ETV Bharat / entertainment

ಕಿರಣ್ ರಾಜ್ ನೋಡಲು ಆ.30 ಅಲ್ಲ, ಇನ್ನೂ 3 ವಾರ ಕಾಯಬೇಕು: 'ರಾನಿ' ಬಿಡುಗಡೆ ದಿನಾಂಕ ಮುಂದೂಡಿಕೆ - Ronny Release Date Postponed - RONNY RELEASE DATE POSTPONED

ಕಿರಣ್‍ ರಾಜ್‍ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ 'ರಾನಿ' ಆಗಸ್ಟ್ 30ರಂದು ತೆರೆಕಾಣಲು ಸಜ್ಜಾಗಿತ್ತು. ಆದ್ರೆ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್ 30ರ ಬದಲು ಸೆಪ್ಟೆಂಬರ್ 12ರಂದು 'ರಾನಿ' ಚಿತ್ರಮಂದಿರ ಪ್ರವೇಶಿಸಲಿದೆ.

Ronny Poster
ರಾನಿ ಪೋಸ್ಟರ್ (ETV Bharat)
author img

By ETV Bharat Entertainment Team

Published : Aug 23, 2024, 7:01 PM IST

ಭರವಸೆಯ ನಟ ಕಿರಣ್‍ ರಾಜ್‍ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ 'ರಾನಿ'. ಸ್ಯಾಂಡಲ್​ವುಡ್‌ನಲ್ಲಿ ಒಂದಲ್ಲೊಂದು ವಿಚಾರಕ್ಕೆ ಸದ್ದು ಮಾಡುತ್ತಿರುವ ಸಿನಿಮಾ ಇದು. ಆಗಸ್ಟ್ 30ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದ್ರೆ 'ರಾನಿ'ಯ ಎಂಟ್ರಿ ಕೊಂಚ ವಿಳಂಬವಾಗಲಿದೆ. ಆಗಸ್ಟ್ 30ರ ಬದಲು ಸೆಪ್ಟೆಂಬರ್ 12ರಂದು ಸಿನಿಮಾ ತೆರೆಗಪ್ಪಳಿಸಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡದ ಬಹುನಿರೀಕ್ಷಿತ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿವೆ‌. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ಕೈಗೊಂಡಿದೆ.

ಮೊದಲು ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕೃಷ್ಣಂ ಪ್ರಣಯ ಸಖಿ ಮತ್ತು ಭೀಮ ಚಿತ್ರತಂಡಗಳಿಗೆ ಅಭಿನಂದನೆ ತಿಳಿಸಿದರು. ಆಗಸ್ಟ್ 20ರಂದು ನಮ್ಮ ಚಿತ್ರದ ಟ್ರೇಲರ್ ಬರಬೇಕಿತ್ತು. ಚಿತ್ರ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದ್ರೆ ಭೀಮ ಹಾಗೂ ಕೃಷ್ಣಂ ಪ್ರಣಯ ಸಖಿ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗಬಹುದು ಎಂದು ವಿತರಕರು ಹೇಳಿದರು. ನಾವು ಬಿಡುಗಡೆ ಮಾಡುವ ಹೊತ್ತಿಗೆ ಎಷ್ಟು ಚಿತ್ರಮಂದಿರಗಳು ಸಿಗುತ್ತದೆ ಗೊತ್ತಿಲ್ಲ. ಚೆನ್ನಾಗಿ ಶೇರ್ ಸಿಕ್ಕರೆ, ಚಿತ್ರಮಂದಿರಗಳಿಂದ ಸಿನಿಮಾ ತೆಗೆಯುವುದು ಸರಿಯಲ್ಲ. ಹಾಗಾಗಿ ಮುಂದೆ ಹೋಗುತ್ತಿದ್ದೇವೆ. ದಿನಾಂಕ ಮುಂದೂಡಿಕೆ ಬಗ್ಗೆ ಬೇಸರವಿಲ್ಲ. ಖುಷಿಯದೆ. ಏಕೆಂದರೆ, ಜನ ಈಗ ಚಿತ್ರಮಂದಿರದತ್ತ ಬರುತ್ತಿದ್ದಾರೆ. ನಮ್ಮ ರಾನಿಯನ್ನು ಸೆಪ್ಟೆಂಬರ್ 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್‍ನ ಸಿನಿಮಾ. ಹಾಗಾಗಿ ಸ್ವಲ್ಪ ತಡೆದು ದೊಡ್ಡಮಟ್ಟದಲ್ಲೇ ರಿಲೀಸ್ ಮಾಡಬೇಕೆಂದುಕೊಂಡಿದ್ದೇವೆ. ಹಾಗಾಗಿ ಬಿಡುಗಡೆ ದಿನಾಂಕ ಮುಂದೆ ಹೋಗಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಕಿರಣ್ ರಾಜ್, ಈ ಚಿತ್ರ ಪ್ರೇಕ್ಷಕರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಚಿತ್ರವಿದೆ. ಬಿಡುಗಡೆ ದಿನಾಂಕ ಸ್ವಲ್ಪ ಮುಂದೆ ಹೋಗಿದೆ ಅಷ್ಟೇ. ಇಷ್ಟು ದಿನಗಳಿಂದ ನೀವು ನನ್ನ ಮೇಲಿಟ್ಟಿರುವ ಪ್ರೀತಿಗೆ ಚಿರಋಣಿ, ಆ ಪ್ರೀತಿ ಈ ಚಿತ್ರದಿಂದ ಇನ್ನಷ್ಟು ಜಾಸ್ತಿಯಾಗುತ್ತದೆ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮಪಟ್ಟಿದ್ದೇನೆ. ನನ್ನ ಪಾತ್ರ ವಿಭಿನ್ನವಾಗಿದೆ. ಎಂಟು ವರ್ಷಗಳ ಅಂತರದಲ್ಲಿ ಕಥೆ ನಡೆಯುತ್ತದೆ. ಎರಡು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಈ ಸಿನಿಮಾ ನನ್ನ ಪಾಲಿಗೆ ಬಹಳ ಮಹತ್ವದ್ದು. ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದಲಿನಿಂದಲೂ ಶುರು ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಸೆಬಾಸ್ಟಿನ್ ಡೇವಿಡ್ ನಿರ್ದೇಶನದ 'ಪೆನ್ ಡ್ರೈವ್' ಸಿನಿಮಾದಲ್ಲಿ ಮಾಲಾಶ್ರೀ, ತನಿಷಾ ಕುಪ್ಪಂಡ - Pendrive Movie

ಇನ್ನೂ ಚಿತ್ರಕ್ಕೆ ನಿರ್ದೇಶಕ ಗುರು ತೇಜ್ ಶೆಟ್ಟಿ ಸುಮ್ಮನೆ ಸ್ಕ್ರೀನ್ ಪ್ಲೇ ಬರೆದಿಲ್ಲ. ಒಂದಿಷ್ಟು‌ ಊರುಗಳಲ್ಲಿ, ಅಲ್ಲಿನ ಜನ ನನ್ನನ್ನು ಯಾವ ರೀತಿಯ ಪಾತ್ರದಲ್ಲಿ ನೋಡಿದರೆ ಇಷ್ಟಪಡುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಸರ್ವೇ ಮಾಡಿದ್ದಾರೆ ಎಂದು ಸಹ ಕಿರಣ್ ತಿಳಿಸಿದರು.

ಇದನ್ನೂ ಓದಿ: 'ಪೌಡರ್' ಘಮಕ್ಕೆ ಮನಸೋತ ಪ್ರೇಕ್ಷಕರು: ದಿಗಂತ್, ಧನ್ಯಾ ಸಿನಿಮಾಗೆ ಸಿಕ್ಕ ರಿಯಾಕ್ಷನ್​​ ಹೀಗಿದೆ - Powder Movie Reaction

ರಾನಿ ಚಿತ್ರದಲ್ಲಿ ಕಿರಣ್ ರಾಜ್ ಜೊತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಸೇರಿದಂತೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ.ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ಸ್ಟಾರ್ ಕ್ರಿಯೇಷನ್ಸ್ ಲಾಂಛನದಲ್ಲಿ ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗಡೆ ರಾನಿಯನ್ನು ನಿರ್ಮಿಸಿದ್ದಾರೆ.

ಸೆಪ್ಟೆಂಬರ್ 12ರಂದು (ಗುರುವಾರ) ಸಿನಿಮಾ ಬಿಡುಗಡೆ ಆಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.