ಕನ್ನಡದ ಬಹುನಿರೀಕ್ಷಿತ ಸಿನಿಮಾ 'ಫೈರ್ ಫ್ಲೈ' ಬಹಳಷ್ಟು ವಿಶೇಷತೆ ಹೊಂದಿದೆ. ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬುದರ ಜೊತೆಗೆ, ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿರುವುದು ಇದಕ್ಕೆ ಕಾರಣವಾಗಿದೆ. ಹಿರಿಯ ನಟ ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೊಸ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ಫೈರ್ ಫ್ಲೈ' ಸಿನಿಮಾದ ಆಡಿಯೋ ಹಕ್ಕು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ.
ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ, ನಟಿಸುತ್ತಿರುವ ಈ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಲಭ್ಯವಾಗಲಿದೆ. ಸಹಜವಾಗಿ ಹೊಸ ಪ್ರತಿಭೆಗಳ ಚಿತ್ರದ ಆಡಿಯೋ ರೈಟ್ಸ್ ಪಡೆಯಲು ಲಕ್ಷಗಟ್ಟಲೇ ಹಣ ಕೊಡುವುದು ತೀರಾ ಕಡಿಮೆ. ಆದರೆ, ನಿವೇದಿತಾ ನಿರ್ಮಾಣದ ಈ ಚಿತ್ರದ ಆಡಿಯೋ ಹಕ್ಕನ್ನು ಆನಂದ್ ಆಡಿಯೋ ಸಂಸ್ಥೆಯು 25 ಲಕ್ಷ ರೂ.ಗಳಿಗೆ ಖರೀದಿಸಿದೆ ಅಂತಾ ಆಡಿಯೋ ಕಂಪನಿಯ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅನಧಿಕೃತವಾಗಿ ಸೆಟ್ ನಿರ್ಮಾಣ ಆರೋಪ: ಯಶ್ 'ಟಾಕ್ಸಿಕ್' ನಿರ್ಮಾಣ ಸಂಸ್ಥೆಗೆ ಹೈಕೋರ್ಟ್ ನೋಟಿಸ್ - Toxic Set Issue
ಚಿತ್ರದ ಮೂಲಕ ವಂಶಿ ಸ್ವತಂತ್ರ ನಿರ್ದೇಶಕ ಹಾಗೂ ಪೂರ್ಣ ಪ್ರಮಾಣದ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಜಯ್ ರಾಮ್ ಸಹ ನಿರ್ದೇಶನ ಮಾಡುತ್ತಿದ್ದು, ಅಭಿಲಾಷ್ ಕಳತ್ತಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಮಂದಿರಗಳನ್ನು ಬೆಳಗಲಿದೆ.
ಇದನ್ನೂ ಓದಿ: ಸಿನಿಮಾ ಟಿಕೆಟ್ ಮೇಲೆ ಸೆಸ್: 'ಪ್ರೇಕ್ಷಕರಿಗೆ, ನಿರ್ಮಾಪಕರಿಗೆ ಹೊರೆ' - ಫಿಲ್ಮ್ ಚೇಂಬರ್ ಅಧ್ಯಕ್ಷ - NM Suresh