ಕನ್ನಡ ಚಿತ್ರರಂಗದಲ್ಲಿ ಟೈಟಲ್ ಜೊತೆಗೆ ಕಂಟೆಂಟ್ನಿಂದಾಗಿ ಕುತೂಹಲ ಹುಟ್ಟಿಸಿರೋ ಚಿತ್ರ 'ಕೈಲಾಸ ಕಾಸಿದ್ರೆ'. ತಾರಕಾಸುರ ಚಿತ್ರದ ಮೂಲಕ ಭರವಸೆ ಹುಟ್ಟಿಸಿರೋ ಯುವ ನಟ ರವಿ ಈ ಬಾರಿ ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರೆದುರು ಬರುತ್ತಿದ್ದಾರೆ. ನಾಗ್ ವೆಂಕಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಯುವ ಜನಾಂಗದ ಕಥೆಯನ್ನೊಳಗೊಂಡಿದೆ. ಹಾಡುಗಳ ಮೂಲಕ ಹಂತ ಹಂತವಾಗಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿರುವ ಈ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಸದ್ಯ ರಿವೀಲ್ ಆಗಿರುವ ಟ್ರೇಲರ್ ಸಿನಿಮಾ ಕಥೆಯ ಸುಳಿವು ಬಿಟ್ಟುಕೊಟ್ಟಿದೆ.
ಈ ಹಿಂದೆ ತಾರಕಾಸುರ ಚಿತ್ರದ ರಗಡ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಯವಾಗಿದ್ದವರು ರವಿ. ಚಿತ್ರ ವಿಚಿತ್ರ ಪಾತ್ರಗಳ ಮೂಲಕ ಅಚ್ಚರಿ ಮೂಡಿಸಿದ್ದ ರವಿ ಈ ಚಿತ್ರದ ಟ್ರೇಲರ್ನಲ್ಲಿ ಲವರ್ ಬಾಯ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಯುವ ಜನಾಂಗದ ಕಥೆ ಎಂಬುದಾಗಿ ಟ್ರೇಲರ್ ತಿಳಿಸಿದೆ. ನಶೆಯ ಜಗತ್ತಿನೊಳಗೆ ಪ್ರವೇಶಿಸುವ ಯುವಕನೋರ್ವನ ಕಥಾಹಂದರವನ್ನು ಪ್ರತಿಧ್ವನಿಸುವಂತಿರುವ ಈ ಟ್ರೇಲರ್ ಅನ್ನು ನಾಗ್ ವೆಂಕಟ್ ಪರಿಣಾಮಕಾರಿಯಾಗಿ ರೂಪಿಸಿದ್ದಾರೆ.
ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳು ಪ್ರೇಕ್ಷಕರೆದುರು ತೆರೆದುಕೊಂಡಿವೆ. ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರ ನೋಡುಗರನ್ನು ಸೆಳೆದಿದೆ. ಸೂರಜ್ ಚಿತ್ರದಲ್ಲಿ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೇಲರ್ನ ಹೈಲೈಟ್ಗಳಲ್ಲೊಂದು. ಮಾಸ್ ಮಾತ್ರವಲ್ಲದೇ ಭರಪೂರ ನಗುವಿಗೂ ಕೊರತೆಯಿಲ್ಲ ಎಂಬುದು ಈ ಟ್ರೇಲರ್ ಮೂಲಕವೇ ರವಾನೆಯಾಗಿದೆ. ಅಂದಹಾಗೆ, ಇದೊಂದು ಕ್ರೈಂ ಕಾಮಿಡಿ ಜಾನರ್ನ ಸಿನಿಮಾ ಎಂಬ ವಿಚಾರವನ್ನು ನಿರ್ದೇಶಕರು ಹೇಳಿಕೊಂಡಿದ್ದರು. ಅದಕ್ಕೆ ತಕ್ಕಂತೆ ಟ್ರೇಲರ್ನಲ್ಲಿ ಮೂಡಿಬಂದಿದೆ.
ಇದನ್ನೂ ಓದಿ: 'ಶಭ್ಬಾಷ್' ಎರಡನೇ ಹಂತದ ಚಿತ್ರೀಕರಣ ಪೂರ್ಣ
ರವಿ ಅವರಿಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ 'ಕೈಲಾಸ ಕಾಸಿದ್ರೆ' ಸಿನಿಮಾ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ. ಸಾಫ್ಟ್ವೇರ್ ಜಗತ್ತಿನಿಂದ ಆಗಮಿಸಿರುವ ನಾಗ್ ವೆಂಕಟ್ ಅವರ ಚೊಚ್ಚಲ ನಿರ್ದೇಶನದ ಚಿತ್ರವಿದು. ಮೊದಲ ಹೆಜ್ಜೆಯಲ್ಲಿಯೇ ಗಟ್ಟಿ ಕಥೆಯೊಂದಿಗೆ ಪ್ರೇಕ್ಷಕರನ್ನು ಮುಖಾಮುಖಿ ಆಗಲಿದ್ದಾರೆಂಬುದಕ್ಕೂ ಈ ಟ್ರೇಲರ್ ಸಾಕ್ಷಿಯಂತಿದೆ. ಈಗಾಗಲೇ ಹಲವಾರು ವಿಷಯಗಳಿಂದ ಗಮನ ಸೆಳೆಯುತ್ತಿರೋ ಕೈಲಾಸ ಕಾಸಿದ್ರೆ ಚಿತ್ರ ಮಾರ್ಚ್ 8ರಂದು ಚಿತ್ರಮಂದಿರ ಪ್ರವೇಶಿಸಲಿದೆ.
- " class="align-text-top noRightClick twitterSection" data="">
ಇದನ್ನೂ ಓದಿ: 'ವಿದ್ಯಾಪತಿ'ಯಾದ ನಾಗಭೂಷಣ್ಗೆ ಜೋಡಿಯಾದ 'ಹಿಟ್ಲರ್ ಕಲ್ಯಾಣ'ದ ಮಲೈಕಾ