ETV Bharat / entertainment

ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಬಿಡುಗಡೆಗೆ ಮುಹೂರ್ತ ಫಿಕ್ಸ್ - Gowri Movie - GOWRI MOVIE

ರಾಜಾಜಿನಗರದ ವಿದ್ಯಾವಿಹಾರ ಎಂಇಎಸ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಇಂದ್ರಜಿತ್​ ಲಂಕೇಶ್​ ಅವರ 'ಗೌರಿ' ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲಾಯಿತು.

Gowri Movie team
ಗೌರಿ ಸಿನಿಮಾ ತಂಡ (ETV Bharat)
author img

By ETV Bharat Karnataka Team

Published : Jul 1, 2024, 11:17 AM IST

ಅದ್ಧೂರಿ ಮೇಕಿಂಗ್ ಹಾಗೂ ಸ್ಟೈಲಿಷ್ ಸಿನಿಮಾಗಳಿಂದಲೇ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೊಂದಿರುವ ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್. ಸದ್ಯ ಗೌರಿ ಚಿತ್ರದ ಮೂಲಕ ಪುತ್ರ ಸಮರ್ಜಿತ್ ಲಂಕೇಶ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಟೀಸರ್ ಹಾಗು ಹಾಡುಗಳಿಂದಲೇ ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿರುವ ಗೌರಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.

ಚಿತ್ರದ ಟೀಸರ್ ನೋಡಿದವರು ಇದೊಂದು ಆ್ಯಕ್ಷನ್‍ ಸಿನಿಮಾ ಅಂತಾ ಅಂದುಕೊಂಡಿದ್ದಾರೆ. ಆದರೆ ಗೌರಿ ಆ್ಯಕ್ಷನ್‍ ಚಿತ್ರವಲ್ಲ, ಮ್ಯೂಸಿಕಲ್ ಸಿನಿಮಾ. ಇದರಲ್ಲಿ ಪ್ರೀತಿ, ಎಮೋಷನ್, ಭರ್ಜರಿ ಆ್ಯಕ್ಷನ್‌ ಇದೆ. ಏಳು ಹಾಡುಗಳಿದ್ದು, ಕಥೆಗೆ ತಕ್ಕಂತೆ ಹೆಣೆಯಲಾಗಿದೆ. 4 ಜನ ಸಂಗೀತ ನಿರ್ದೇಶಕರು, 14 ಗಾಯಕರು, ಐವರು ಗೀತರಚನೆಕಾರರು ಕೆಲಸ ಮಾಡಿದ್ದಾರೆ.

Samrjith Lankesh, Saniya Ayyar and Indrajitj Lankesh
ಸಮರ್ಜಿತ್​ ಲಂಕೇಶ್​, ಸಾನ್ಯಾ ಅಯ್ಯರ್​ ಹಾಗೂ ಇಂದ್ರಜಿತ್​ ಲಂಕೇಶ್​ (ETV Bharat)

ಗೌರಿ ಚಿತ್ರಕ್ಕೆ ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಭೇರ್ಗಿ ಹಾಗೂ ಅನಿರುದ್ಧ್​ ಶಾಸ್ತ್ರಿ ಸಂಗೀತ ಸಂಯೋಜಿಸಿದರೆ, ಮ್ಯಾಥ್ಯೂಸ್ ಮನು ರೀ ರೆಕಾರ್ಡಿಂಗ್ ಮಾಡಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ.ಕಲ್ಯಾಣ್, ವರದರಾಜ್ ಚಿಕ್ಕಬಳ್ಳಾಪುರ, ಗುಬ್ಬಿ ಹಾಡುಗಳನ್ನು ರಚಿಸಿದ್ದಾರೆ. ಕೈಲಾಶ್ ಖೇರ್, ಚಂದನ್ ಶೆಟ್ಟಿ, ಅನಿರುದ್ಧ್​ ಶಾಸ್ತ್ರಿ, ಜಾವೇದ್ ಅಲಿ, ಅನನ್ಯ ಭಟ್, ನಿಹಾಲ್ ತೌರೋ, ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ, ಪ್ರಜ್ಞಾ ಮರಾಠೆ, ಸಮರ್ಜಿತ್ ಮುಂತಾದವರು ಹಾಡುಗಳನ್ನು ಹಾಡಿದ್ದಾರೆ.

ಸಮರ್ಜಿತ್‍ ಲಂಕೇಶ್‍ ಜೊತೆ ಸಾನ್ಯಾ ಅಯ್ಯರ್ ಸ್ಕ್ರೀನ್ ಹಂಚಿಕೊಂಡಿದ್ದಾರೆ. ಇವರೊಂದಿಗೆ ನೀನಾಸಂ ಅಶ್ವಥ್, ಮಾನಸೀ ಸುಧೀರ್, ಸಂಪತ್‍ ಮೈತ್ರೇಯಾ ಸೇರಿದಂತೆ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ. ಎ.ಜೆ.ಶೆಟ್ಟಿ ಹಾಗೂ ಕೃಷ್ಣಕುಮಾರ್​ ಛಾಯಾಗ್ರಹಣ ಮಾಡಿದ್ದಾರೆ. ಮಾಸ್ತಿ ಮಂಜು, ರಾಜಶೇಖರ್ ಹಾಗೂ ಮಧು ಸಂಭಾಷಣೆ ಬರೆದಿದ್ದಾರೆ. ರವಿವರ್ಮ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ.

Samarjith Lankesh
ಸಮರ್ಜಿತ್​ ಲಂಕೇಶ್​ (ETV Bharat)

ಇಂದ್ರಜಿತ್ ಲಂಕೇಶ್ ಮಾತನಾಡಿ, "ನಮ್ಮ ಗೌರಿ ಚಿತ್ರತಂಡ ಕರ್ನಾಟಕದಾದ್ಯಂತ ಸಂಚಾರ ಮಾಡುತ್ತಿದೆ. ಆ ಊರಿನ ಮಾಧ್ಯಮದವರು ಹಾಗೂ ಅಭಿಮಾನಿಗಳು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನತುಂಬಿ ಬಂದಿದೆ. ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ ಗೌರಿ ಆಗಸ್ಟ್ 15 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ವರಮಹಾಲಕ್ಷ್ಮೀ, ಸ್ವತಂತ್ರ ದಿನಾಚರಣೆ, ರಕ್ಷಾ ಬಂಧನ ಹೀಗೆ ಸಾಲುಸಾಲು ರಜೆ ದಿನಗಳು ಆ ಸಮಯದಲ್ಲಿವೆ. ಹಾಗಾಗಿ ಆಗಸ್ಟ್ 15 ದಿನಾಂಕ ಆಯ್ಕೆ ಮಾಡಿಕೊಂಡಿದ್ದೇವೆ‌. ಒಬ್ಬ ಪ್ರೇಕ್ಷಕನಾಗಿ ಸಿನಿಮಾ ನೋಡಿದಾಗ ನನಗೆ ಬಹಳ ಇಷ್ಟವಾಯಿತು. ಪ್ರೇಕ್ಷಕರಿಗೂ ನಮ್ಮ ಚಿತ್ರ ಮೆಚ್ಚುಗೆಯಾಗಲಿದೆ" ಎಂದರು.

ಸಮರ್ಜಿತ್​ ಲಂಕೇಶ್​ ಮಾತನಾಡಿ, "ಅಪ್ಪ ಹೇಳಿದ ಹಾಗೆ ಹೋದ ಕಡೆಯಲೆಲ್ಲಾ ನಮ್ಮ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ‌. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಹಲವು ವರ್ಷಗಳ ಶ್ರಮಕ್ಕೆ ಉತ್ತರ ಸಿಗುವ ದಿನ ಹತ್ತಿರ ಬಂದಿದೆ" ಎಂದು ಹೇಳಿದರು.

Gowri Movie team
ಗೌರಿ ಸಿನಿಮಾ ತಂಡ (ETV Bharat)

ಯುವ ನಟಿ ಸಾನ್ಯಾ ಅಯ್ಯರ್ ಮಾತನಾಡಿ, "ಆಗಸ್ಟ್ 15 ನನ್ನ ಕನಸು ನನಸಾಗುವ ದಿನ. ಈ ದಿನಕ್ಕಾಗಿ ಕಾಯುತ್ತಿದ್ದೇನೆ. ಗೌರಿ ಸಿನಿಮಾ ಕಂಟೆಂಟ್ ನೋಡ್ತಿದ್ರೆ ಈ ವರ್ಷದ ಹಿಟ್ ಸಿನಿಮಾ ಆಗುವ ಸೂಚನೆ ಸಿಗ್ತಾ ಇದೆ" ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜುಲೈ 19ರಂದು ರಾಜ್ಯಾದ್ಯಂತ 'ಬ್ಯಾಕ್ ಬೆಂಚರ್ಸ್' ತೆರೆಗೆ - Backbenchers

ETV Bharat Logo

Copyright © 2024 Ushodaya Enterprises Pvt. Ltd., All Rights Reserved.