ETV Bharat / entertainment

'ದರ್ಶನ್​​​ಗೆ ಮನೆಯೂಟ ನೀಡುವ ಅಗತ್ಯವಿಲ್ಲ': ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ - Home Food for Darshan

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಅವರ ನ್ಯಾಯಾಂಗ ಬಂಧನ ಮುಂದುವರಿದಿದೆ. ಮನೆಯೂಟ ಒದಗಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಮುಂದುವರಿದಿದೆ. ಇದೀಗ ದರ್ಶನ್ ಆರೋಗ್ಯ ಸ್ಥಿರವಾಗಿದ್ದು, ಮನೆಯೂಟದ ಅಗತ್ಯವಿಲ್ಲ ಎಂದು ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ.

Actor Darshan
ನಟ ದರ್ಶನ್​​​ (ETV Bharat)
author img

By ETV Bharat Karnataka Team

Published : Aug 8, 2024, 12:38 PM IST

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್​​ ಸಂಕಷ್ಟ ಮುಂದುವರಿದಿದೆ. ಸದ್ಯ ಜೈಲೂಟವನ್ನೇ ಮಾಡಬೇಕಾದ ಪರಿಸ್ಥಿತಿಯಲ್ಲಿ ‌ನಟ ದರ್ಶನ ಇದ್ದಾರೆ.

ಮನೆಯೂಟಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ಗೆ ಮೊರೆಹೋಗಿದ್ದ ದರ್ಶನ್​​​ಗೆ ಹಿನ್ನಡೆಯಾಗಿದ್ದು, ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ದರ್ಶನ್ ಆರೋಗ್ಯ ಸ್ಥಿರವಾಗಿದೆ. ಮನೆಯೂಟದ ಅಗತ್ಯವಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಮನೆಯೂಟ, ಹಾಸಿಗೆ, ಬಟ್ಟೆ ನೀಡಲು ಸಾಧ್ಯವಿಲ್ಲ. ಆರೋಪಿ ದರ್ಶನ್‌ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮನೆಯೂಟ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ ಎಂದು ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಮನೆಯೂಟ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಜೈಲಿನ ವೈದ್ಯಾಧಿಕಾರಿಗಳ ವರದಿ ಆಧರಿಸಿ ಪ್ರಿಸನ್ ಡಿಜಿಪಿಯಿಂದ ಆದೇಶ ಹೊರಡಿಸಲಾಗಿದೆ. ದರ್ಶನ್ ಅವರಿಗೆ ಮನೆಯೂಟ ನೀಡುವ ಅಗತ್ಯ ಇಲ್ಲ ಎಂದು ಹಿಂಬರಹ ನೀಡಿದ್ದಾರೆ. ದರ್ಶನ್ ಅರ್ಜಿ ಕುರಿತು ತೆಗೆದುಕೊಂಡ ನಿರ್ಧಾರವನ್ನು ಜೈಲಿನ ಅಧಿಕಾರಿಗಳು ಹೈಕೋರ್ಟ್​​ಗೆ ತಿಳಿಸಲಿದ್ದಾರೆ.

ಜೈಲೂಟ ಒದಗಿಸುವ ಕುರಿತಂತೆ 10 ದಿನಗಳಲ್ಲಿ ದರ್ಶನ್ ಮನವಿಯನ್ನ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ದರ್ಶನ್ ಮನವಿಯನ್ನ ಪರಿಶೀಲಿಸಿ ಪರಿಗಣಿಸುವುದಾಗಿ ಹೈಕೋರ್ಟ್ ಗೆ ಸರ್ಕಾರದ ಪರ ವಕೀಲರು ತಿಳಿಸಿದ್ದರು. ಈ ಸಂಬಂಧ ಆ.20ಕ್ಕೆ ಮತ್ತೆ ವಿಚಾರಣೆಗೆ ನಡೆಯಲಿದೆ.

ಈ ನಡುವೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ದರ್ಶನ್ ಆರೋಗ್ಯ ಸ್ಥಿರವಾಗಿದೆ. ಮನೆಯೂಟದ ಅಗತ್ಯವಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಇದೇ ನಿರ್ಧಾರವನ್ನು ಆಗಸ್ಟ್​ 20 ರಂದು ನಡೆಯಲಿರುವ ವಿಚಾರಣೆ ವೇಳೆ ಸರ್ಕಾರ ಹೈಕೋರ್ಟ್​​​​ಗೆ ತಿಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದೇವರ ವಿಗ್ರಹದ ಬಳಿ‌‌ ದರ್ಶನ್ ಫೋಟೋ‌‌ ಇಟ್ಟು ಪೂಜೆ: ಬಳ್ಳಾರಿ ಅರ್ಚಕ ಅಮಾನತು - Darshan Photo near Temple Idol

ETV Bharat Logo

Copyright © 2024 Ushodaya Enterprises Pvt. Ltd., All Rights Reserved.