ETV Bharat / entertainment

ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ ಸುದೀಪ್​​; ಸರ್ವರಲ್ಲೂ ಕ್ಷಮೆಯಾಚಿಸಿದ ಅಭಿನಯ ಚಕ್ರವರ್ತಿ - SUDEEP

ಅಭಿನಯ ಚಕ್ರವರ್ತಿ ಸುದೀಪ್​ ಅವರು ರಾಜ್ಯ ಸರ್ಕಾರ ಘೋಷಿಸಿರುವ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

Sudeep
ನಟ ಸುದೀಪ್​ (Photo: ETV Bharat)
author img

By ETV Bharat Entertainment Team

Published : Jan 23, 2025, 5:22 PM IST

ಕೋವಿಡ್ -19 ಹಾಗೂ ಇತರೆ ಕಾರಣಗಳ ಹಿನ್ನೆಲೆ 5 ವರ್ಷಗಳ ವಿಳಂಬದ ನಂತರ ಕರ್ನಾಟಕ ರಾಜ್ಯ ಸರ್ಕಾರ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಿದೆ. 2019ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಅತ್ಯುತ್ತಮ ನಟ ಪ್ರಶಸ್ತಿಯನ್ನು ಅಭಿನಯ ಚಕ್ರವರ್ತಿ ಸುದೀಪ್​ ಅವರಿಗೆ ಘೋಷಿಸಲಾಗಿದೆ. 'ಪೈಲ್ವಾನ್' ಚಿತ್ರದ ಅಭಿನಯಕ್ಕಾಗಿ ಸುದೀಪ್ ಅತ್ಯುತ್ತಮ ನಟ ಗೌರವಕ್ಕೆ ಪಾತ್ರರಾಗಿದ್ದು, ಇದೀಗ ಈ ಬಗ್ಗೆ ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಸುದೀಪ್​ ಟ್ವೀಟ್​ನಲ್ಲೇನಿದೆ? ''ಗೌರವಾನ್ವಿತ ಕರ್ನಾಟಕ ಸರ್ಕಾರ ಹಾಗೂ ಜೂರಿ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಘೋಷಣೆಯಾಗಿರುವುದು ನಿಜಕ್ಕೂ ಒಂದು ಭಾಗ್ಯ. ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅದಾಗ್ಯೂ, ನಾನು ಹಲವು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಿದ್ದೇನೆ. ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದು, ಅದನ್ನು ಮುಂದುವರಿಸುತ್ತಿದ್ದೇನೆ. ಕಲೆಗೆ ತಮ್ಮನ್ನು ಸಮರ್ಪಿಸಿದ ಅನೇಕ ಅರ್ಹ ಕಲಾವಿದರಿದ್ದಾರೆ. ಈ ಪ್ರತಿಷ್ಠಿತ ಮನ್ನಣೆಯನ್ನು ಅವರು ಹೆಚ್ಚು ಪ್ರಶಂಸಿಸುತ್ತಾರೆ. ಅವರಲ್ಲಿ ಒಬ್ಬರು ಪ್ರಶಸ್ತಿ ಪಡೆಯುವುದನ್ನು ನೋಡೋದು ನನಗೆ ಖುಷಿ ನೀಡುತ್ತದೆ''.

''ಪ್ರಶಸ್ತಿಗಳ ನಿರೀಕ್ಷೆಯಿಲ್ಲದೇ ಜನರನ್ನು ಮನರಂಜಿಸೋದರಲ್ಲಿ ನನ್ನನ್ನು ಸಮರ್ಪಿಸಿಕೊಂಡಿದ್ದೇನೆ. ತೀರ್ಪುಗಾರರ ಈ ನಿರ್ಧಾರ ಶ್ರೇಷ್ಠತೆಗಾಗಿ ಶ್ರಮಿಸುವುದನ್ನು ಮುಂದುವರಿಸಲು ನನಗೆ ಉತ್ತೇಜನ ನೀಡುತ್ತದೆ''.

''ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತೀ ಜೂರಿ (ತೀರ್ಪುಗಾರರು) ಸದಸ್ಯರಿಗೂ ಕೃತಜ್ಞನಾಗಿದ್ದೇನೆ. ಏಕೆಂದರೆ, ಈ ಮನ್ನಣೆಯೇ ನನ್ನ ಕೆಲಸದ ಪ್ರತಿಫಲ. ನನ್ನ ನಿರ್ಧಾರ ನಿಮಗೆ ನಿರಾಶೆಯಾಗಬಹುದು, ತೀರ್ಪುಗಾರ ತಂಡದ ಸದಸ್ಯರು ಮತ್ತು ರಾಜ್ಯ ಸರ್ಕಾರದಲ್ಲಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ಮುನ್ನಡೆಯಲು ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ''.

''ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಗೌರವಾನ್ವಿತ ತೀರ್ಪುಗಾರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.

ಹಲವು ಕಾರಣಗಳಿಂದ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಐದು ವರ್ಷಗಳ ವಿಳಂಬದ ನಂತರ ಬುಧವಾರದಂದು ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಯಿತು.

ಇದನ್ನೂ ಓದಿ: ರಾಜ್ಯ ಚಲನಚಿತ್ರ ಪ್ರಶಸ್ತಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​​​ಗೆ ಅತ್ಯುತ್ತಮ ನಟ ಗೌರವ

'ಪೈಲ್ವಾನ್' ಸಿನಿಮಾದಲ್ಲಿನ ಅಮೋಘ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, 'ತ್ರಯಂಬಕಂ' ಚಿತ್ರದ ನಟನೆಗಾಗಿ ಅನುಪಮಾ ಗೌಡ ಅತ್ಯುತ್ತಮ ನಟಿ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಜ್ಯ ಪ್ರಶಸ್ತಿಯು 20,000 ರೂಪಾಯಿ ನಗದು ಮತ್ತು 100 ಗ್ರಾಂ ಬೆಳ್ಳಿಯನ್ನು ಒಳಗೊಂಡಿದೆ.

ಇದನ್ನೂ ಓದಿ: 500 ರೂ. ಸಂಬಳ ಪಡೆಯುತ್ತಿದ್ದವರೀಗ 300 ಕೋಟಿಯ ಮಾಲೀಕ: ಭಾರತದ 2ನೇ ಶ್ರೀಮಂತ ಹಾಸ್ಯನಟನಿಗೆ ಕೊಲೆ ಬೆದರಿಕೆ

ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಟಾರ್​ಡಮ್​ ಹೊಂದಿರುವ ಸುದೀಪ್ ರಾಜ್ಯ ಪ್ರಶಸ್ತಿಯನ್ನು ನಿರಾಕರಿಸಿದ್ದಲ್ಲದೇ, ಬಿಗ್​ ಬಾಸ್​​ ನಿರೂಪಣೆಗೂ ವಿದಾಯ ಹೇಳಿದ್ದಾರೆ. ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಕಾರ್ಯಕ್ರಮ ಬಿಗ್​ ಬಾಸ್​ನ 11 ಸೀಸನ್​ಗಳನ್ನು ನಡೆಸಿಕೊಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದಾರೆ. ಆದರೆ ಮುಂದಿನ ಸೀಸನ್​ನಿಂದ ಸುದೀಪ್​​ ನಿರೂಪಣೆ ಮಾಡೋದಿಲ್ಲ. ಈ ಮೂಲಕ ಹೆಚ್ಚಿನ ಸಿನಿಮಾಗಳನ್ನು ಪ್ರೇಕ್ಷಕರಿಗೆ ಕೊಡುವ ನಿರ್ಧಾರ ಮಾಡಿದ್ದಾರೆ. ಜೊತೆಗೆ, ಪ್ರಶಸ್ತಿಗಳ ನಿರೀಕ್ಷೆಯಿಲ್ಲದೇ ಜನರನ್ನು ಮನರಂಜಿಸಸೋದಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.