ETV Bharat / entertainment

ಶಿವಣ್ಣ, ಉಪ್ಪಿ, ರಾಜ್​ ಶೆಟ್ರ '45' ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು - 45 KANNADA FILM

ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ '45' ಚಿತ್ರತಂಡದಲ್ಲಿ 'MARZ' ವಿ ಎಫ್ ಎಕ್ಸ್ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.

Hollywood technicians in '45' movie
'45' ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು (Photo: ETV Bharat)
author img

By ETV Bharat Entertainment Team

Published : Dec 6, 2024, 3:46 PM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆ, ಸದಭಿರುಚಿಯ ಸಿನಿಮಾಗಳನ್ನು ನಿರ್ಮಿಸುವ ಮೂಲಕ ಫ್ಯಾಷನೇಟ್​​ ಪ್ರೊಡ್ಯೂಸರ್​ ಎಂಬ ಖ್ಯಾತಿಗೆ ಪಾತ್ರರಾದವರು ನಿರ್ಮಾಪಕ ರಮೇಶ್ ರೆಡ್ಡಿ. ಸದ್ಯ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ಜೊತೆ ನಿರ್ಮಾಪಕ ರೆಡ್ಡಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಬಹುನಿರೀಕ್ಷಿತ ಚಿತ್ರಕ್ಕೆ '45' ಎಂಬ ವಿಭಿನ್ನ ಟೈಟಲ್ ಇಡಲಾಗಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಾಗಿದೆ ಚಿತ್ರತಂಡ‌. ಈ ಮಧ್ಯೆ ತಂಡದಿಂದ ಹೊಸ ಅಪ್ಡೇಟ್‌ ಸಿಕ್ಕಿದೆ.

ಈಗಾಗಲೇ '45' ಚಿತ್ರತಂಡ ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರ ಫಸ್ಟ್ ಲುಕ್​ಗಳನ್ನು ಅನಾವರಣಗೊಳಿಸುವ ಮೂಲಕ ಇಬ್ಬರು ಸ್ಟಾರ್ ನಟರ ಅಭಿಮಾನಿ ಬಳಗದಲ್ಲಿ ಕುತೂಹಲ ಹುಟ್ಟಿಸಿದೆ‌. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಚಿತ್ರಕ್ಕೆ ಹಾಲಿವುಡ್​​ನ 150ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ, ಆಸ್ಕರ್​ಗೆ ನಾಮಿನೇಟ್ ಆಗಿದ್ದ ಟೊರೊಂಟೋದ 'MARZ' ವಿ ಎಫ್ ಎಕ್ಸ್ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.

ಈ ಖ್ಯಾತ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ ಕನ್ನಡದ ಮೊದಲ ಚಿತ್ರ '45'. 'MARZ' ಸಂಸ್ಥೆಯ ತಂತ್ರಜ್ಞರಾದ ಮಿಸ್ಟರ್ ರಾಫೆಲ್ ಹಾಗೂ ಮಿಸ್ಟರ್ ಜಸ್ಟಿನ್ ಅವರ ನೇತೃತ್ವದಲ್ಲಿ ಗ್ರಾಫಿಕ್ಸ್ ಕಾರ್ಯ ನಡೆಯುತ್ತಿದೆ. ಇತ್ತೀಚಿಗೆ '45' ಚಿತ್ರದ ಗ್ರಾಫಿಕ್ಸ್ ಕೆಲಸದ ನಿಮಿತ್ತವಾಗಿ 'MARZ' ವಿ ಎಫ್ ಎಕ್ಸ್ ಕಂಪನಿಗೆ ಭೇಟಿ ನೀಡಿದ ಚಿತ್ರಗಳನ್ನು ನಿರ್ದೇಶಕ ಅರ್ಜುನ್ ಜನ್ಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Watch: ಶ್ರೀಶೈಲಂನಲ್ಲಿ ನಾಗಚೈತನ್ಯ ಶೋಭಿತಾ; ಮದುವೆ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ದಂಪತಿ

ನಟರಾದ ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ '45' ಚಿತ್ರದ ನಾಯಕಿಯಾಗಿ ಕೌಸ್ತುಭ ಮಣಿ ಅಭಿನಯಿಸುತ್ತಿದ್ದಾರೆ‌.

Hollywood technicians in '45' movie
'45' ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು (Photo: ETV Bharat)

ಇದನ್ನೂ ಓದಿ: ವದಂತಿ.. ಅದು ವದಂತಿಯಷ್ಟೇ! ಡಿವೋರ್ಸ್ ರೂಮರ್ಸ್​ ನಡುವೆ ಜೊತೆಯಾಗಿ ಕಾಣಿಸಿಕೊಂಡ ಐಶ್ವರ್ಯಾ ಅಭಿಷೇಕ್​

ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಅರ್ಜುನ್ ಜನ್ಯ ಈ ಸಿನಿಮಾವಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೂಲಕ ನಿರ್ದೇಶಕನಾಗಿಯೂ ಹೊರ ಹೊಮ್ಮಲಿದ್ದಾರೆ. ಆ್ಯಕ್ಷನ್ ಥ್ರಿಲ್ಲರ್ ಕಥೆಯಾಗಿರೋ '45' ಸಿನಿಮಾಗೆ ಸತ್ಯ ಹೆಗಡೆ ಅವರ ಕ್ಯಾಮರಾ ಕೈಚಳಕವಿದ್ದು, ಸ್ಟಂಟ್ ಮಾಸ್ಟರ್ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಅದ್ದೂರಿ ವೆಚ್ಚದಲ್ಲಿ ಸೂರಜ್ ಪ್ರೊಡಕ್ಷನ್ ಅಡಿ ನಿರ್ಮಾಪಕ ಎಂ.ರಮೇಶ್ ರೆಡ್ಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹೊಸ ವರ್ಷಕ್ಕೆ 45 ಪ್ರೇಕ್ಷಕರ ಮುಂದೆ ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.