ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಅಪಾರ ಸಂಖ್ಯೆಯ ಪ್ರೇಕ್ಷಕರು ವೀಕ್ಷಿಸಲು ಎದುರು ನೋಡುತ್ತಿರುವ 'ಪುಷ್ಪ 2: ದಿ ರೂಲ್' ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಬಹುನಿರೀಕ್ಷಿತ ಚಿತ್ರದ ಪ್ರಚಾರ ನಿರೀಕ್ಷೆಗೂ ಮೀರಿ ನಡೆಯುತ್ತಿದೆ. ದೇಶದ ದೊಡ್ಡ ನಗರಗಳಲ್ಲಿ ನಡೆಯುತ್ತಿರುವ ಅದ್ಧೂರಿ ಪ್ರಮೋಶನ್ ಈವೆಂಟ್ನಲ್ಲಿ ಚಿತ್ರದ ಪ್ರಮುಖ ತಾರೆಯರಾದ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಭಾಗಿಯಾಗುತ್ತಿದ್ದಾರೆ. ಇದೀಗ ಪ್ರೇಕ್ಷಕರ ಗಮನ ಸೆಳೆಯುವ ನಿಟ್ಟಿನಲ್ಲಿ ಚಿತ್ರತಂಡ ಹಾಡೊಂದನ್ನು ಅನಾವರಣಗೊಳಿಸಿದೆ.
ಪುಷ್ಪ 2: ದಿ ರೂಲ್ ಸಿನಿಮಾದ ಪೀಲಿಂಗ್ಸ್ ಸಾಂಗ್ ರಿಲೀಸ್ ಆಗಿದೆ. ಇದು ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯ ರೊಮ್ಯಾಂಟಿಕ್ ಸಾಂಗ್. ಪೀಲಿಂಗ್ಸ್ ಸಾಂಗ್ನಲ್ಲಿ ಪಾಪ್ಯುಲರ್ ಆನ್ಸ್ಕ್ರೀನ್ ಕಪಲ್ನ ಕೆಮಿಸ್ಟ್ರಿ ಸಖತ್ತಾಗೇ ವರ್ಕ್ಔಟ್ ಆಗಿದೆ. ಈ ಸಾಂಗ್ ಸಿನಿಮಾ ನೋಡುವ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.
ಪಾಟ್ನಾ, ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಕೊಚ್ಚಿ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ಮಹಾನಗರಗಳಿಗೆ ಭೇಟಿ ಕೊಡುವ ಮೂಲಕ ಪುಷ್ಪ ತಂಡ ಪ್ರಚಾರ ನಡೆಸುತ್ತಿದೆ. ಡಿಸೆಂಬರ್ 5, ಮುಂದಿನ ಗುರುವಾರ ಅದ್ಧೂರಿಯಾಗಿ ತೆರೆಗಪ್ಪಳಿಸಲಿದ್ದು, ಪ್ರೇಕ್ಷಕರು ಕಾತರರಾಗಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹಾದ್ ಫಾಸಿಲ್ ನಟನೆಯ ಈ ಚಿತ್ರವನ್ನು ದಕ್ಷಿಣ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದೆ.
ಇದನ್ನೂ ಓದಿ: ಅಲ್ಲು ಅರ್ಜುನ್ ರಶ್ಮಿಕಾ ಮಂದಣ್ಣ ಕೆಮಿಸ್ಟ್ರಿ ಕಂಡು ಹುಬ್ಬೇರಿಸಿದ ಫ್ಯಾನ್ಸ್: ವಿಡಿಯೋ ನೋಡಿ
ಇತ್ತೀಚೆಗೆ ಪ್ರಮೋಶನ್ ಈವೆಂಟ್ನಲ್ಲಿ ರಾಷ್ಟ್ರಪ್ರಶಸ್ತಿ ಅಲ್ಲು ಅರ್ಜುನ್, ಸಹನಟಿ ರಶ್ಮಿಕಾ ಮಂದಣ್ಣ ಅವರನ್ನು ಹಾಡಿ ಹೊಗಳಿದ್ದರು. "ರಶ್ಮಿಕಾ ಈ ಬಾರಿ ಇಡೀ ದೇಶವನ್ನು ಸೆಳೆಯುತ್ತಾರೆ. ಅಭಿಮಾನಿಗಳು ಮತ್ತೊಮ್ಮೆ ಅವರತ್ತ ಆಕರ್ಷಿತರಾಗುತ್ತಾರೆ. ನನ್ನೊಂದಿಗೆ ಪ್ರಸ್ತುತ ಕೆಲಸ ಮಾಡುತ್ತಿರುವ ಏಕೈಕ ಹೀರೋಯಿನ್ ನೀವು. ನಿಮ್ಮ ಬೆಂಬಲವಿಲ್ಲದೇ ನಾನು ನಟಿಸಲು ಸಾಧ್ಯವಾಗುತ್ತಿರಲಿಲ್ಲ" ಎಂದು ತಿಳಿಸಿದ್ದರು.
ಇದನ್ನೂ ಓದಿ: ನಾ ಸಾಮಿ ಸಾಂಗ್ಗೆ ರಶ್ಮಿಕಾ ಮಸ್ತ್ ಡ್ಯಾನ್ಸ್: 'ನೀವಿಲ್ಲದೇ ನನಗೆ ನಟಿಸಲು ಸಾಧ್ಯವಾಗುತ್ತಿರಲಿಲ್ಲ'ವೆಂದ ಅಲ್ಲು ಅರ್ಜುನ್