'ಲವ್ 360' ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆದಿರುವ ಯುವ ನಟ ಪ್ರವೀಣ್ ಕುಮಾರ್ ಅವರೀಗ ಮತ್ತೊಂದು ಕೌಟುಂಬಿಕ ಚಿತ್ರದೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ನಾಗಿರೆಡ್ಡಿ ಭಡ ಆ್ಯಕ್ಷನ್ ಕಟ್ ಹೇಳಿರುವ 'ದೇಸಾಯಿ' ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ.
- " class="align-text-top noRightClick twitterSection" data="">
'ದೇಸಾಯಿ' ಟೀಸರ್ ರಿಲೀಸ್ ಕಾರ್ಯಕ್ರಮ: ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್ ಸವದಿ 'ದೇಸಾಯಿ' ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಲ್ಲಿಕಾರ್ಜುನ ಲೋನಿ, ವಿಜಯಕುಮಾರ್ ಪಿ.ಜಿ ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಿನಿಮಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.
ಶೀಘ್ರದಲ್ಲೇ ಚಿತ್ರ ತೆರೆಗೆ: ಟೀಸರ್ ರಿಲೀಸ್ ಬಳಿಕ ಮಾತನಾಡಿದ ನಿರ್ದೇಶಕ ನಾಗಿರೆಡ್ಡಿ ಭಡ, ಅಂದುಕೊಂಡ ಹಾಗೆ ನಮ್ಮ ಚಿತ್ರ ಮೂಡಿಬಂದಿದೆ. ಅದಕ್ಕೆ ಬಹುಮುಖ್ಯ ಕಾರಣ ನಿರ್ಮಾಪಕರು ಹಾಗೂ ಚಿತ್ರತಂಡ. ಶೀಘ್ರದಲ್ಲೇ ಚಿತ್ರ ತೆರೆಗೆ ಬರಲಿದೆ. ನಮ್ಮ ಸಿನಿಮಾ ವೀಕ್ಷಿಸಿ, ಬೆಂಬಲ ನೀಡುವಂತೆ ಕೇಳಿಕೊಂಡರು.
![Desai](https://etvbharatimages.akamaized.net/etvbharat/prod-images/20-03-2024/21028921_aaaaaaaaaaaaaaaa.jpg)
ಕೌಟುಂಬಿಕ ಕಥಾಹಂದರ: ನಿರ್ಮಾಪಕ ಮಹಂತೇಶ ವಿ. ಚೋಳಚಗುಡ್ಡ ಮಾತನಾಡಿ, ಸಿನಿಮಾ ನಿರ್ಮಾಣ ನನ್ನ ಕನಸು. ಆ ಕನಸು ನನಸಾಗಲು ಚಿತ್ರತಂಡದ ಸಹಕಾರವೇ ಕಾರಣ. ನನ್ನ ಬೆನ್ನ ಹಿಂದೆ ನಿಂತು ಪ್ರೋತ್ಸಾಹಿಸಿದ, ಟೀಸರ್ ಬಿಡುಗಡೆ ಮಾಡಿಕೊಟ್ಟ ಲಕ್ಷ್ಮಣ್ ಸವದಿ ಅವರಿಗೆ ಧನ್ಯವಾದ. "ದೇಸಾಯಿ" ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ. ಹೆಚ್ಚಿನ ಚಿತ್ರೀಕರಣ ಬಾಗಲಕೋಟೆಯಲ್ಲಿ ನಡೆದಿದೆ. ಅಲ್ಲಿನ ಜನರ ಸಹಕಾರ ಅಪಾರ ಎಂದು ತಿಳಿಸಿದರು.
ನಾಯಕ ನಟ ಪ್ರವೀಣ್ ಕುಮಾರ್ ಮಾತನಾಡಿ, ನನ್ನ ಹಿಂದಿನ 'ಲವ್ 360' ಚಿತ್ರದ ಪಾತ್ರವೇ ಬೇರೆ. ಈ ಚಿತ್ರದ ಪಾತ್ರವೇ ಬೇರೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ತಯಾರಿ ಬಳಿಕ ಬಣ್ಣ ಹಚ್ಚಿದೆ. ಚಿತ್ರದಲ್ಲಿ ಪ್ರವೀಣ್ ದೇಸಾಯಿ ಎಂಬುದು ನನ್ನ ಪಾತ್ರದ ಹೆಸರು ಎಂದು ಮಾಹಿತಿ ಹಂಚಿಕೊಂಡರು.
![Desai](https://etvbharatimages.akamaized.net/etvbharat/prod-images/20-03-2024/21028921_asedef.jpg)
ಇದನ್ನೂ ಓದಿ: ಮಹಿಳಾ ಪ್ರಧಾನ 'ತಪಸ್ಸಿ' ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್
ಪ್ರವೀಣ್ ಕುಮಾರ್ ಜೋಡಿಯಾಗಿ ರಾಧ್ಯ ಅಭಿನಯಿಸಿದ್ದಾರೆ. ಇವರ ಜೊತೆ ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ಪ್ರಶಾಂತ್, ಸೀತಾ ಬೆನಕ, ಆರತಿ ಕುಲಕರ್ಣಿ, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಸೇರಿದಂತೆ ಮೊದಲಾದವರು ತಾರಾಬಳಗದಲ್ಲಿದ್ದಾರೆ. ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲ್ಮ್ಸ್ ಲಾಂಛನದಲ್ಲಿ ಮಹಾಂತೇಶ ವಿ.ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ ದೇಸಾಯಿ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ನಿಟ್ಟಿನಲ್ಲಿ ಚಿತ್ರತಂಡ ಕಾರ್ಯ ನಿರ್ವಹಿಸುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಬಗೆಬಗೆಯ ಸಿನಿಮಾಗಳು ಮೂಡಿ ಬರುತ್ತಿದ್ದು, 'ದೇಸಾಯಿ' ಎಷ್ಟರ ಮಟ್ಟಿಗೆ ಗೆಲುವು ಕಾಣಲಿದೆ ಅನ್ನೋದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: 'ದೇವರ': ಗೋವಾದಲ್ಲಿ ಜೂನಿಯರ್ ಎನ್‌ಟಿಆರ್-ಜಾಹ್ನವಿ ಕಪೂರ್ ಸಾಂಗ್ ಶೂಟಿಂಗ್