ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಹಾಗೂ ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೆ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ 'ಕರಟಕ ದಮನಕ'. ವಿಭಿನ್ನ ಟೈಟಲ್ನಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿವೀಲ್ ಆಗಿದೆ.
ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಸರ್ನಲ್ಲಿ ಶಿವರಾಜ್ಕುಮಾರ್ ಮತ್ತು ಪ್ರಭುದೇವ ಅವರು, ನಾಗರಾಜ್ ಹಾಗೂ ಬಸವರಾಜ್ ಎಂಬ ವಿಭಿನ್ನ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಜೊತೆಗೆ, ನಾಯಕಿಯರಾದ ಪ್ರಿಯಾ ಆನಂದ್ ಹಾಗೂ ನಿಶ್ವಿಕಾ ನಾಯ್ಡು ಪಾತ್ರಗಳೂ ಸಹ ಇಂಪ್ರೆಸ್ ಮಾಡುತ್ತಿವೆ. ಆನಂದ್ ಆಡಿಯೋ ಮೂಲಕ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಆಗಿದೆ.
ಲವ್ ಸ್ಟೋರಿ ಹಾಗೂ ಫಿಲಾಸಫಿ ಚಿತ್ರಗಳಿಗೆ ಬ್ರಾಂಡ್ ಆಗಿರುವ ನಿರ್ದೇಶಕ ಯೋಗರಾಜ್ ಭಟ್, ಈ ಬಾರಿ ಸಂದೇಶ ಸಾರುವ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಭಟ್ಟರೇ ಹೇಳುವ ಹಾಗೆ, ''ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ, ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ಬಗ್ಗೆ ತಲೆ ಕೆಡಿಸಿಕೊಂಡು ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವರೂಪ ತಾಳುವ ಮೂಲಕ ಸಮಾಜಕ್ಕೆ ಹೇಗೆ ಒಳ್ಳೆಯದನ್ನು ಮಾಡುತ್ತವೆ ಎಂಬುದು ಈ ಚಿತ್ರದ ಕಥೆ. ಎಲ್ಲರೂ ಸಿನಿಮಾ ನೋಡಬೇಕು'' ಎಂದರು.
ಇದನ್ನೂ ಓದಿ: ಬರಗೂರು ರಾಮಚಂದ್ರಪ್ಪರ 'ಚಿಣ್ಣರ ಚಂದ್ರ' ಸಿನಿಮಾಗೆ ಮತ್ತೊಂದು ಪ್ರಶಸ್ತಿ
ಈ ಚಿತ್ರದಲ್ಲಿ ಶಿವಣ್ಣ, ಪ್ರಭುದೇವ ಅಲ್ಲದೇ, ರವಿಶಂಕರ್, ತೆಲುಗು ನಟ ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದಾರೆ. ಹರಿಕೃಷ್ಣ ಸಂಗೀತ ನಿರ್ದೇಶನವಿದ್ದು, ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.
- " class="align-text-top noRightClick twitterSection" data="">
ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ಮಾಡಲಾಗಿದೆ. ಸದ್ಯ ಟೀಸರ್ನಿಂದಲೇ ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿರುವ 'ಕರಟಕ ದಮನಕ' ಚಿತ್ರವು ಮಹಾಶಿವರಾತ್ರಿ ಹಬ್ಬಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ.
ಇದನ್ನೂ ಓದಿ: ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ವದಂತಿಗೆ ತುಪ್ಪ ಸುರಿದರಾ ರಶ್ಮಿಕಾ?