ETV Bharat / entertainment

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರದ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ - MONK THE YOUNG MOVIE

"ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.

"Monk the Young" ready to release
"ಮಾಂಕ್ ದಿ ಯಂಗ್" ರಿಲೀಸ್​ಗೆ ರೆಡಿ (Photo: ETV Bharat)
author img

By ETV Bharat Entertainment Team

Published : Jan 3, 2025, 7:47 PM IST

ಹೊಸ ತಂಡ ಸೇರಿ ನಿರ್ಮಿಸಿರುವ ವಿಭಿನ್ನ ಕಥಾಹಂದರದ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಅಂದರೆ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಶುರುಮಾಡುವ ಯೋಜನೆ ಹಾಕಿಕೊಂಡಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ.

ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.

"ಮಾಂಕ್ ದಿ ಯಂಗ್" ರಿಲೀಸ್​ಗೆ ರೆಡಿ (Photo: ETV Bharat)

ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ. ಸರೋವರ್ ಅವರು ನಾಯಕನಾಗಿ ನಟಿಸಿರುವ ಸಿನಿಮಾದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಸೇರಿದಂತೆ ಮೊದಲಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಸಂಧ್ಯಾ ಥಿಯೇಟರ್​ ಪ್ರಕರಣ: ನಟ ಅಲ್ಲು ಅರ್ಜುನ್​​ಗೆ ಜಾಮೀನು ಮಂಜೂರು

ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್, ಲಾಲ್ ಚಂದ್ ಖತಾರ್ ಮತ್ತು ಸರೋವರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲರೂ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ವಿಶೇಷ.

"ಮಾಂಕ್ ದಿ ಯಂಗ್" ರಿಲೀಸ್​ಗೆ ರೆಡಿ (Photo: film poster)

ಇದನ್ನೂ ಓದಿ: ಟಾಕ್ಸಿಕ್​​​, ಕಾಂತಾರ 2, ಸಂಜು ವೆಡ್ಸ್ ಗೀತಾ 2..​​: 2025ರಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಚಿತ್ರಗಳಿವು

ಕಾರ್ತಿಕ್ ಶರ್ಮಾ ಅವರ ಕ್ಯಾಮರಾ ಕೈಚಳಕ ಇರುವ ಚಿತ್ರದಲ್ಲಿ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಕ್ಲೈಮಾಕ್ಸ್ ಛಾಯಾಗ್ರಹಣ ದೀಪಕ್ ಹಾಗೂ ಧನುಷ್ ಬೆದ್ರೆ ಅವರ ಸಂಕಲನ, ಹರ್ಷವರ್ಧನ್ ಎಎಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.