ಚೆನ್ನೈ(ತಮಿಳುನಾಡು): ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಹಿನ್ನೆಲೆ ಗಾಯಕಿ ಭವತಾರಿಣಿ(47) ಕ್ಯಾನ್ಸರ್‌ನಿಂದ ಗುರುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಯಕೃತ್ತಿನ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಇವರು ಸೂಕ್ತ ಚಿಕಿತ್ಸೆಗಾಗಿ ಶ್ರೀಲಂಕಾದಲ್ಲಿದ್ದರು.
ಭವತಾರಿಣಿ ಅವರ ಪಾರ್ಥಿವ ಶರೀರವನ್ನು ಇಂದು (ಶುಕ್ರವಾರ, ಜನವರಿ 26) ಚೆನ್ನೈಗೆ ತರಲಾಗುವುದು. ಅಂತಿಮ ವಿಧಿವಿಧಾನಕ್ಕೆ ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಭವತಾರಿಣಿ ಪತಿ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
ಭವತಾರಿಣಿ 'ಭಾರತಿ' ಚಿತ್ರದ 'ಮಾಯಿಲ್ ಪೋಲ ಪೊನ್ನು ಒನ್ನು' ಗೀತೆಗಾಗಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದರು. ಹಲವು ಸಿನಿಮಾಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಮನರಂಜನಾ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು.
ಇದನ್ನೂ ಓದಿ: ಚಿರಂಜೀವಿಗೆ 'ಪದ್ಮವಿಭೂಷಣ': ಧನ್ಯವಾದ ಅರ್ಪಿಸಿದ ಮೆಗಾಸ್ಟಾರ್
-
மனம் பதைக்கிறது. அருமைச் சகோதரர் இளையராஜாவைத் தேற்ற என்ன செய்வதென்று தெரியவில்லை. அவர் கைகளை மானசீகமாகப் பற்றிக்கொள்கிறேன். பவதாரிணியின் மறைவு பொறுத்துக்கொள்ளவோ ஏற்றுக்கொள்ளவோ முடியாத ஒன்று. இந்தப் பெருந்துயரில் என் சகோதரர் இளையராஜா மனதை இழக்காதிருக்க வேண்டும். பவதாரிணியின்…
— Kamal Haasan (@ikamalhaasan) January 26, 2024 " class="align-text-top noRightClick twitterSection" data="
">மனம் பதைக்கிறது. அருமைச் சகோதரர் இளையராஜாவைத் தேற்ற என்ன செய்வதென்று தெரியவில்லை. அவர் கைகளை மானசீகமாகப் பற்றிக்கொள்கிறேன். பவதாரிணியின் மறைவு பொறுத்துக்கொள்ளவோ ஏற்றுக்கொள்ளவோ முடியாத ஒன்று. இந்தப் பெருந்துயரில் என் சகோதரர் இளையராஜா மனதை இழக்காதிருக்க வேண்டும். பவதாரிணியின்…
— Kamal Haasan (@ikamalhaasan) January 26, 2024மனம் பதைக்கிறது. அருமைச் சகோதரர் இளையராஜாவைத் தேற்ற என்ன செய்வதென்று தெரியவில்லை. அவர் கைகளை மானசீகமாகப் பற்றிக்கொள்கிறேன். பவதாரிணியின் மறைவு பொறுத்துக்கொள்ளவோ ஏற்றுக்கொள்ளவோ முடியாத ஒன்று. இந்தப் பெருந்துயரில் என் சகோதரர் இளையராஜா மனதை இழக்காதிருக்க வேண்டும். பவதாரிணியின்…
— Kamal Haasan (@ikamalhaasan) January 26, 2024
ಕಮಲ್ ಹಾಸನ್ ಸಂತಾಪ: ''ಆತ್ಮೀಯ ಸಹೋದರ ಇಳಯರಾಜ ಅವರಿಗೆ ಏನು ಹೇಳಬೇಕೆಂದು ತಿಳಿಯುತ್ತಿಲ್ಲ. ನಾನು ಅವರ ಕೈಗಳನ್ನು ಮಾನಸಿಕವಾಗಿ ಹಿಡಿಯುತ್ತೇನೆ. ಈ ಸುದ್ದಿಯನ್ನು ಸಹಿಸಲಾಗದು, ಒಪ್ಪಲಾಗದು. ಈ ಕಠಿಣ ಸಂದರ್ಭದಲ್ಲಿ ಇಳಯರಾಜ ಅವರು ಎದೆಗುಂದಬಾರದು. ಭವತಾರಿಣಿಯವರ ಕುಟುಂಬಕ್ಕೆ ನನ್ನ ಸಂತಾಪಗಳು'' ಎಂದು ಎಕ್ಸ್ ಪೋಸ್ಟ್ ಮೂಲಕ ಹಿರಿಯ ನಟ ಕಮಲ್ ಹಾಸನ್ ಸಂತಾಪ ಸೂಚಿಸಿದ್ದಾರೆ. ಅಭಿಮಾನಿಗಳೂ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: 'ಶೈತಾನ್' ಟೀಸರ್ ರಿಲೀಸ್: ಸೂಪರ್ ನ್ಯಾಚುರಲ್ ಥ್ರಿಲ್ಲರ್ ಸಿನಿಮಾ ವೀಕ್ಷಿಸುವ ಕಾತುರ