ETV Bharat / entertainment

ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನಕ್ಕೆ ಹೊಸ ಸಿನಿಮಾ ಅನೌನ್ಸ್​: ತೆಲುಗು ಪ್ರೊಡಕ್ಷನ್​​​ ಹೌಸ್​ ಜೊತೆ ಕೈಜೋಡಿಸಿದ ತಾರೆ - SRI MURALI BIRTHDAY

ಕನ್ನಡ ಚಿತ್ರರಂಗದ ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನಕ್ಕೆ ಹೊಸ ಸಿನಿಮಾ ಘೋಷಣೆಯಾಗಿದೆ.

Roaring Star Sri Murali birthday
ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನ (Photo: ETV Bharat, Film Poster)
author img

By ETV Bharat Entertainment Team

Published : Dec 17, 2024, 12:58 PM IST

ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ತಾರೆಯರಲ್ಲೋರ್ವರಾಗಿ ಗುರುತಿಸಿಕೊಂಡಿರುವ ಶ್ರೀಮುರಳಿ ಅವರಿಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. 43ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸ್ಯಾಂಡಲ್​ವುಡ್​ ರೋರಿಂಗ್​ ಸ್ಟಾರ್​ಗೆ ಕುಟುಂಬ ಸದಸ್ಯರು, ಆಪ್ತರು, ಸಿನಿ ಸ್ನೇಹಿತರು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಫ್ಯಾನ್ಸ್​ಗಾಗಿ ನಟನ ಕಡೆಯಿಂದ ಸ್ಪೆಷಲ್​ ಟ್ರೀಟ್​​ ಕೂಡಾ ಸಿಕ್ಕಿದೆ.

ಆ ಟ್ರೀಟ್​ ಏನು ಅಂತೀರಾ..? ಶ್ರೀಮುರಳಿ ಜನ್ಮದಿನಕ್ಕೆ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ತೆಲುಗಿನ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ ಕೈಜೋಡಿಸಿದ್ದು, ಇಂದು ನಟನ ಜನ್ಮದಿನ ಹಿನ್ನೆಲೆ, ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ಈ ಬಗ್ಗೆ ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ.

'ಬಘೀರ' ಸಿನಿಮಾ ಮೂಲಕ ಸೂಪರ್​​ ಹಿಟ್ ಪಡೆದ ರೋರಿಂಗ್ ಸ್ಟಾರ್​ ಅವರ ಮುಂದಿನ ಸಿನಿಮಾ ಯಾವುದು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿರಲಿಲ್ಲ. ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂಬರುವ ಪ್ರಾಜೆಕ್ಟ್​ನ ಅಪ್ಡೇಟ್​ ಹೊರಬಿದ್ದಿದೆ. ಟಾಲಿವುಡ್​ನ ಫೇಮಸ್​ ಪ್ರೊಡಕ್ಷನ್​ ಹೌಸ್​​‌ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ನಾಯಕನಾಗಿ ಶ್ರೀಮುರಳಿ ಬಣ್ಣ ಹಚ್ಚಲಿದ್ದಾರೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಸಿನಿಮಾ ನಿರ್ಮಾಣದ ಮೂಲಕ ಕನ್ನಡ ಚಿತ್ರೋದ್ಯಮ ಪ್ರವೇಶಿಸುತ್ತಿದೆ. ಈಗಾಗಲೇ ಕನ್ನಡದ ನಿರ್ಮಾಣ ಸಂಸ್ಥೆಗಳು ಬಹುಭಾಷೆ ಸಿನಿಮಾ ನಿರ್ಮಾಣದಲ್ಲಿ‌ ತೊಡಗಿವೆ. ಇದೀಗ ಟಾಲಿವುಡ್​​ನ ಜನಪ್ರಿಯ ಸಂಸ್ಥೆ ಕನ್ನಡದ ಸಿನಿಮಾವೊಂದನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಇದನ್ನೂ ಓದಿ: ಚಂದನ್‌ ಶೆಟ್ಟಿ-ನಿವೇದಿತಾ ಗೌಡ TO ರೆಹಮಾನ್​​​, ಧನುಷ್​: 2024ರಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಸೆಲೆಬ್ರಿಟಿಗಳ ಡಿವೋರ್ಸ್ ಲಿಸ್ಟ್

'ಬಘೀರ' ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಮತ್ತೊಂದು‌ ಮಹೋನ್ನತ ಸಿನಿಮಾದ ಭಾಗವಾಗುತ್ತಿದ್ದಾರೆ ಶ್ರೀಮುರಳಿ. ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳಲ್ಲೂ ಇದು ಕುತೂಹಲ ಮೂಡಿಸಿದೆ. ಸದ್ಯ‌ ಶ್ರೀಮುರಳಿ ಬರ್ತಡೇ ಸಲುವಾಗಿ ಅಧಿಕೃತ ಪೋಸ್ಟರ್ ಬಿಡುಗಡೆ ಆಗಿದೆ. ಈ ಪೋಸ್ಟರ್ ಸಹ ಅಷ್ಟೇ ಎಪಿಕ್ ಆಗಿದೆ. ಶ್ರೀಮುರಳಿ ಕರಿಯರ್​ಗೂ ಈ ಚಿತ್ರ ಹೊಸ ಮೈಲಿಗಲ್ಲಾಗುವ ಎಲ್ಲಾ ಲಕ್ಷಣಗಳಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿಯು ಮುಂದಿನ ದಿನಗಳಲ್ಲಿ ನಿರ್ದೇಶಕರು, ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದೆ.

ಇದನ್ನೂ ಓದಿ: ಹುಸಿಯಾಯ್ತು ಅಭಿಮಾನಿಗಳ ನಿರೀಕ್ಷೆ! 2024ರಲ್ಲಿ ಸಿನಿಮಾ ಮಾಡದ ಸ್ಯಾಂಡಲ್​​ವುಡ್​ ಸೂಪರ್​​ಸ್ಟಾರ್​ಗಳಿವರು

'ಮೂರು ವರ್ಷಗಳ ಶ್ರಮಕ್ಕೆ ಸಿಕ್ಕ ಪ್ರತಿಫಲ': ಸೂರಿ ನಿರ್ದೇಶನದ ಬಘೀರ ಸಿನಿಮಾ ಅಕ್ಟೋಬರ್​​ 31ರಂದು ತೆರೆಕಂಡು ಸೂಪರ್​ ಹಿಟ್​ ಆಗಿದೆ. ಈ ಬಗ್ಗೆ ಖುಷಿ ಹಂಚಿಕೊಂಡಿದ್ದ ನಾಯಕ ನಟ ಶ್ರೀಮುರಳಿ, ''ನನ್ನ 3 ವರ್ಷಗಳ ಶ್ರಮಕ್ಕೆ ಸಿಕ್ಕ ಪ್ರತಿಫಲ. ಈ ವಿಜಯವನ್ನು ನನ್ನ ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಗೆಲುವು ಸಾಧ್ಯವಾಗಿದ್ದು. ಯಶಸ್ಸಿಗೆ ನಾನೊಬ್ಬನೇ ಕಾರಣನಲ್ಲ, ಇಡೀ ಚಿತ್ರತಂಡದ ಶ್ರಮದಿಂದ ಯಶಸ್ಸು ಲಭಿಸಿದೆ'' ಎಂದು ಹೇಳಿಕೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.