ಕನ್ನಡದ ಶ್ರೇಷ್ಠ ನಟರಾದ ರಾಜ್ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಅಂಬರೀಶ್, ದ್ವಾರಕೀಶ್, ನಟ-ನಿರ್ಮಾಪಕ ಎಂ.ಪಿ.ಶಂಕರ್ ಅವರಿಗೆ ನಿರ್ಮಾಪಕರಿಗಾಗಿಯೇ ಒಂದು ಕಟ್ಟಡ ಕಟ್ಟಬೇಕು ಎಂಬ ಕನಸಿತ್ತು. ಆ ಕನಸೀಗ ನನಸಾಗುವ ಹೊತ್ತು.
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿದೆ. ಜೂನ್ 30ರಂದು (ಭಾನುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉಮೇಶ್ ಬಣಕಾರ್ ಮಾತನಾಡಿ, "ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ ಉದ್ಘಾಟನೆಗೆ ಸಿದ್ಧಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು, ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.
ಇದನ್ನೂ ಓದಿ: ಬರ್ತಿದೆ ಸ್ಯಾಂಡಲ್ವುಡ್ ಸೂಪರ್ ಹಿಟ್ ಸಿನಿಮಾ ಶೀರ್ಷಿಕೆಯ ಮತ್ತೊಂದು ಚಿತ್ರ - Naa Ninna Bidalare
"ಹೊಂಬಾಳೆ ಫಿಲ್ಮ್ಸ್, ಆರ್.ಎಸ್.ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ ನಿರ್ಮಾಣದ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆಂದೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ" ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷರಾದ ಸಾರಾ ಗೋವಿಂದು ಹೇಳಿದರು.
ಇದನ್ನೂ ಓದಿ: ಪ್ರಭಾಸ್ 'ಕಲ್ಕಿ' ಚಿತ್ರದ 'ಬುಜ್ಜಿ' ವಾಹನವನ್ನೇರಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ - Rishab Shetty rides Bujji
ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ.ರಾಮಮೂರ್ತಿ, ರಮೇಶ್ ಯಾದವ್, ಆರ್.ಎಸ್.ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.