ETV Bharat / entertainment

ಎಸ್.ಮಹೇಂದರ್ ನಿರ್ದೇಶನದ ಚಿತ್ರಕ್ಕೆ ಕಿಶೋರ್ ಹೀರೋ: ಶೀರ್ಷಿಕೆಯೇನು? - Kishore New Movie

author img

By ETV Bharat Entertainment Team

Published : Aug 7, 2024, 2:10 PM IST

ಸ್ಯಾಂಡಲ್​​ವುಡ್​ನ ಕಿರಿಯ ಮತ್ತು ಯಶಸ್ವಿ ನಿರ್ಮಾಪಕ ಅನುಪ್‌ ಹನುಮಂತೇಗೌಡ ಇತ್ತೀಚೆಗಷ್ಟೇ 'ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್' ಎಂಬ ಚಲನಚಿತ್ರ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದು, ತಮ್ಮ ಮೂರನೇ ಚಿತ್ರವನ್ನು ನಿರ್ಮಿಸಲು ಅಣಿಯಾಗಿದ್ದಾರೆ. ಈ ಚಿತ್ರದಲ್ಲಿ ಕಿಶೋರ್​ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ.

Kishore is in S.Mahender's movie
ಎಸ್.ಮಹೇಂದರ್ ನಿರ್ದೇಶನದ ಚಿತ್ರದಲ್ಲಿ ಕಿಶೋರ್ (ETV Bharat)

ಕನ್ನಡ ಚಿತ್ರರಂಗದ ಸೂಪರ್ ಹಿಟ್ 'ಶಿವಾಜಿ ಸುರಕ್ಕಲ್' ಡಿಟೆಕ್ಟಿವ್ ಸರಣಿಗಳ ನಿರ್ಮಾಪಕ ಅನುಪ್ ಹನುಮಂತೇಗೌಡ ತಮ್ಮ ಮೂರನೇ ಚಿತ್ರವನ್ನು ನಿರ್ಮಿಸಲು ರೆಡಿಯಾಗಿದ್ದಾರೆ. ಹಿರಿಯ ನಿರ್ದೇಶಕ ಎಸ್ ಮಹೇಂದರ್ ಅವರ ನಿರ್ದೇಶನದಲ್ಲಿ ಅನುಪ್ ಹನುಮಂತೇಗೌಡ ನಿರ್ಮಾಣದ ಮೂರನೇ ಚಿತ್ರ ಮೂಡಿಬರಲಿದೆ. ಜನಪ್ರಿಯ ನಟ ಕಿಶೋರ್ ಈ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಹೊಸ ಪ್ರಾಜೆಕ್ಟ್​​​​ಗೆ "ಆಪರೇಷನ್ ಕೊಂಬುಡಿಕ್ಕಿ'' ಎಂಬ ಶೀರ್ಷಿಕೆ ಇಡಲಾಗಿದೆ.

ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್​​​ನಿಂದ ನಿರ್ಮಾಣ: ಕನ್ನಡ ಚಿತ್ರರಂಗದ ಕಿರಿಯ ಮತ್ತು ಯಶಸ್ವಿ ನಿರ್ಮಾಪಕ ಅನುಪ್‌ ಹನುಮಂತೇಗೌಡ ಅವರು 'ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್' ಎಂಬ ಚಲನಚಿತ್ರ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ ಅದರ ಅಡಿ 'ಆಪರೇಷನ್‌ ಕೊಂಬುಡಿಕ್ಕಿ' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಬಿಗ್ ಬಜೆಟ್‌ ಪ್ರೊಜೆಕ್ಟ್​ ಆಗಿದೆ.

ನಾಯಕನಾಗಿ ಕಿಶೋರ್​: 'ಗಟ್ಟಿಮೇಳ‌' ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ಮಹೇಂದರ್ ಆ್ಯಕ್ಷನ್​​ ಕಟ್​​ ಹೇಳುತ್ತಿರುವ ಈ ಚಿತ್ರದಲ್ಲಿ ಕಿಶೋರ್‌ ಪ್ರಮುಖ ಪಾತ್ರ ವಹಿಸಿದ್ದಾರೆ. ಕಿಶೋರ್ ಬಹಳ ವರ್ಷಗಳ ನಂತರ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ‌‌. ಈವರೆಗೆ ಕೆಲ ಸೂಪರ್​ ಹಿಟ್​ ಚಿತ್ರಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ದಕ್ಷಿಣ ಭಾರತದ ಬಹು ಬೇಡಿಕೆಯ ನಟರಾಗಿ ಗುರುತಿಸಿಕೊಂಡಿರುವ ಅಪ್ಪಟ ಕನ್ನಡಿಗ ಕಿಶೋರ್‌ ನಾಯಕನಾಗಿ ನಟಿಸಲಿರುವ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

ಇದನ್ನೂ ಓದಿ: 'ನಾನು ಭೂಮಿ ಮೇಲಿನ ಅದೃಷ್ಟಶಾಲಿ': ಚಿಯಾನ್ ವಿಕ್ರಮ್ ಭೇಟಿಯಾದ ಖುಷಿಯಲ್ಲಿ ರಿಷಬ್​ ಶೆಟ್ಟಿ - Rishab on Chiyaan Vikram

ಕೆ.ಜಿ.ಎಫ್‌, ಸಲಾರ್‌ ಖ್ಯಾತಿಯ ರವಿ ಬಸ್ರೂರ್‌ ಅವರು ಆಪರೇಷನ್ ಕೊಂಬುಡಿಕ್ಕಿ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಛಾಯಾಗ್ರಾಹಕರಾಗಿ ಹೆಬ್ಬುಲಿ, ಕ್ರಾಂತಿ ಸಿನಿಯಾ ಖ್ಯಾತಿಯ ಕರುಣಾಕರ್‌ ಅವರು ಕೆಲಸ ಮಾಡುತ್ತಿದ್ದಾರೆ. ಕನ್ನಡದ ಹೆಸರಾಂತ ಸಂಕಲನಕಾರರಾದ ದೀಪು ಎಸ್ ಕುಮಾರ್‌ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಇನ್ನೂ ಕನ್ನಡದ ಜನಪ್ರಿಯ ಕಲಾವಿದರು ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬರಲಿದೆ.

ಇದನ್ನೂ ಓದಿ: ವಯನಾಡು ಭಯಾನಕ ಭೂಕುಸಿತಕ್ಕೆ ಮಿಡಿದ ನಟ ಪ್ರಭಾಸ್​​​: 2 ಕೋಟಿ ರೂ. ನೆರವು - Prabhas Donation

ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ದೊಡ್ಡ ನಿರ್ಮಾಣ ಸಂಸ್ಥೆಗಳ, ದೊಡ್ಡ ದೊಡ್ಡ ಸ್ಟಾರ್‌ಗಳ ಸಿನಿಮಾಗಳು ಮಾತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸುತ್ತಿದೆ. ಇಂತಹ ಸಮಯದಲ್ಲಿ ಸದಭಿರುಚಿಯ ಚಿತ್ರಗಳನ್ನು ಸೀಮಿತ ಬಜೆಟ್​​ನಲ್ಲಿ ನಿರ್ಮಾಣ ಮಾಡಿ ಮಾರುಕಟ್ಟೆಯಲ್ಲಿ ಜನರಿಗೆ ತಲುಪಿಸಿ ಅದನ್ನು ಯಶಸ್ವಿಗೊಳಿಸಿದ ನಿರ್ಮಾಪಕ ಅನುಪ್‌ ಹನುಮಂತೇಗೌಡ ಅವರೀಗ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.