ETV Bharat / entertainment

ಯುವ ಸಕ್ಸಸ್ ಮೀಟ್: ಮೊದಲ ಚಿತ್ರದಲ್ಲಿನ ಸಣ್ಣಪುಟ್ಟ ತಪ್ಪುಗಳನ್ನ ಮುಂದೆ ಸರಿ ಪಡಿಸಿಕೊಳ್ಳುತ್ತೇನೆಂದ ಯುವರಾಜ್ ಕುಮಾರ್ - Yuva success Meet - YUVA SUCCESS MEET

ಯುವ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಯುವ ಚಿತ್ರತಂಡ ಮಾಧ್ಯಮಗೋಷ್ಠಿ ಕರೆದು ಈ ಯಶಸ್ಸಿನ ಸಂಭ್ರಮ ಹಂಚಿಕೊಂಡಿದೆ.

ಯುವ ಸಕ್ಸಸ್ ಮೀಟ್
ಯುವ ಸಕ್ಸಸ್ ಮೀಟ್
author img

By ETV Bharat Karnataka Team

Published : Apr 15, 2024, 10:06 AM IST

ದೊಡ್ಮನೆ ಕುಡಿ ಯುವ ರಾಜ್ ಕುಮಾರ್ ಅಭಿನಯದ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ 'ಯುವ' ಚಿತ್ರ ಬಿಡುಗಡೆ ಆಗಿ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಲೋಕಸಭಾ ಎಲೆಕ್ಷನ್, ಐಪಿಎಲ್ ಕ್ರಿಕೆಟ್ ಪಂದ್ಯಗಳ ನಡುವೆಯ ಯುವ ಸಿನಿಮಾ ಚಿತ್ರಮಂದಿರಗಳತ್ತ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಮಾರ್ಚ್ 29 ರಂದು ಯುವ ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ನಿರ್ಮಾಣ ಸಂಸ್ಥೆಯ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಯುವ ಚಿತ್ರತಂಡ ಮಾಧ್ಯಮಗೋಷ್ಠಿ ಕರೆದು ಈ ಚಿತ್ರದ ರೆಸ್ಪಾನ್ಸ್ ಬಗ್ಗೆ ಹಂಚಿಕೊಂಡಿತ್ತು.

ಯುವ ಸಕ್ಸಸ್ ಮೀಟ್
ಯುವ ಸಕ್ಸಸ್ ಮೀಟ್

ಮೊದಲು ಮಾತನಾಡಿದ ನಿರ್ದೇಶಕ ಸಂತೋಷ್ ಆನಂದರಾಮ್, ರಾಜ್ಯದ ಜನತೆ ಯುವ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು.

ಯುವ ಸಕ್ಸಸ್ ಮೀಟ್
ಯುವ ಸಕ್ಸಸ್ ಮೀಟ್

ಇನ್ನು ಯುವ ಚಿತ್ರದಲ್ಲಿ ತಂದೆ ಪಾತ್ರ ಮಾಡಿರೋ ಅಚ್ಯುತ್ ಕುಮಾರ್ ಮಾತನಾಡಿ, ನನಗೆ ಆ್ಯಕ್ಟಿಂಗ್ ಮಾಡೋದು ಕಷ್ಟ. ಈ ಚಿತ್ರದ ಪಾತ್ರ ನನಗೆ ತೃಪ್ತಿ ಇದೆ ಅಂದರು. ಹಾಗೇ ತಾಯಿ ಪಾತ್ರ ಮಾಡಿದ ಸುಧಾರಾಣಿ ಮಾತನಾಡಿ, ನನಗೆ ಈ ಚಿತ್ರದಲ್ಲಿ ಅಭಿನಯಿಸಿದ್ದು ಖುಷಿ ಇದೆ. ಯಾಕೆಂದರೆ ಇಲ್ಲಿ ಡೈಲಾಗ್ ಇಲ್ಲದೇ ಕಣ್ಣಿನಲ್ಲೇ ನಟಿಸೋ ಚಾಲೆಂಜಿಂಗ್ ಇತ್ತು ಎಂದು ತಿಳಿಸಿದರು.

ಯುವ ಸಕ್ಸಸ್ ಮೀಟ್
ಯುವ ಸಕ್ಸಸ್ ಮೀಟ್

ಇದನ್ನೂ ಓದಿ: 'ಅಪ್ಪನೂ ಹೋದ್ರು, ಅಪ್ಪುನೂ ಹೋಗಿಬಿಟ್ಟ; ನಾವು ಅನಾಥ ಪ್ರಜ್ಞೆಯಲ್ಲಿದ್ದೀವಿ': ರಾಘವೇಂದ್ರ ರಾಜ್‌ಕುಮಾರ್ - Raghavendra Rajkumar

ಇನ್ನು ಚೊಚ್ಚಲ ಚಿತ್ರದಲ್ಲಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿರುವ ಯುವ ರಾಜ್ ಕುಮಾರ್ ಮಾತನಾಡಿ, ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ. ಪ್ರಥಮವಾಗಿ ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

ಬಳಿಕ ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಮಾತನಾಡಿ, ನನ್ನ ಮಗನ ಮೊದಲ ಚಿತ್ರವನ್ನು ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್​​ಗೆ ಸೀಮಿತ ಮಾಡದೇ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಕ್ಸಸ್ ಖುಷಿಯಲ್ಲಿ ನಟ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ: 2ನೇ ವಿವಾಹ ವಾರ್ಷಿಕೋತ್ಸವದಂದು ಪತಿಯೊಂದಿಗಿನ ರೋಮ್ಯಾಂಟಿಕ್ ಫೋಟೋ ಹಂಚಿಕೊಂಡ ಆಲಿಯಾ ಭಟ್ - Alia Bhatt Shares Enduring Photo

ETV Bharat Logo

Copyright © 2025 Ushodaya Enterprises Pvt. Ltd., All Rights Reserved.