ತೆಲುಗು ನಟ ಮಂಚು ಮನೋಜ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 8 ವರ್ಷಗಳ ಬಳಿಕ ಇವರು ಮತ್ತೆ ಬಣ್ಣ ಹಚ್ಚಿದ್ದಾರೆ. ಹನುಮಾನ್ ಖ್ಯಾತಿಯ ತೇಜ್ ಸಜ್ಜಾ ನಾಯಕನಾಗಿ ನಟಿಸುತ್ತಿರುವ 'ಮಿರಾಯ್' ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ.
ಬರ್ತ್ ಡೇ ವಿಶೇಷವಾಗಿ ಮಿರಾಯ್ ಚಿತ್ರತಂಡ ಸ್ಪೆಷಲ್ ವಿಡಿಯೋ ಬಿಡುಗಡೆ ಮಾಡಿತು. ನಟ ದರ್ಶನ್ ಹಾಗೂ ಸುದೀಪ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ದಿ ಬ್ಲ್ಯಾಕ್ ಸ್ವೋರ್ಡ್ ಟೈಟಲ್ನಡಿ ರಿಲೀಸ್ ಆಗಿರುವ ಫಸ್ಟ್ ಲುಕ್ನಲ್ಲಿ ಮನೋಜ್ ಉದ್ದ ಕೂದಲು ಬಿಟ್ಟು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಆ್ಯಕ್ಷನ್‌ಗಳ ಮೂಲಕ ಗಮನಸೆಳೆಯುವ ಮಂಚು ಮನೋಜ್, ಡಬಲ್ ಶೇಡ್ನಲ್ಲಿ ನಟಿಸಿದ್ದಾರೆ.
ಈ ಸಿನಿಮಾಗೆ ಕಾರ್ತಿಕ್ ಗಟ್ಟಮ್ನೇನಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಕಾರ್ತಿಕ್ ಗಟ್ಟಮ್ನೇನಿ ಮಿರಾಯ್‌ಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಮಿರಾಯ್ ಸಿನಿಮಾವನ್ನು 2 ಡಿ ಹಾಗೂ 3 ಡಿ ವರ್ಷನ್ನಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮುಂದಿನ ವರ್ಷದ ಏಪ್ರಿಲ್ 18ರಂದು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.
ಇದನ್ನೂ ಓದಿ: ಗೌರಿ ಸಿನಿಮಾಕ್ಕಿದೆ 4 ಜನ ಸಂಗೀತ ನಿರ್ದೇಶಕರು, 14 ಗಾಯಕರ ಅದ್ದೂರಿತನ - Gowri movie