ ನಿರ್ಮಾಪಕರು "ಗಿಚ್ಚಿ ಗಿಲಿಗಿಲಿ" ಶೋ ಬಗ್ಗೆ ಹೇಳಿದರು. ನಾನು ಕೂಡ ಈ ಶೋ ನೋಡಿದ್ದೇನೆ‌. ಈಗ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಖುಷಿಯಾಗಿದೆ" ಎಂದು ಸಂತಸ ಹಂಚಿಕೊಂಡರು.

ನಾವು ಈ ಹಿಂದೆ "ಮಜಾಭಾರತ" ಎಂಬ ಶೋ ಮಾಡಿದ್ದೆವು. ಈಗ ಎರಡು ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿರುವ "ಗಿಚ್ಚಿ ಗಿಲಿಗಿಲಿ"ಯನ್ನು ನಮ್ಮ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದೇವೆ. ಸಹಕಾರ ನೀಡುತ್ತಿರುವ ವಾಹಿನಿಯವರಿಗೆ, ತೀರ್ಪುಗಾರರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದಗಳು ಎಂದು ನಿರ್ಮಾಪಕರಾದ ಶಿವಧ್ವಜ್ ಹಾಗೂ ಪ್ರಶಾಂತ್ ರೈ ತಿಳಿಸಿದರು. "ಬಿಗ್ ಬಾಸ್" ಸೀಸನ್ 10 ಯಶಸ್ವಿಯಾಗಿ ಮುಕ್ತಾಯವಾಗಿದೆ. ಈಗ ಶನಿವಾರ, ಭಾನುವಾರ ಅದೇ ಸಮಯಕ್ಕೆ "ಗಿಚ್ಚಿ ಗಿಲಿಗಿಲಿ" ಪ್ರಸಾರವಾಗಲಿದೆ. ನಮ್ಮ ಕಾರ್ಯಕ್ರಮಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಪ್ರಕಾಶ್.

ಗಿಚ್ಚಿ ಗಿಲಿಗಿಲಿಯ ಕಾಮಿಡಿಯನ್‌ಗಳು ಈಗಾಗಲೇ ರಾಜ್ಯದ ಎಲ್ಲೆಡೆ ಜನಪ್ರಿಯರಾಗಿದ್ದಾರೆ. ಇವರೊಂದಿಗೆ ಹೊಸ ಹತ್ತು ಸ್ಪರ್ಧಿಗಳೂ ಸೇರಿದ್ದು, ಈ ಸೀಸನ್‌ನಲ್ಲಿ ಕಾಮಿಡಿಯ ಮಹಾಪೂರವೇ ಹರಿದುಬರಲಿದೆ. ಬಿಗ್‌ ಬಾಸ್‌ನ ಫೈನಲಿಸ್ಟ್ ತುಕಾಲಿ ಸಂತೋಷ್‌ ತಮ್ಮ ಪತ್ನಿ ಮಾನಸ ಅವರೊಂದಿಗೆ ಸೇರಿ ಕಾಮಿಡಿ ಮಾಡಲಿದ್ದಾರೆ. ಇವರ ಜೊತೆಗೆ ಬಿಗ್‌ ಬಾಸ್‌ ಸೀಸನ್‌ ಎಂಟರ ವಿಜೇತ, ಮಜಾಭಾರತ, ಕಾಮಿಡಿ ಟಾಕೀಸ್‌ ಮುಂತಾದ ಕಾಯಕ್ರಮಗಳ ಮೂಲಕ ಮಿಂಚಿರುವ ಮಂಜು ಪಾವಗಡ ಒಂದೆರಡು ವರ್ಷಗಳ ಬ್ರೇಕ್‌ನ ನಂತರ ಗಿಚ್ಚಿಗಿಲಿಗಿಲಿಗೆ ಮರಳಿದ್ದಾರೆ. ಬಿಗ್‌ ಬಾಸ್ ಸೀಸನ್‌ ಒಂಭತ್ತರಲ್ಲಿ ರಂಜಿಸಿದ್ದ ಇನ್ನೊಬ್ಬ ಹೆಸರಾಂತ ವ್ಯಕ್ತಿ, ಮಜಾಭಾರತ ಮತ್ತು ಗಿಚ್ಚಿಗಿಲಿ ಕಲಾವಿದ ವಿನೋದ್‌ ಗೊಬ್ಬರಗಾಲ ಇದ್ದೇ ಇರುತ್ತಾರೆ.

ಇದನ್ನೂ ಓದಿ: 'ಹಯಗ್ರೀವ' ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡುತ್ತಿದ್ದೇನೆ: ನಟ ಧನ್ವೀರ್

ಇವರೊಂದಿಗೆ ಈ ಬಾರಿ ಬಿಗ್‌ ಬಾಸ್‌ನಲ್ಲಿದ್ದ ಡ್ರೋಣ್‌ ಪ್ರತಾಪ್‌ ಮತ್ತು ಇಶಾನಿ ಕೂಡಾ ಕಾಮಿಡಿಯಲ್ಲಿ ಒಂದು ಕೈ ನೋಡೇ ಬಿಡೋಣ ಎನ್ನುವ ಹುಮ್ಮಸ್ಸಿನಲ್ಲಿದ್ದಾರೆ. ಬಿಗ್‌ ಬಾಸ್‌ ಸೀಸನ್‌ ನಾಲ್ಕರಲ್ಲೇ ಜನಮನ ಗೆದ್ದಿದ್ದ ಸಂಜನಾ ಚಿದಾನಂದ್‌ ಕೂಡಾ ಹಾಸ್ಯದಲ್ಲಿ ತಾವೇನೂ ಕಮ್ಮಿಯಿಲ್ಲ ಎಂಬಂತೆ ಸ್ಫರ್ಧಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ 'ತಾರಿಣಿ' ನಟಿ ಮಮತಾ ರಾಹುತ್

ಉಳಿದಂತೆ ವಾಹಿನಿಯ ಜನಪ್ರಿಯ ಕಾಮಿಡಿಯನ್‌ಗಳಾದ ಹುಲಿ ಕಾರ್ತಿಕ್‌, ಶಿವು, ಚಿಲ್ಲರ್‌ ಮಂಜು, ಚಂದ್ರಪ್ರಭಾ, ಮಾನಸ, ಪ್ರಶಾಂತ್‌, ನಂದೀಶ್‌ ಮಡಿವಾಳ ಎಂದಿನಂತೆ ವೀಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ. ಕನ್ನಡ ಕೋಗಿಲೆ ಸಂಗೀತ ಕಾರ್ಯಕ್ರಮದಲ್ಲಿ ಜನಪ್ರಿಯರಾಗಿದ್ದ ಹಾಡುಗಾರ ಕರಿಬಸವ, ನನ್ನಮ್ಮ ಸೂಪರ್‌ಸ್ಟಾರ್‌ನ ಪುನೀತಾ, ಮಜಾ ಟಾಕೀಸ್‌ನ ಮೋಹನ್‌, ದೀಕ್ಷಾ, ಖುಷಿ, ಮಧುಮತಿ - ಹೀಗೆ ಮಜರಂಜನೆಯ ರಸದೌತಣ ನೀಡುವಂಥ ತಂಡ ರೆಡಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.