ETV Bharat / entertainment

ಕೆಆರ್​ಜಿ ಸ್ಟುಡಿಯೋಸ್ ಪಾಲಾದ 'ಕೋಟಿ‌' ವಿತರಣಾ ಹಕ್ಕು; ಡಾಲಿ ಸಿನಿಮಾ ಬಿಡುಗಡೆಗೆ ದಿನಗಣನೆ - Kotee - KOTEE

ಡಾಲಿ ಧನಂಜಯ್ ಮುಖ್ಯಭೂಮಿಕೆಯ 'ಕೋಟಿ' ಸಿನಿಮಾದ ವಿತರಣಾ ಹಕ್ಕು ಕೆಆರ್​ಜಿ ಸ್ಟುಡಿಯೋಸ್ ಪಾಲಾಗಿದೆ.

dolly dhananjay
ಡಾಲಿ ಧನಂಜಯ್ (ETV Bharat)
author img

By ETV Bharat Karnataka Team

Published : May 31, 2024, 2:43 PM IST

ಡಾಲಿ ಧನಂಜಯ್ ಮುಖ್ಯಭೂಮಿಕೆಯ 'ಕೋಟಿ' ಸಿನಿಮಾದ ಕ್ರೇಜ್ ಜೋರಾಗಿದ್ದು, ಸಿನಿಪ್ರಿಯರ ಕುತೂಹಲ ಹೆಚ್ಚಾಗಿದೆ. ಪೋಸ್ಟರ್​, ಟೀಸರ್, ಹಾಡುಗಳು ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗ ಚಿತ್ರತಂಡದಿಂದ ಗುಡ್ ನ್ಯೂಸ್ ಹೊರ ಬಿದ್ದಿದೆ. ಹೌದು, 'ಕೋಟಿ' ಚಿತ್ರದ ವಿತರಣಾ ಹಕ್ಕು ಕೆಆರ್​ಜಿ ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಂಡು, ಭರವಸೆಯಿಂದ ಕೆಆರ್​ಜಿ ಸಂಸ್ಥೆ ಡಾಲಿ ಸಿನಿಮಾದ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್​ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12th ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. ಈವರೆಗೆ 100ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದೆ. ಹಾಗೆಂದ ಮಾತ್ರಕ್ಕೆ, ಈ ಸಂಸ್ಥೆ ಕಡೆಯಿಂದ ಸಿನಿಮಾವೊಂದು ಬಿಡುಗಡೆಗೊಳ್ಳುವುದು ಸಾಮಾನ್ಯ ಸಂಗತಿಯಲ್ಲ. ಅದು ನಿಜಕ್ಕೂ ಪ್ರತಿಷ್ಠೆಯ ವಿಚಾರ. ಏಕೆಂದರೆ, ಎಲ್ಲ ಬಗೆಯಲ್ಲಿಯೂ ಪರಿಪೂರ್ಣವಾಗಿರುವ, ಗೆಲುವಿನ ಲಕ್ಷಣಗಳನ್ನು ಹೊಂದಿರುವ ಚಿತ್ರಗಳನ್ನು ಮಾತ್ರವೇ ಈ ಸಂಸ್ಥೆ ತನ್ನದಾಗಿಸಿಕೊಳ್ಳುತ್ತದೆ.

ಕೋಟಿ ಸಿನಿಮಾವನ್ನು ಇಡೀ ಕೆಆರ್​ಜಿ ಬಳಗ ವೀಕ್ಷಿಸಿದೆ. ಭಾವನಾತ್ಮಕ ಎಳೆಯುಳ್ಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣ ಔತಣದಂತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: 'ಪ್ರೇಮ್​ ಪರ್ಫೆಕ್ಷನಿಸ್ಟ್': ಕನ್ನಡ ನಿರ್ದೇಶಕನ ಕೊಂಡಾಡಿದ ಶಿಲ್ಪಾ ಶೆಟ್ಟಿ; ಸ್ಪೆಷಲ್​​ ವಿಡಿಯೋ ರಿವೀಲ್ - Shilpa Shetty

ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ ಮಾತನಾಡಿ, ಧನಂಜಯ್ ಅವರೊಂದಿಗಿನ ನಮ್ಮ ಸಂಬಂಧ ಕೋಟಿ ಮೂಲಕ ಮತ್ತಷ್ಟು ವಿಸ್ತರಿಸಿದೆ. ನಾನು ಸಿನಿಮಾ ನೋಡಿದೆ. ಪರಮೇಶ್ವರ್ ಗುಂಡ್ಕಲ್ ಅವರ ಬರವಣಿಗೆ ಹಾಗೂ ಚಿತ್ರಕಥೆ ಹೆಣೆದಿರುವ ಸೊಗಸನ್ನು ನೋಡಿ ಥ್ರಿಲ್ ಆಗಿದ್ದೇನೆ. ಈ ಚಿತ್ರವನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. 250ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಈ ಅವಕಾಶವನ್ನು ನೀಡಿದ ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ವೇದಿಕೆಯಲ್ಲಿ ನಟಿಯನ್ನು ತಳ್ಳಿದ ನಂದಮೂರಿ ಬಾಲಕೃಷ್ಣ: ಅಂಜಲಿ ಪ್ರತಿಕ್ರಿಯೆ ಇದು - Anjali

'ಕೋಟಿ' ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮೂಡಿ ಬಂದಿದೆ. ಜ್ಯೋತಿ ದೇಶಪಾಂಡೆ ನಿರ್ಮಿಸಿರುವ 'ಕೋಟಿ' ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರ. ನಟರಾಕ್ಷಸ ಡಾಲಿ ಧನಂಜಯ್, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಸಾರಥ್ಯದ ಕೋಟಿ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು, ಜೂನ್ 14ರಂದು 'ಕೋಟಿ' ಚಿತ್ರಮಂದಿರ ಪ್ರವೇಶಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.