ದೇವರಾಜ್ ಕಿರಿಯಪುತ್ರ ಪ್ರಣಂ ದೇವರಾಜ್ ನಟನೆಯ ಸಿನಿಮಾ 'ಸನ್ ಆಫ್ ಮುತ್ತಣ್ಣ'. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿತ್ತು. ಅದರಂತೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಪೂರ್ಣಗೊಳಿಸಿ, ಕುಂಬಳಕಾಯಿ ಹೊಡೆಯಲಾಗಿದೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿ, ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ನಾಯಕನಟ ಪ್ರಣಂ ದೇವರಾಜ್ ಮಾತನಾಡಿ, ಇಂದು ಖುಷಿ ಬೇಸರ ಎರಡೂ ಇದೆ. ನನ್ನ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿರುವುದು ಖುಷಿಯ ವಿಚಾರ. ಆದ್ರೆ ನಾಳೆಯಿಂದ ಚಿತ್ರತಂಡದವರು ಸಿಗಲ್ಲ ಅನ್ನೋದು ಬೇಜಾರಿನ ಸಂಗತಿ. ಈ ಜರ್ನಿ ಖುಷಿ ಜೊತೆಗೆ ಎಮೋಷನಲ್ ಆಗಿಯೂ ಇತ್ತು. ಟೆನ್ಷನ್ ಕೂಡ ಇತ್ತು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಅಪ್ಪ ಮಗನ ಬಾಂಧವ್ಯದ ಕಥೆ ಇದು. ನಮ್ಮ ಅಪ್ಪ ಮಗನ ಬಾಂಧವ್ಯ ಹೇಗಿದೆ ಅನ್ನೋದು ಗೊತ್ತಿದೆ. ರಘು ಸರ್ ಸೆಟ್ನಲ್ಲಿ ನನಗೆ ತಂದೆಯಂತೆ ಇದ್ದರು. ಇವರಿಂದ ಸಾಕಷ್ಟು ಕಲಿತಿದ್ದೇನೆ. ಖುಷಿ ಅದ್ಭುತ ನಟಿ. ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ ಎಂದು ತಿಳಿಸಿದರು.
![Son of Muttanna team](https://etvbharatimages.akamaized.net/etvbharat/prod-images/10-07-2024/21913162_sdvsh.jpg)
ನಾಯಕಿ ಖುಷಿ ರವಿ ಮಾತನಾಡಿ, ಶೂಟ್ ಮುಗಿಸಿ, ದೃಷ್ಟಿ ತೆಗೆದು ಕುಂಬಳಕಾಯಿ ಹೊಡೆಯೋದನ್ನು ನೋಡಿದ್ದೇವೆ. ಆದ್ರೆ ಪುರಾತನ ಫಿಲ್ಮ್ಸ್ ಅದ್ಧೂರಿಯಾಗಿ ಚಿತ್ರೀಕರಣ ಮುಗಿಸಿದೆ. 49 ದಿನಗಳ ಈ ಪಯಣದಲ್ಲಿ ಯಾವುದೇ ರೀತಿಯ ಕೊರತೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಹರೀಶ್ ಸರ್ಗೆ ಧನ್ಯವಾದಗಳು. ಎಲ್ಲಾ ವಿಚಾರಗಳಲ್ಲಿಯೂ ನಿರ್ದೇಶಕ ಶ್ರೀಕಾಂತ್ ಸರ್ಗೆ ಬಹಳ ಕ್ಲ್ಯಾರಿಟಿ ಇದೆ. ಈ ಜನರೇಷನನ್ಗೆ ತಕ್ಕಂತೆ ಅಪ್ಪ-ಮಗ, ಅಪ್ಪ-ಮಗಳು, ಸ್ನೇಹ ಎಲ್ಲಾ ಎಮೋಷನ್ಗಳನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ. ಸಚಿನ್ ಬಸ್ರೂರ್ ಹಾಡನ್ನು ಅದ್ಭುತವಾಗಿ ಕಂಪೋಸ್ ಮಾಡಿದ್ದಾರೆ. ಧನು ಮಾಸ್ಟರ್ ನನ್ನಿಂದ ಅದ್ಭುತವಾಗಿ ಡ್ಯಾನ್ಸ್ ಮಾಡಿಸಿದ್ದಾರೆ. ಕೃಷ್ಣಣ್ಣ ನಮ್ಮನ್ನು ತುಂಬಾ ಚೆನ್ನಾಗಿ ಕ್ಯಾಪ್ಟರ್ ಮಾಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.
ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಬಂಡಿ ಮಹಾಕಾಳಿ ದೇಗುಲದಲ್ಲಿ ಸಿನಿಮಾ ಶುರು ಮಾಡಿದ್ದೆವು. ನಿರ್ಮಾಪಕರು ಇಲ್ಲಿಯೇ ಕುಂಬಳಕಾಯಿ ಹೊಡೆಯಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಅದಕ್ಕಾಗಿ ಇಲ್ಲಿಯೇ ಕುಂಬಳಕಾಯಿ ಹೊಡೆದಿದ್ದೇವೆ. 49 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ವಾರಣಾಸಿ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: 25 ದಿನ ಪೂರೈಸಿದ 'Love...ಲಿ': ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸುವಂತೆ ವಸಿಷ್ಠ ಸಿಂಹ ಮನವಿ - Love li Movie
ಸನ್ ಆಫ್ ಮುತ್ತಣ್ಣ ಚಿತ್ರದ ಮೂಲಕ ಶ್ರೀಕಾಂತ್, ಸ್ವತಂತ್ರ್ಯ ನಿರ್ದೇಶಕರಾಗುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸಿದ್ದು, ಖುಷಿ ರವಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಸಿನಿಮಾದಲ್ಲಿ ಹಲವು ಹಿರಿಯ ಕಲಾವಿದರಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಸಿನಿಮಾದ ಕೆಲವು ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ.
![Son of Muttanna team](https://etvbharatimages.akamaized.net/etvbharat/prod-images/10-07-2024/21913162_nvzsdhscf.jpg)
ಇದನ್ನೂ ಓದಿ: ಕರಣ್ ಜೋಹರ್ಗೆ 'ಬಾಡಿ ಡಿಸ್ಮಾರ್ಫಿಯಾ': ಏನಿದು? ಆ ದಿನಗಳ ಬೇಸರ ತೋಡಿಕೊಂಡ ನಿರ್ಮಾಪಕ! - Karan Johar Body Dysmorphia
ಶೀರ್ಷಿಕೆಯೇ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆ. ಪುರಾತನ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ನಿರ್ವಹಿಸಿದ್ದಾರೆ. ಹರೀಶ್ ಕೊಮ್ಮೆ ಸಂಕಲನ ಮಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿರುವುದು ವಿಶೇಷ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಆದಷ್ಟು ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಆಲೋಚನೆಯಲ್ಲಿದೆ.