ETV Bharat / entertainment

ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ಕ್ರಿಕೆಟಿಗರ ದಂಡು: ಧೋನಿ ಲುಕ್​ಗೆ ಫ್ಯಾನ್ಸ್​ ಫಿದಾ - ಎಮ್​ ಎಸ್​ ಧೋನಿ

ಮುಖೇಶ್ ಮತ್ತು ನೀತಾ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ದೇಶ ವಿದೇಶಿ ಕ್ರಿಕೆಟಿಗರು ಭಾಗಿಯಾಗಿದ್ದಾರೆ.

ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ಕ್ರಿಕೆಟಿಗರು ದಂಡ: ಧೋನಿ ಲುಕ್​ಗೆ ಫ್ಯಾನ್ಸ್​ ಫಿದಾ

author img

By ETV Bharat Karnataka Team

Published : Mar 2, 2024, 5:37 PM IST

Updated : Mar 3, 2024, 8:50 PM IST

ನವದೆಹಲಿ: ಉದ್ಯಮಿ ಹಾಗೂ ರಿಲಯನ್ಸ್​ ಇಂಡಸ್ಟ್ರೀಸ್​ ಮುಖ್ಯಸ್ಥ ಮುಖೇಶ್​ ಅಂಬಾನಿ ಅವರ ಪುತ್ರ ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭ ಗುಜರಾತ್‌ನ ಜಾಮ್​ನಗರದಲ್ಲಿ ಅದ್ಧೂರಿಯಾಗಿ ಜರುಗುತ್ತಿದೆ.

ಈ ಸಮಾರಂಭದಲ್ಲಿ ದೇಶ ಮತ್ತು ವಿದೇಶಗಳ ಅನೇಕ ಸೆಲೆಬ್ರಿಟಿಗಳು, ಚಲನಚಿತ್ರ ತಾರೆಯರು ಮತ್ತು ಕ್ರಿಕೆಟಿಗರು ಭಾಗಿಯಾಗಿದ್ದಾರೆ. ಅದರಲ್ಲೂ ಕ್ರಿಕೆಟಿಗರು ಸ್ಟೈಲಿಶ್​ ಲುಕ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಟೀಮ್​ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಪತ್ನಿ ಸಾಕ್ಷಿ ಅವರ​ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಧೋನಿ ಕಪ್ಪು ಮತ್ತು ಬಿಳಿ ಬಣ್ಣದ ಉಡುಪನ್ನು ಧರಿಸಿದ್ದರೆ ಸಾಕ್ಷಿ ಕೂಡ ಕಪ್ಪು ಬಣ್ಣದ ಲೆಹೆಂಗಾದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ರಾಯಲ್ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ.

ಉಳಿದ ಭಾರತ ತಂಡದ ಹಾಲಿ ನಾಯಕ ರೋಹಿತ್ ಶರ್ಮಾ ಕೂಡ ಈ ಸಮಾರಂಭದಲ್ಲಿ ಬ್ಲ್ಯಾಕ್ ಸೂಟ್‌ನಲ್ಲಿ ಯಾವುದೇ ಬಾಲಿವುಡ್ ತಾರೆಗಿಂತ ಕಡಿಮೆಯಿಲ್ಲ ಎಂಬಂತೆ ಕಾಣಿಸಿಕೊಂಡಿದ್ದಾರೆ. ಇವರಷ್ಟೇ ಅಲ್ಲದೇ ನ್ಯೂಜಿಲೆಂಡ್‌ನ ಸ್ಟಾರ್ ಬೌಲರ್ ಟ್ರೆಂಟ್​​ ಬೌಲ್ಟ್​ ಕೂಡ ತಮ್ಮ ಪತ್ನಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ವೆಸ್ಟ್ ಇಂಡೀಸ್ ಸ್ಟಾರ್ ಆಲ್ ರೌಂಡರ್ ಕೀರಾನ್ ಪೊಲಾರ್ಡ್ ಕೂಡ ತಮ್ಮ ಪತ್ನಿಯೊಂದಿಗೆ ಭಾಗಿಯಾಗಿದ್ದಾರೆ. ವೆಸ್ಟ್‌ಇಂಡೀಸ್‌ನ ಮತ್ತೊಬ್ಬ ಮಾಜಿ ಕ್ರಿಕೆಟಿಗ ಡ್ವೇನ್ ಬ್ರಾವೋ ಕೂಡ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಕಿಂಗ್ ಖಾನ್ ಜೊತೆಗಿನ ಚಿತ್ರಕ್ಕೆ ಪೋಸ್ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫೇಸ್​ಬುಕ್​ ಸಿಇಒ ಮಾರ್ಕ್​ ಜುಕರ್​ಬರ್ಗ್​ ದಂಪತಿ ಭಾಗಿ: ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತು ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಕೂಡ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಎರಡನೇ ದಿನದ ಕಾರ್ಯಕ್ರಮದಲ್ಲೂ ಭಾಗಿಯಾದರು. ಇದಕ್ಕೂ ಮುನ್ನ ಮೊದಲ ದಿನದ ಕಾರ್ಯಕ್ರಮದಲ್ಲಿ ಭಾಗಿಯಾದ ಜುಕರ್‌ಬರ್ಗ್ ತಮ್ಮ ಹೆಂಡತಿಯೊಂದಿಗಿನ ಚಿತ್ರವನ್ನು Instagramನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಫಾರೆಸ್ಟ್​ ಥೀಮ್​ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.

ಫೋಟೋ ಹಂಚಿಕೊಂಡ ಆಲಿಯಾ ಭಟ್: ಬಾಲಿವುಡ್​ ನಟಿ ಆಲಿಯಾ ಭಟ್​ ಇಂದು ತಮ್ಮ ಇತ್ತೀಚಿನ ಫೋಟೋಶೂಟ್‌ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳು ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಅವರ ಮದುವೆಯ ಮೊದಲ ದಿನದ ಚಿತ್ರಗಳಾಗಿವೆ. ಈ ಗ್ರ್ಯಾಂಡ್ ಈವೆಂಟ್‌ನಲ್ಲಿ ಭಾಗಿಯಾದ ಅವರು ನೀಲಿ ಬಣ್ಣದ ಗೌನ್ ನೊಂದಿಗೆ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಚಿತ್ರರಂಗದಲ್ಲಿ 'ನೆಪೋಟಿಸಂ': ಕಂಗನಾಗೆ ಸಿಕ್ತು ತೃಪ್ತಿಕರ ಉತ್ತರ; ಯಾರು, ಏನಂದ್ರು?

Last Updated : Mar 3, 2024, 8:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.