ETV Bharat / entertainment

ವಿನಯ್ ರಾಜಕುಮಾರ್ 'ಒಂದು ಸರಳ ಪ್ರೇಮಕಥೆ'ಗೆ ಸಿಕ್ತು ಗೋಲ್ಡನ್ ಸ್ಟಾರ್ ಸಾಥ್​ - ಗೋಲ್ಡನ್ ಸ್ಟಾರ್ ಗಣೇಶ್

ಸಿಂಪಲ್ ಸುನಿ ಹಾಗೂ ವಿನಯ್ ರಾಜಕುಮಾರ್‌ ಕಾಂಬಿನೇಷನ್ ಬರುತ್ತಿರುವ ''ಒಂದು ಸರಳ ಪ್ರೇಮಕಥೆ'' ಚಿತ್ರದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳು ಫೆ. 8ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದೆ.

Ondu Sarala Prema Katha  ಒಂದು ಸರಳ ಪ್ರೇಮಕಥೆ  ವಿನಯ್ ರಾಜ್ ಕುಮಾರ್  ಗೋಲ್ಡನ್ ಸ್ಟಾರ್ ಗಣೇಶ್  Golden Star Ganesh
ವಿನಯ್ ರಾಜಕುಮಾರ್ 'ಒಂದು ಸರಳ ಪ್ರೇಮಕಥೆ'ಗೆ ಸಿಕ್ತು ಗೋಲ್ಡನ್ ಸ್ಟಾರ್ ಸಾಥ್​
author img

By ETV Bharat Karnataka Team

Published : Jan 20, 2024, 9:27 AM IST

'ಒಂದು ಸರಳ ಪ್ರೇಮ ಕಥೆ' ಕನ್ನಡ ಚಿತ್ರರಂಗದಲ್ಲಿ ಕೆಲ ವಿಷಯಗಳಿಗೆ ಸಿನಿಮಾ ಪ್ರಿಯರಲ್ಲಿ ಕುತೂಹಲ ಮೂಡಿಸಿರೋ ಚಿತ್ರ. ಸಿಂಪಲ್ ಸುನಿ ಹಾಗೂ ವಿನಯ್ ರಾಜಕುಮಾರ್‌ ಮೊದಲ ಕಾಂಬಿನೇಷನ್ ಬರ್ತೀರೋ ಒಂದು ಸರಳ ಪ್ರೇಮ ಕಥೆ ಚಿತ್ರದ ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಅಣಿಯಾಗುತ್ತಿದೆ. ಇದೀಗ ಈ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್ ಸಿಕ್ಕಿದ್ದು, ಚಿತ್ರತಂಡಕ್ಕೆ ಆತ್ಮವಿಶ್ವಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಹೌದು, ಈ ಚಿತ್ರದ 'ಗುನುಗುನುಗು' ಎಂಬ ಮೆಲೋಡಿ ಹಾಡನ್ನು ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ರಿಲೀಸ್ ಮಾಡಿ ದೊಡ್ಮನೆ ಕುಡಿ ವಿನಯ್ ರಾಜಕುಮಾರ್ ಸಿನಿಮಾಗೆ ಸಾಥ್ ನೀಡಿದರು.

ಹಾಡು ಬಿಡುಗಡೆ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್, ''ಹಾಡು ಬಹಳ ಚೆನ್ನಾಗಿದೆ. ಆ ಹುಕ್ ಲೈನ್ ಬಹಳ ಇಷ್ಟವಾಯಿತು. 'ಗುನು ಗುನುಗು' ಅಂತಾ. ನನಗೆ ಈ ರೀತಿ ಸಾಂಗ್ ಕೇಳಲು ಬಹಳ ಇಷ್ಟ. ಇಡೀ ತಂಡಕ್ಕೆ ಆಲ್ ದಿ ಬೆಸ್ಟ್. ವಿನಯ್ ಹಾಗೂ ಹೀರೋಯಿನ್ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಮ್ಯೂಸಿಕ್ ತುಂಬಾ ಚೆನ್ನಾಗಿದೆ. ಅದು ಸಿಂಪಲ್ ಸುನಿ ಅಲ್ಲ, ಕಾಂಪ್ಲಿಕೇಟೇಡ್ ಸುನಿ. ಕಥೆ ಮಾಡುವ ವಿಚಾರದಲ್ಲಿ ಕಂಪ್ಲಿಕೇಷನ್ ಇದೆ. ಸುನಿ ಕಥೆ ಹೇಳಬೇಕಾದರೆ ಸಿಂಪಲ್ ಆಗಿ ಹೇಳ್ತಾರೆ. ಸುನಿ ಅವರ ಜೊತೆ ನನ್ನ ದೊಡ್ಡ ಜರ್ನಿ ಇದೆ. ಚಮಕ್ ಆದ್ಮೇಲೆ ಸಿಕ್ತಾ ಇದ್ದೆವು.

Ondu Sarala Prema Katha  ಒಂದು ಸರಳ ಪ್ರೇಮಕಥೆ  ವಿನಯ್ ರಾಜ್ ಕುಮಾರ್  ಗೋಲ್ಡನ್ ಸ್ಟಾರ್ ಗಣೇಶ  Golden Star Ganesh
ಸಿನಿಮಾದ ನಾಯಕ ವಿನಯ್ ರಾಜಕುಮಾರ್ ಜೊತೆಗೆ ನಾಯಕಿಯರಾದ ಮಲ್ಲಿಕಾ ಸಿಂಗ್, ಸ್ವಾತಿಷ್ಠ ಕೃಷ್ಣನ್

ಯಾವುದಾದರೂ ಲೈನ್ ಬಂದರೆ ಹೇಳುವವರು. ಮೂರ್ನಾಲ್ಕು ಲೈನ್ ಹೇಳಿದಾಗ ಗೊತ್ತಾಯ್ತು ಸಿಂಪಲ್ ಸುನಿ ಅಲ್ಲ ಕಾಂಪ್ಲಿಕೇಟೆಡ್ ಸುನಿ. ಒಂದ್ ಒಂದು ಸಾರಿಗೆ ಒಂದೊಂದು ಐಡಿಯಾ ತರುತ್ತಾರೆ. ಅದೇ ತರ ಈ ಸಿನಿಮಾ ಕೂಡ ವಿಭಿನ್ನವಾಗಿ ಇರುತ್ತದೆ ಅಂದುಕೊಂಡಿದ್ದೇನೆ. ಸುನಿಯ ಡೈಲಾಗ್, ಬರವಣಿಗೆ ಶೈಲಿಗೆ ನಾನು ದೊಡ್ಡ ಅಭಿಮಾನಿ. ಯಾವ ನಿರ್ದೇಶಕನಿಗೆ ಬರವಣಿಗೆ, ಭಾಷೆ ಹಿಡಿತ ಇರುತ್ತದೆಯೋ ಆತನಿಗೆ ತುಂಬಾ ಚೆನ್ನಾಗಿ ಎಲ್ಲಾ ಹೊಳೆಯುತ್ತದೆ. ನಮ್ಮ ಭಾಷೆ, ಅಕ್ಷರ, ವ್ಯಾಕರಣದ ಮೇಲೆ ಹಿಡಿತ ಇರುವ ನಿರ್ದೇಶಕರಲ್ಲಿ ಒಬ್ಬರು ಸುನಿ'' ಅಂತಾ ಗಣೇಶ್ ಹೇಳಿದರು.

ನಟ ವಿನಯ್ ರಾಜಕುಮಾರ್ ಮಾತನಾಡಿ, ''ಗುನು ಗುನುಗು ತುಂಬಾ ಇಷ್ಟವಾದ ಹಾಡು. ವೀರ್ ಸಮರ್ಥ್ ಅವರು ತುಂಬಾ ಚೆನ್ನಾಗಿ ಮ್ಯೂಸಿಕ್ ಮಾಡಿದ್ದಾರೆ. ಸಚಿನ್ ಅವರು ತುಂಬಾ ಚೆನ್ನಾಗಿ ಬರೆದಿದ್ದಾರೆ. ಇದೊಂದೇ ಕೊರಿಯೋಗ್ರಾಫ್ ಸಾಂಗ್ ಈ ಚಿತ್ರದಲ್ಲಿ ಇರುವುದು. ಇಡೀ ಟೀಂಗೆ ಧನ್ಯವಾದ. ಈ ಬಾರಿ ಫೈಟ್ ಇಲ್ಲ, ಬರೀ ಪ್ರೀತಿ. ಒಂದು ಸರಳ ಪ್ರೇಮಕಥೆ ಚಿತ್ರ ನೋಡಿ. ನೆಕ್ಸ್ಟ್ ಆಕ್ಷನ್ ನೋಡಿ.‌ ನನ್ನದು ಅತಿಷಯ ಎಂಬ ಪಾತ್ರ. ಚಿಕ್ಕಪೇಟೆಯಲ್ಲಿ ಇಡೀ ಕುಟುಂಬ ಕಥೆ. ಈ ಕಥೆಯನ್ನು ಸುನಿ ಅವರು ತುಂಬಾ ಸರಳವಾಗಿ ಹೇಳಿದ್ದಾರೆ'' ಎಂದರು.

ಗೋಲ್ಡನ್ ಸ್ಟಾರ್ ಗಣೇಶ ಜೊತೆಗೆ ಒಂದು ಸರಳ ಪ್ರೇಮಕಥೆ ಚಿತ್ರ ತಂಡ

''ನಿರ್ಮಾಪಕರಾದ ರಮೇಶ್ ಸರ್ ಸಿನಿಮಾಗೆ ಏನ್​ ಬೇಕೋ ಎಲ್ಲಾ ಕೊಟ್ಟಿದ್ದಾರೆ‌. ಪಾತ್ರಕ್ಕೆ ಏನ್​ ಬೇಕೋ ಅದೆಲ್ಲವನ್ನೂ ವಿನಯ್ ಅವರು ಕಲಿತಿದ್ದಾರೆ. ಸ್ವಾತಿಷ್ಟ, ಮಲ್ಲಿಕಾ ಇಬ್ಬರು ಅದ್ಭುತವಾಗಿ ನಟಿಸಿದ್ದಾರೆ. ಸಚಿನ್ ಅದ್ಭುತವಾಗಿ ಹಾಡು ಬರೆದಿದ್ದಾನೆ. ವೀರ ಸಮರ್ಥ್ ಸರ್ ಫರ್ಪೆಕ್ಟ್ ಟೈಮ್​ಗೆ ಡಿಲಿವರಿ ಮಾಡುವವರು. ಯಾವಾಗಲೂ ಕೀ ಬೋರ್ಡ್ ಮುಂದೆ ಕುಳಿತಿರುತ್ತಾರೆ. ಸಿನಿಮಾ ನೋಡಿದ ನಂತರ ಅವರ ಸ್ಟ್ರೆಂಥ್ ಏನ್​ ಅನ್ನೋದು ಗೊತ್ತಾಗುತ್ತದೆ'' ಎನ್ನುತ್ತಾರೆ ನಿರ್ದೇಶಕ ಸಿಂಪಲ್ ಸುನಿ.

''ಸುನಿ ಸರ್ ನನ್ನ ಈ ಚಿತ್ರಕ್ಕೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ರಮೇಶ್ ಸರ್ ಅಂತಾ ಪ್ರೊಡ್ಯೂಸರ್ ಎಲ್ಲಾ ಆರ್ಟಿಸ್ಟ್​ಗೆ ಸಿಗಬೇಕು. ತುಂಬಾ ಫ್ರೆಂಡ್ಲಿ. ವಿನಯ್ ಅವರ ಬಗ್ಗೆ ತುಂಬಾ ಹೇಳಬೇಕಿದೆ. ಮುಂದಿನ ಇವೆಂಟ್​ನಲ್ಲಿ ಒಂದೊಂದಾಗಿ ಹೇಳುತ್ತೇ‌ನೆ. ನನಗೆ ಒಳ್ಳೆಯ ಕೋ ಆರ್ಟಿಸ್ಟ್. ನಿಮ್ಮ ಜೊತೆ ನಟಿಸಲು ಮತ್ತಷ್ಟು ಅವಕಾಶಗಳು ಸಿಗಲಿ. ಟೆಕ್ನಿಷಿಯನ್ಸ್ ತುಂಬಾ ಫ್ರೆಂಡ್ಲಿಯಾಗಿ ಟ್ರೀಟ್ ಮಾಡಿದರು. ಇದು ನನ್ನ ಎರಡನೇ ಮೂವೀ. ಅನುರಾಧಾ ಪಾತ್ರ ನಿಮಗೆ ಇಷ್ಟ ಆಗುತ್ತದೆ'' ಎಂದು ಹೇಳುತ್ತಾರೆ ನಾಯಕಿ ಸ್ವಾತಿಷ್ಠ ಕೃಷ್ಣನ್.

ಒಂದು ಸರಳ ಪ್ರೇಮಕಥೆ ಚಿತ್ರ ತಂಡದೊಂದಿಗೆ ಗೋಲ್ಡನ್ ಸ್ಟಾರ್ ಗಣೇಶ್

ಈ ಚಿತ್ರದ ಮತ್ತೊಬ್ಬ ನಾಯಕಿ ಮಲ್ಲಿಕಾ ಸಿಂಗ್ ಮಾತನಾಡಿ, ''ಈ ಅದ್ಭುತ ಪ್ರಾಜೆಕ್ಟ್ ಭಾಗವಾಗಿದ್ದಕ್ಕೆ ಖುಷಿ ಇದೆ. ಮೊದಲು ಈ ಪ್ರಾಜೆಕ್ಟ್​ನಲ್ಲಿ ನಟಿಸುವಾಗ ಭಯವಾಗಿತ್ತು. ಆ ನಂತರ ಎಲ್ಲಾ ಸುಲಭವಾಗಿ ಆಯ್ತು. ನಿಮಗೆ ಈ ಚಿತ್ರ ಇಷ್ಟವಾಗುತ್ತದೆ'' ಎಂದರು.

ಗುನುಗುನುಗು ಹಾಡಿಗೆ ಸಚಿನ್ ಸಂಘೈ ಸಾಹಿತ್ಯ ಬರೆದಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನವಿದ್ದು, ಕೇಶವ್ ಆನಂದ್ ಧ್ವನಿಯಾಗಿದ್ದಾರೆ. ವಿನಯ್ ರಾಜಕುಮಾರ್ ಹಾಗೂ ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸ್ವಾತಿಷ್ಠ ಕೃಷ್ಣನ್ ಮತ್ತೊಬ್ಬ ನಾಯಕಿಯಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜಕುಮಾರ್​ ಸ್ಪೆಷಲ್ ರೋಲ್​ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮೆರಾ ಶ್ರಮವಿದೆ.

ಚಿತ್ರತಂಡದ ಜೊತೆಗೆ ಗೋಲ್ಡನ್ ಸ್ಟಾರ್ ಗಣೇಶ್

ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆದವರು. ಇದೀಗ ಅವರು 'ಒಂದು ಸರಳ ಪ್ರೇಮಕಥೆ' ಹೇಳೋದಿಕ್ಕೆ ಬರ್ತಿದ್ದಾರೆ. ರಾಮ್ ಮೂವೀಸ್ ಬ್ಯಾನರ್ ನಡಿ ಮೈಸೂರು ರಮೇಶ್ ಬಂಡವಾಳ ಹೂಡಿದ್ದಾರೆ. ಮುಂದಿನ ತಿಂಗಳು ಫೆ. 8ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಇದನ್ನೂ ಓದಿ: 'ಅಪ್ಪಾ ಐ ಲವ್ ಯೂ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.