ETV Bharat / entertainment

ಅಬುಧಾಬಿಯಲ್ಲಿ ಬೊಂಬಾಟ್ ಸ್ಟೆಪ್ ಹಾಕಿದ ಶಿವಣ್ಣ-ಪ್ರಭುದೇವ: 'ಕರಟಕ ದಮನಕ' ಮೇಲೆ ಕುತೂಹಲ

ಕನ್ನಡದ ಬಹುನಿರೀಕ್ಷಿತ ಚಿತ್ರ ''ಕರಟಕ ದಮನಕ'' ಬಿಡುಗಡೆಗೆ ಸಜ್ಜಾಗಿದ್ದು, ಪ್ರಚಾರ ಪ್ರಾರಂಭಿಸಿದೆ.

Karataka Damanaka
ಕರಟಕ ದಮನಕ
author img

By ETV Bharat Karnataka Team

Published : Feb 15, 2024, 1:35 PM IST

ಹ್ಯಾಟ್ರಿಕ್ ಹೀರೋ ಶಿವ ರಾಜ್​​​ಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಅಭಿನಯದ ಬಹುನಿರೀಕ್ಷಿತ ಚಿತ್ರ ''ಕರಟಕ ದಮನಕ''. ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗುತ್ತಿರುವ ಯೋಗರಾಜ್ ಭಟ್ ನಿರ್ದೇಶನದ 'ಕರಟಕ ದಮನಕ‌' ಚಿತ್ರದ ಎರಡನೇ ಗೀತೆ ''ಡೀಗ ಡಿಗರಿ'' ಇತ್ತೀಚೆಗೆ ಅಬುಧಾಬಿಯಲ್ಲಿ ಅನಾವರಣಗೊಂಡಿದೆ.

ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುಧಾಬಿಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಶೀರ್ಷಿಕೆ, ಹಾಡು, ಈವೆಂಟ್​ಗಳ ಮೂಲಕ ಈಗಾಗಲೇ ಚಿತ್ರತಂಡ ಪ್ರಚಾರ ಪ್ರಾರಂಭಿಸಿದ್ದು, ವೀಕ್ಷಕರು ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.

Karataka Damanaka
ಕರಟಕ ದಮನಕ

ಶಿವ ರಾಜ್​ಕುಮಾರ್, ಪ್ರಭುದೇವ, ಯೋಗರಾಜ್ ಭಟ್, ರಾಕ್ ಲೈನ್ ವೆಂಕಟೇಶ್ ಹಾಗೂ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಸಹಸ್ರಾರು ಕನ್ನಡಿಗರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಹಾಡಿಗೆ ಶಿವಣ್ಣ ಮತ್ತು ಪ್ರಭುದೇವ ಬೊಂಬಾಟ್ ಡ್ಯಾನ್ ಮಾಡಿ ಪ್ರೇಕ್ಷಕರನ್ನು ಮನರಂಜಿಸಿದರು. ಬಳಿಕ ಚಿತ್ರತಂಡ ತಮ್ಮ ಈ ಬಹುನಿರೀಕ್ಷಿತ ಚಿತ್ರದ ಬಗ್ಗೆ ಕೆಲ ವಿಚಾರಗಳನ್ನು ಹಂಚಿಕೊಂಡಿತ್ತು.

Karataka Damanaka
ಕರಟಕ ದಮನಕ

ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇಬ್ಬರನ್ನು ಹೆಚ್ಚು ಬಾರಿ ನೋಡಿದಾಗ ಅವರನ್ನು "ಕರಟಕ ದಮನಕ" ಎನ್ನುತ್ತಾರೆ. ಅಬುಧಾಬಿಯಲ್ಲಿ ನಮ್ಮ ಚಿತ್ರಕ್ಕಾಗಿ ನಾನೇ ಬರೆದಿರುವ ಎರಡನೇ ಹಾಡು "ಡೀಗ ಡಿಗರಿ" ಬಿಡುಗಡೆಯಾಗಿದೆ. ವಿ. ಹರಿಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ಇದು ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ ಎಂದು ತಿಳಿಸಿದರು.

Karataka Damanaka
ಕರಟಕ ದಮನಕ

ನಂತರ ನಟ ಶಿವರಾಜ್​ಕುಮಾರ್ ಮಾತನಾಡಿ, ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಇನ್ನೂ ಪ್ರಭುದೇವ ಅವರ ಜೊತೆ ಮೊದಲ ಬಾರಿ ನಟಿಸಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಎತ್ತ ಕಣ್ಣಾಯಿಸಿದರೂ ಹಿಮರಾಶಿ: ಹಿಮಪಾತಕ್ಕೆ ನಡುಗಿದ ಅಮೆರಿಕ ಜನತೆ

ಇನ್ನು ಭಾರತದ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಮಾತನಾಡಿ, ನಮ್ಮ ಈ ಚಿತ್ರ ಹಾಗೂ ಹಾಡುಗಳು ಚೆನ್ನಾಗಿವೆ. ಶಿವರಾಜ್​​ಕುಮಾರ್ ಅವರೊಟ್ಟಿಗೆ ನಟಿಸಿರುವುದು ತುಂಬಾ ಸಂತೋಷ ತಂದಿದೆ. ರಾಕ್ ಲೈನ್ ವೆಂಕಟೇಶ್ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಯೋಗರಾಜ್ ಭಟ್ ಅವರ ನಿರ್ದೇಶನ ಕೂಡ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

  • " class="align-text-top noRightClick twitterSection" data="">

ಇದನ್ನೂ ಓದಿ: ಯಶ್​ ರಾಧಿಕಾ ವ್ಯಾಲಂಟೈನ್ ಡೇ: ಅಭಿಮಾನಿಗಳ ಮನಮುಟ್ಟಿದ ಫ್ಯಾಮಿಲಿ ಫೋಟೋಗಳಿವು

ಶಿವರಾಜ್​ಕುಮಾರ್, ಪ್ರಭುದೇವ ಅಲ್ಲದೇ ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು, ತೆಲುಗಿನ ಖ್ಯಾತ ನಟ ತನಿಕೆಲ್ಲ ಭರಣಿ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೇ ಕ್ಯಾಮರಾ ವರ್ಕ್ ಈ ಚಿತ್ರಕ್ಕಿದೆ. ಹಾಡುಗಳಿಂದ ಸದ್ದು ಮಾಡುತ್ತಿರುವ ಕರಟಕ ದಮನಕ ಸಿನಿಮಾ ಶಿವರಾತ್ರಿ ಹಬ್ಬಕ್ಕೆ ತೆರೆಕಾಣಲಿದೆ. ಸದ್ಯ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ಡೀಗ ಡಿಗರಿ'' ಹಾಡು ಸಿನಿಪ್ರಿಯರಿಂದ ಸಖತ್ ರೆಸ್ಪಾನ್ಸ್ ಸ್ವೀಕರಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.