ETV Bharat / entertainment

ರಾಜಸ್ಥಾನ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ 'ತಾರಿಣಿ' ನಟಿ ಮಮತಾ ರಾಹುತ್

ರಾಜಸ್ಥಾನ್ ಇಂಟರ್​ನ್ಯಾಷನಲ್ ಫಿಲ್ಮ್ ಫೆಸ್ಟಿವಲ್​​ನಲ್ಲಿ ತಾರಿಣಿ ಚಿತ್ರದ ಅಭಿನಯಕ್ಕೆ ಮಮತಾ ರಾಹುತ್ 'ಅತ್ಯುತ್ತಮ ನಟಿ' ಪ್ರಶಸ್ತಿ ಮತ್ತು "ಬೆಸ್ಟ್ ಕ್ರಿಟಿಕ್ಸ್ ಅವಾರ್ಡ್" ಮುಡಿಗೇರಿಸಿಕೊಂಡಿದ್ದಾರೆ.

Mamata Rahut won an award at the Rajasthan Film Festival
ರಾಜಸ್ಥಾನ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮಮತಾ ರಾಹುತ್
author img

By ETV Bharat Karnataka Team

Published : Feb 3, 2024, 7:50 PM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ನಟಿ ಮಮತಾ ರಾಹುತ್ 'ಹೆಣ್ಣು ಭ್ರೂಣ ಹತ್ಯೆ' ಕುರಿತ ಸಿನಿಮಾ ಮಾಡುತ್ತಿರೋದು ನಿಮಗೆ ತಿಳಿದಿರೋ ವಿಚಾರ. ಈ ಚಿತ್ರ ಬಿಡುಗಡೆಗೂ ಮುನ್ನ ಸಾಕಷ್ಟು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಿದೆ. ಇದೀಗ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲೊಂದಾದ ರಾಜಸ್ಥಾನ್ ಇಂಟರ್​ನ್ಯಾಷನಲ್ ಫಿಲ್ಮ್ ಫೆಸ್ಟಿವಲ್​​ನಲ್ಲಿ ತಾರಿಣಿ ಚಿತ್ರದ ಅಭಿನಯಕ್ಕೆ ಮಮತಾ ರಾಹುತ್ ಅವರಿಗೆ 'ಅತ್ಯುತ್ತಮ ನಟಿ' ಪ್ರಶಸ್ತಿ ಮತ್ತು "ಬೆಸ್ಟ್ ಕ್ರಿಟಿಕ್ಸ್ ಅವಾರ್ಡ್" ಬಂದಿದೆ. ಒಟ್ಟು ಎರಡು ಪ್ರಶಸ್ತಿಗಳನ್ನು 'ತಾರಿಣಿ' ಚಿತ್ರ ಮುಡಿಗೇರಿಸಿಕೊಂಡಿದೆ. ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿ ಪ್ರದರ್ಶನಗೊಂಡು ಪ್ರಶಸ್ತಿ ಗಳಿಸುತ್ತಿರೋದು ಹೆಮ್ಮೆಯ ವಿಚಾರ.

ರಾಜಸ್ಥಾನ್ ಫಿಲ್ಮ್ ಫೆಸ್ಟಿವಲ್​ನಲ್ಲಿ ಮಮತಾ ರಾಹುತ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿರುವುದು ಇಡೀ ತಂಡಕ್ಕೆ ಖುಷಿ ತಂದಿದೆ. ಗರ್ಭಿಣಿಯೊಬ್ಬಳ ಕಥೆಯಾಧಾರಿತ ಈ ಸಿನಿಮಾಗೆ ಮಮತಾ ರಾಹುತ್ ಕೂಡ ನೈಜ ಗರ್ಭಿಣಿಯಾಗಿ ಮನೋಜ್ಞವಾಗಿ ಅಭಿನಯಿಸಿದ್ದಾರೆ ಎಂದು ನಿರ್ದೇಶಕರು ಸಂತಸ ವ್ಯಕ್ತಪಡಿಸಿದರು. ಅವರಿಗೆ ಕೆಲವೊಂದು ಸಂದರ್ಭಗಳಲ್ಲಿ ಕಷ್ಟ ಎನಿಸಿದರೂ ಅದನ್ನು ಯಾರ ಬಳಿಯೂ ಹೇಳಿಕೊಳ್ಳದೇ ಚಿತ್ರೀಕರಣ ಮಾಡಲು ಸಂಪೂರ್ಣ ಸಹಕಾರ ನೀಡಿ, ದೃಶ್ಯ ಕಟ್ಟುವಲ್ಲಿ ಧೈರ್ಯ ತೋರಿದರು. ಅವರು ಗರ್ಭಿಣಿಯಾದ 7ನೇ ತಿಂಗಳಿಂದ ಚಿತ್ರೀಕರಣ ಪ್ರಾರಂಭಿಸಿ ಒಂಭತ್ತನೇ ತಿಂಗಳು ತುಂಬಿದಾಗಲೂ ಚಿತ್ರೀಕರಣ ಮಾಡುತ್ತಲೇ ಇದ್ದೆವು. ಮಗು ಹುಟ್ಟುವ ಸನ್ನಿವೇಶಗಳನ್ನು ಚಿತ್ರೀಕರಿಸುವಾಗ ಅವರದ್ದೇ ಮಗುವನ್ನು ಚಿತ್ರಿಸಿಕೊಂಡಿದ್ದು ಮಾತ್ರ 'ಬೆಸ್ಟ್ ಮೆಮೊರಿ'. ನೈಜತೆಗೆ ಒತ್ತು ನೀಡುವುದು ಮುಖ್ಯ ಉದ್ದೇಶವಾಗಿದ್ದರಿಂದ, ಎಲ್ಲವೂ ಅದ್ಭುತವಾಗಿ ಮೂಡಿ ಬಂದಿದೆ ಎಂದು ನಿರ್ದೇಶಕರು ತಿಳಿಸಿದರು.

Mamata Rahut won an award at the Rajasthan Film Festival
ಮಮತಾ ರಾಹುತ್

ಇನ್ನೂ ಈ ಚಿತ್ರದಲ್ಲಿ ರೋಹಿತ್ ಎಂಬ ಯುವ ಪ್ರತಿಭೆ ಅಭಿನಯಿಸಿದ್ದಾರೆ. ಮುಖ್ಯಪಾತ್ರದಲ್ಲಿ ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ವಿಜಯಲಕ್ಷ್ಮಿ, ಪ್ರಮಿಳಾ ಸುಬ್ರಹ್ಮಣ್ಯ, ಸನ್ನಿ, ಶೀಬಾ, ದೀಪಿಕಾ ಗೌಡ, ಕವಿತ ಕಂಬಾರ್, ಮಟಿಲ್ಢಾ ಡಿಸೋಜಾ, ತೇಜಸ್ವಿನಿ, ಅರ್ಚನ ಗಾಯಕ್ವಾಡ್, ಮಂಜು ನಂಜನಗೂಡು, ರಘು ಸಮರ್ಥ್, ಪ್ರಿನ್ಸ್ ಜಿತಿನ್ ಕೋಟ್ಯಾನ್, ಬೇಬಿ ರಿಧಿ, ಬೇಬಿ ನಿಶಿತಾ, ಚೈತ್ರ, ಶ್ವೇತ ಮುಂತಾದವರು ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ಅನಂತ್ ಆರ್ಯನ್ ಅವರು ಸಂಗೀತ ಸಂಯೋಜಿದ್ದರೆ, ದೀಪಕ್ ಸಂಕಲನ ನಿರ್ವಹಿಸಿದ್ದಾರೆ. ಕಲೆ ಬಸವರಾಜ್ ಆಚಾರ್ಯ ಅವರದ್ದು. ಡಿ.ಐ ಕೆಲಸವನ್ನು ನಿಖಿಲ್ ಕಾರಿಯಪ್ಪ ನಿರ್ವಹಿಸಿದ್ದಾರೆ. "ಶ್ರೀ ಗಜನಿ ಪ್ರೊಡಕ್ಷನ್ಸ್" ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಈ ಚಿತ್ರಕ್ಕೆ ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು ಅವರು ಬಂಡವಾಳ ಹೂಡಿ ಒಂದು ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ.

ಇದನ್ನೂ ಓದಿ: 'ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದರು': ಕರಾಳ ದಿನಗಳನ್ನು ನೆನಪಿಸಿಕೊಂಡ ಖ್ಯಾತ ನಟಿ

ತಾರಿಣಿ ಸಿನಿಮಾವು ಅಯೋಧ್ಯ ಇಂಟರ್​ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್​ನಲ್ಲಿ ಅತ್ಯುತ್ತಮ ಸಾಮಾಜಿಕ ಚಿತ್ರ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್ ಫಿಲ್ಮ್ ಅವಾರ್ಡ್, ಬಾಲಿವುಡ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಇಂಡೋಗ್ಮಾ ಫೆಸ್ಟಿವಲ್ ಅವಾರ್ಡ್, ಫ್ರಾನ್ಸ್ ಇಂಟರ್​ನ್ಯಾಷನಲ್​​ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಗೋಲ್ಡನ್ ಜ್ಯೂರಿ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಉತ್ತರ ಪ್ರದೇಶದ ಗ್ಲೋಬಲ್ ತಾಜ್ ಇಂಟರ್​ನ್ಯಾಷನಲ್​​ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಮೊಕ್ಖೋ ಇಂಟರ್​​​ನ್ಯಾಷನಲ್ ಫಿಲ್ಮ್ ಅವಾರ್ಡ್, ಮಧ್ಯಪ್ರದೇಶದ ವಿಂಧ್ಯ ಇಂಟರ್​ನ್ಯಾಷನಲ್​​ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಮುಂಬೈ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ನ್ಯೂಯಾರ್ಕ್ ಫಿಲ್ಮ್ ಅವಾರ್ಡ್ ಸೇರಿದಂತೆ ಇನ್ನೂ ಮುಂತಾದ ಚಲನಚಿತ್ರೋವ್ಸಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗೆ ಭಾಜನವಾಗುತ್ತಿದೆ.

ಇದನ್ನೂ ಓದಿ: 'ಉಪಾಧ್ಯಕ್ಷ ಸಿನಿಮಾ ಯಶಸ್ಸಿಗೆ ಕನ್ನಡಿಗರ ಆಶೀರ್ವಾದವೇ ಕಾರಣ': ನಟ ಚಿಕ್ಕಣ್ಣ

ಕೆಲ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿರಂತರವಾಗಿ ನಡೆದು ಈಗ ಅದು ಬಹಿರಂಗವಾಗಿದ್ದು, ಕಣ್ಣೀರು ತರಿಸುವ ಸುದ್ದಿಯಾಗಿ ಹೊರಹೊಮ್ಮಿತ್ತು. ನಾವು ಇದೇ ವಿಷಯವನ್ನು ಕೇಂದ್ರೀಕರಿಸಿ ಸರ್ಕಾರದ ಮತ್ತು ಸ್ವಾಸ್ತ ನಾಗರೀಕ ಸಮಾಜದ ಪ್ರತಿನಿಧಿಯಾಗಿ ಭವಿಷ್ಯದ ಹಿತಚಿಂತನೆಯಿಂದ ಈ ಕಥೆಯನ್ನು ಸಿದ್ಧಪಡಿಸಿದ್ದೇವೆ. ಖಂಡಿತವಾಗಿಯೂ ಇದೊಂದು ಉತ್ತಮ ಚಿತ್ರವಾಗಿ ಎಲ್ಲರ ಗಮನಸೆಳೆದು ಯಶಸ್ವಿಯಾಗುತ್ತದೆ. ಇಂತಹ ವಿಭಿನ್ನ ಪ್ರಯತ್ನಕ್ಕೆ ಕನ್ನಡಿಗರು ಯಾವತ್ತೂ ಕೈಜೋಡಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ಚಿತ್ರತಂಡ ಅಭಿಪ್ರಾಯ ವ್ಯಕ್ತಪಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.