ETV Bharat / entertainment

ಸ್ವಯಂಭು ಸಿನಿಮಾ ಮೂಲಕ ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ ನಭಾ ನಟೇಶ್ - NABHA NATESH IN SWAYAMBHU

author img

By ETV Bharat Karnataka Team

Published : Apr 4, 2024, 7:45 PM IST

ಸ್ವಯಂಭು ಚಿತ್ರದ ಮೂಲಕ ನಟಿ ನಭಾ ಎರಡನೇ ಇನ್ನಿಂಗ್ಸ್​ ಆರಂಭಿಸಿದ್ದಾರೆ.

ಸ್ವಯಂಭು ಸಿನಿಮಾ ಮೂಲಕ ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ ನಭಾ

ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಬೆಡಗಿ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್​ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಸಿಕೊಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ.

ಸಣ್ಣ ಝಲಕ್ ಮೂಲಕ ಚಿತ್ರತಂಡ ನಭಾರನ್ನು ಚಿತ್ರ ಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದ್ರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಶಿವಣ್ಣ ನಟನೆಯ ವಜ್ರಕಾಯ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್ ಮೂಲಕ ಪ್ರಖ್ಯಾತಿ ಗಳಿಸಿದರು.

ವಜ್ರಕಾಯ ಬೆಡಗಿ ನಭಾ
ವಜ್ರಕಾಯ ಬೆಡಗಿ ನಭಾ ನಟೇಶ್

ನಿಖಿಲ್ ನಾಯಕ ನಟನಾಗಿರುವ ಸ್ವಯಂಭು ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ಪಾತ್ರಕ್ಕಾಗಿ ಅವರು ತಯಾರಿಯಲ್ಲಿದ್ದಾರೆ. ಭರತ್ ಕೃಷ್ಣಮಾಚಾರಿ ಸ್ವಯಂಭು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಪಿಕ್ಸೆಲ್ ಸ್ಟುಡಿಯೋ ಮೂಲಕ ಭುವನ್ ಹಾಗೂ ಶ್ರೀಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಟ್ಯಾಗೋರೆ ಮಧು ಪ್ರಸ್ತುತಪಡಿಸುತ್ತಿದ್ದಾರೆ. ಸ್ವಯಂಭು ಎಂದರೆ ಸ್ವಯಂ ಹುಟ್ಟು ಎಂದರ್ಥ. ಈ ಸಿನಿಮಾ ನಿಖಿಲ್ ಸಿದ್ದಾರ್ಥ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರವಾಗಿದೆ. ಮನೋಜ್ ಪರಮಹಂಸ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಾಸುದೇವ್ ಮುನೆಪ್ಪಗರಿ ಚಿತ್ರಕ್ಕೆ ಸಂಭಾಷಣೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಯುವ ನಟಿ 'ಜಾಜಿ'ಯ ಆಲ್ಬಂ ಹಾಡಿಗೆ ಚಾಲೆಂಜಿಂಗ್ ಸ್ಟಾರ್ ಸಾಥ್ - jaaji album song

ETV Bharat Logo

Copyright © 2024 Ushodaya Enterprises Pvt. Ltd., All Rights Reserved.