ETV Bharat / entertainment

'ನನ್ನ ಸಿನಿಮಾ ಯಶಸ್ಸಿನಲ್ಲಿ ಸಂಗೀತ ಮಹತ್ವದ ಪಾತ್ರ ವಹಿಸಿದೆ': ಗೋಲ್ಡನ್ ಸ್ಟಾರ್ ಗಣೇಶ್​​ - Krishnam Pranaya Sakhi

ನಿರೀಕ್ಷೆಗೂ ಮೀರಿ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಹಾಡುಗಳು ಹಿಟ್ ಆಗಿವೆ. ಈ ಹಿನ್ನೆಲೆಯಲ್ಲಿ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿರುವ 'ಆನಂದ್ ಆಡಿಯೋ' ಈವೆಂಟ್‌ವೊಂದನ್ನು ಆಯೋಜಿಸಿತ್ತು. ನಾಯಕ ನಟ ಗೋಲ್ಡನ್​​ ಸ್ಟಾರ್​​ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸರಾಜು ತಮ್ಮ ಅಭಿಪ್ರಾಯ ಹಂಚಿಕೊಂಡರು.

Krishnam Pranaya Sakhi  event
'ಕೃಷ್ಣಂ ಪ್ರಯಣ ಸಖಿ' ಈವೆಂಟ್​ (ETV Bharat)
author img

By ETV Bharat Entertainment Team

Published : Aug 5, 2024, 7:01 PM IST

'ಕೃಷ್ಣಂ ಪ್ರಣಯ ಸಖಿ'. ಗೋಲ್ಡನ್ ಸ್ಟಾರ್ ಗಣೇಶ್ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರ. ಶ್ರೀನಿವಾಸರಾಜು ನಿರ್ದೇಶನದ ಈ ಪ್ರೇಮ್​ಕಹಾನಿ ಬಿಡುಗಡೆ ಹೊಸ್ತಿಲಿನಲ್ಲಿದೆ. ಗುರುವಾರ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಈ ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿ, ‌ಮಿಲಿಯನ್​​ಗಟ್ಟಲೆ ವೀಕ್ಷಣೆಯಾಗಿದೆ. ಹಾಡುಗಳು ಸಖತ್​ ಟ್ರೆಂಡಿಂಗ್​ನಲ್ಲಿದ್ದು, ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಆಹ್ವಾನಿಸುತ್ತಿದೆ.

Krishnam Pranaya Sakhi event
'ಕೃಷ್ಣಂ ಪ್ರಯಣ ಸಖಿ' ಸಾಂಗ್​​ ಸಕ್ಸಸ್ ಈವೆಂಟ್​​ (ETV Bharat)

ನಿರೀಕ್ಷೆಗೂ ಮೀರಿ ಕೃಷ್ಣಂ ಪ್ರಣಯ ಸಖಿ ಹಾಡುಗಳು ಹಿಟ್ ಆಗಿವೆ. ದ್ವಾಪರ ಸಾಂಗ್​​ ಅಂತೂ ಹೆಚ್ಚು​ ಟ್ರೆಂಡಿಂಗ್​​​ನಲ್ಲಿದೆ ಅಂತಲೇ ಹೇಳಬಹುದು. ಈ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿರುವ 'ಆನಂದ್ ಆಡಿಯೋ' ಸಂಸ್ಥೆ ಈವೆಂಟ್​ ಒಂದನ್ನು ಆಯೋಜಿಸಿತ್ತು. ಹಾಡುಗಳನ್ನು ಬರೆದಿರುವವರನ್ನು ಹಾಗೂ ಹಾಡಿದರವನ್ನು ಫಲಕ ನೀಡಿ ಸನ್ಮಾನಿಸಿದರು. ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಗೀತರಚನೆಕಾರ ನಿಶಾನ್ ರೈ ಹಾಗೂ ಚಿತ್ರತಂಡದ ಸದಸ್ಯರನ್ನು ಆನಂದ್ ಆಡಿಯೋದ ಶ್ಯಾಮ್ ಮತ್ತು ಆನಂದ್ ಆತ್ಮೀಯವಾಗಿ ಸನ್ಮಾನಿಸಿದರು.

ಸಂಭ್ರಮಾಚರಣೆಯಲ್ಲಿ ಮೊದಲು ಮಾತನಾಡಿದ ಗೋಲ್ಡನ್​​ ಸ್ಟಾರ್​​ ಗಣೇಶ್, ಹೊಸದಾಗಿ ನಾಲ್ಕನೇ ಹಾಡು ಅನಾವರಣಗೊಂಡಿದೆ. ಈವರೆಗೂ ಬಿಡುಗಡೆಯಾಗಿರುವ 3 ಹಾಡುಗಳು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿವೆ. ಹಾಗಾಗಿ, ಈ ಸಮಾರಂಭವನ್ನು ಆನಂದ್ ಆಡಿಯೋದವರು ಆಯೋಜಿಸಿದ್ದಾರೆ‌. ಅವರಿಗೆ ಬಹಳ ಧನ್ಯವಾದಗಳು. ಇತ್ತೀಚಿನ ದಿನಗಳಲ್ಲಿ ಹಾಡುಗಳು ಹಿಟ್ ಆಗೋದು ಬಹಳ ಕಡಿಮೆ. ಮೊದಲೆಲ್ಲಾ ಆಡಿಯೋ ಹಿಟ್‍ ಎಂದು ಕಾರ್ಯಕ್ರಮ ಮಾಡುತ್ತಿದ್ದೆವು. ಇತ್ತೀಚಿನ ದಿನಗಳಲ್ಲಿ ಆಗಿರಲಿಲ್ಲ. ಮೂರನೇ ಹಾಡು ಯಶಸ್ವಿಯಾದಾಗ ಏಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಹೇಳುತ್ತಿದ್ದರು.

Krishnam Pranaya Sakhi event
'ಕೃಷ್ಣಂ ಪ್ರಯಣ ಸಖಿ' ಈವೆಂಟ್​ನಲ್ಲಿ ಗಣಿ (ETV Bharat)

ಆನಂದ್ ಆಡಿಯೋದವರ ಜೊತೆಗೆ ನನ್ನದು ಬಹಳ ದೊಡ್ಡ ಸಂಬಂಧ. ನನ್ನ ಚಿತ್ರ ಜೀವನದ ಯಶಸ್ಸಿನಲ್ಲಿ ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ. ಆ ಕ್ರೆಡಿಟ್‍ ಆನಂದ್‍ ಆಡಿಯೋದವರಿಗೂ ಸಲ್ಲಬೇಕು. ಈ ಚಿತ್ರದ ಆಡಿಯೋ ಹಕ್ಕುಗಳನ್ನು ಡಬ್ಬಲ್‍ ದುಡ್ಡು ಕೊಟ್ಟು ಆನಂದ್ ಆಡಿಯೋದವರು ಖರೀದಿಸಿದ್ದಾರೆ. ಮುಂದಿನ ಚಿತ್ರಕ್ಕೆ ಇನ್ನೂ ಡಬಲ್‍ ದುಡ್ಡು ಕೊಡಲಿ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೆರಿದಂತೆ ಪ್ರತೀ ಗೀತರಚನೆಕಾರ, ಗಾಯಕರೆಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ಜಸ್ಕರಣ್ ಅವರು ವೇದಿಕೆ ಮೇಲೆ ನಿಂತು ಹಾಡಿದಾಗ ದೈವಿಕ ಭಾವನೆ ಮೂಡಿತು. ಇವರು ಯಾರೋ ನಮ್ಮ ತರಹದವರೇ ಎಂದೆನಿಸಿತು. ಅವರು ಚಿತ್ರದಲ್ಲಿ ಬಹಳ ಚೆನ್ನಾಗಿ ಹಾಡಿದ್ದಾರೆ. ಅದರಲ್ಲೂ ದ್ವಾಪರ ಹಾಡಂತೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಜನಪ್ರಿಯವಾಗಿದೆ. ರೀಲ್ಸ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಡುಗಳ ಯಶಸ್ಸಿನ ಹೆಚ್ಚಿನ ಭಾಗದ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು. ಏಕೆಂದರೆ ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಬಹಳ ಬ್ಯುಸಿ. ಅವರನ್ನು ಹಿಡಿಯೋದೇ ಕಷ್ಟ. ಮಧ್ಯಾಹ್ನದ ಊಟ ಆಯ್ತಾ ಎಂದು ಫೋನ್ ಮಾಡಿದ್ರೆ, ರಾತ್ರಿ ವಾಪಸ್ ಕರೆ ಮಾಡುತ್ತಾರೆ. ಅಷ್ಟು ಬ್ಯುಸಿ. ಅವರಿಂದ ಇಷ್ಟು ಕೆಲಸ ಮಾಡಿಸಿದ್ದಾರೆ. ಒಂದೊಂದು ಹಾಡು ಸಹ ದೊಡ್ಡ ಹಿಟ್‍ ಆಗುತ್ತದೆ, ಆ ತರಹ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಅದನ್ನು ನಿಜ ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದರು.

Krishnam Pranaya Sakhi event
'ಕೃಷ್ಣಂ ಪ್ರಯಣ ಸಖಿ' ಚಿತ್ರತಂಡ (ETV Bharat)

ನಂತರ ಮಾತನಾಡಿದ ನಿರ್ದೇಶಕ ಶ್ರೀನಿವಾಸರಾಜು, ಅರ್ಜುನ್‍ ಜನ್ಯ ಅವರು ಮ್ಯಾಜಿಕಲ್‍ ಕಂಪೋಸರ್ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಚಿತ್ರ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಆದರೆ, ಹೀಗೇ ಆಗುತ್ತದೆ ಎಂದು ಹೇಳುವುದು ಕಷ್ಟ. ಅರ್ಜುನ್‍ ಬಹಳ ಬ್ಯುಸಿ. ಅದರಲ್ಲೂ ನಮಗೆ ಸಮಯ ಕೊಟ್ಟು, ಈ ರೀತಿ ಜನಪ್ರಿಯ ಹಾಡುಗಳನ್ನು ಮಾಡಿಕೊಟ್ಟಿರುವುದು ಬಹಳ ಖುಷಿಯ ವಿಷಯ. ಚಿತ್ರದಲ್ಲಿ ಮೊದಲು 9 ಹಾಡುಗಳಿದ್ದವು. ಕೊನೆಗೆ ಕಡಿಮೆಯಾಗಿ, 7 ಹಾಡುಗಳಾಗಿವೆ. ಎಲ್ಲಾ ಹಾಡುಗಳು ಹಿಟ್ ಆಗುತ್ತವೆ ಎಂಬ ನಂಬಿಕೆ ನನಗೆ ಮೊದಲ ದಿನದಿಂದಲೇ ಇತ್ತು. ಅದು ಸಾಬೀತಾಗಿದೆ. ಈ ವಿಷಯದಲ್ಲಿ ಅರ್ಜುನ್‍ ಜನ್ಯ ಅವರಿಗೆ ಧನ್ಯವಾದ ತಿಳಿಸಬೇಕು.

ಇದನ್ನೂ ಓದಿ: 'ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನನ್ನ ಕಣ್ಮುಂದೆ ನಡೆದ ಘಟನೆ': ನಿರ್ದೇಶಕ ಹೇಮಂತ್ ರಾವ್ - Director Hemanth Rao

ಜೊತೆಗೆ ಈ ಹಾಡುಗಳನ್ನು ಪ್ರಮೋಟ್‍ ಮಾಡುತ್ತಿರುವ ಮತ್ತು ನನ್ನ ಮೇಲೆ ನಂಬಿಕೆ ಇಟ್ಟು ಚಿತ್ರಕ್ಕೆ ಹಣ ಹೂಡಿದ ನಿರ್ಮಾಪಕ ಪ್ರಶಾಂತ್‍ ಅವರಿಗೆ ಧನ್ಯವಾದಗಳು. ಈ ಚಿತ್ರ ಆಗುವುದಕ್ಕೆ ಪ್ರಮುಖವಾಗಿ ಗಣೇಶ್‍ ಅವರೇ ಕಾರಣ. ಅವರು ನನ್ನ ಮೇಲೆ ನಂಬಿಕೆ ಇಟ್ಟರು. ನನ್ನ ಜಾನರ್​ನಿಂದ ಆಚೆ ಬಂದು ಚಿತ್ರ ಮಾಡಲು ಪ್ರೋತ್ಸಾಹ ಕೊಟ್ಟರು. ಪ್ರತೀ ಹಂತದಲ್ಲೂ ತಮ್ಮನ್ನು ತೊಡಗಿಸಿಕೊಂಡರು ಎಂದರು. ಇನ್ನೂ, 'ದ್ವಾಪರ'ವರೆಗೂ ಬೇರೆ ಬೇರೆ ರೀತಿಯ ಹಾಡುಗಳಿವೆ. ಮುಂದಿನ ಒಂದು ವಾರದಲ್ಲಿ ಮೆಲೋಡಿ ಸಾಂಗ್ಸ್ ಬರಲಿವೆ. ಈ ಚಿತ್ರಕ್ಕೆ ಟ್ರೇಲರ್ ಅವಶ್ಯಕತೆ ಇಲ್ಲ ಎಂದು ಒಂದು ವರ್ಷದ ಹಿಂದೆಯೇ ಅನಿಸಿತ್ತು. ಇದೊಂದು ಮ್ಯೂಸಿಕಲ್‍ ಚಿತ್ರವಾದ್ದರಿಂದ, ಈ ಚಿತ್ರವನ್ನು ಹಾಡುಗಳಿಂದ ಮಾತ್ರ ಪ್ರಮೋಟ್‍ ಮಾಡುವುದು ನನ್ನ ಆಸೆ. ಹಾಗಾಗಿ, ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡುತ್ತಿಲ್ಲ. ಈ ಕಾನ್ಸೆಪ್ಟ್​​ ಈ ಚಿತ್ರಕ್ಕೆ ಮಾತ್ರ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.

Krishnam Pranaya Sakhi  team

ಇದನ್ನೂ ಓದಿ: ''ಎಂಥ ಚೆಂದಾನೆ ಇವಳು'' ಅಂತಿದ್ದಾರೆ ರಿಷಬ್​​ ಶೆಟ್ಟಿ ತಂಡ: 'ಲಾಫಿಂಗ್ ಬುದ್ಧ'ನ ಮೊದಲ ಹಾಡು ಬಿಡುಗಡೆಗೆ ದಿನ ನಿಗದಿ - Enta Chendane Ivalu

ಗಣೇಶ್, ನಿರ್ದೇಶಕ ಶ್ರೀನಿವಾಸರಾಜು ಜೊತೆಗೆ ನಟಿ ಶರಣ್ಯ ಶೆಟ್ಟಿ, ಹಿರಿಯ ನಟ ರಾಮಕೃಷ್ಣ, ಕಾರ್ಯಕಾರಿ ನಿರ್ಮಾಪಕ ಶರತ್, ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಹಾಡು ಬರೆದಿರುವ ನಿಶಾನ್ ರೈ ಹಾಗೂ ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಮತ್ತು ಆನಂದ್ ಉಪಸ್ಥಿತರಿದ್ದರು. ಅದ್ಧೂರಿ ವೆಚ್ಚದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿರೋ 'ಕೃಷ್ಣಂ ಪ್ರಣಯಂ ಸಖಿ' ಸಿನಿಮಾ ಇದೇ ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.