ETV Bharat / entertainment

'ಜಂಬೂ ಸರ್ಕಸ್' ಟೀಸರ್​: ಫ್ರೆಂಡ್​​​ಶಿಪ್ ಕಥೆ ಹೇಳಲು ರೆಡಿಯಾದ ನಿರ್ದೇಶಕ ಎಂ.ಡಿ.ಶ್ರೀಧರ್ - Jumboo Circus Teaser

ಸ್ನೇಹದ ಮಹತ್ವ ಸಾರುವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರವನ್ನಿಟ್ಟುಕೊಂಡು ಸಿನಿಮಾವೊಂದು ರೆಡಿಯಾಗಿದೆ. ಬಿಡುಗಡೆಗೆ ಸಜ್ಜಾಗಿರೋ ಕಾಮಿಡಿ ಡ್ರಾಮಾ 'ಜಂಬೂ ಸರ್ಕಸ್'ನ ಟೀಸರ್​​ ಅನಾವರಣಗೊಂಡಿದೆ.

'Jumboo Circus' film team
'ಜಂಬೂ ಸರ್ಕಸ್' ಚಿತ್ರತಂಡ (ETV Bharat)
author img

By ETV Bharat Entertainment Team

Published : Aug 5, 2024, 7:03 PM IST

ಸ್ನೇಹದ ಮಹತ್ವ ಸಾರುವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರವನ್ನಿಟ್ಟುಕೊಂಡು ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ ನಿರ್ದೇಶಕ ಎಂ.ಡಿ.ಶ್ರೀಧರ್. 'ಜಂಬೂ ಸರ್ಕಸ್' ಚಿತ್ರದ ಶೀರ್ಷಿಕೆ. ಬಿಡುಗಡೆಗೆ ಸಜ್ಜಾಗಿರೋ ಕಾಮಿಡಿ ಡ್ರಾಮಾದ ಟೀಸರ್ ಅನಾವರಣಗೊಂಡಿದೆ. ಪ್ರೇಕ್ಷಕರು ಸಿನಿಮಾ ನೋಡುವ ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ.

ಬುಲ್ ಬುಲ್, ಕೃಷ್ಣ, ಚೆಲ್ಲಾಟ, ಪೊರ್ಕಿ, ಒಡೆಯ ಸೇರಿದಂತೆ ಸ್ಟಾರ್ ಚಿತ್ರಗಳನ್ನೇ ಹೆಚ್ಚಾಗಿ ನಿರ್ದೇಶಿಸಿರುವ ಶ್ರೀಧರ್ ಅವರು 'ಒಡೆಯ' ಸಿನಿಮಾ ನಂತರ ಗ್ಯಾಪ್ ತೆಗೆದುಕೊಂಡು ಆ್ಯಕ್ಷನ್ ಕಟ್ ಹೇಳಿರುವ ಚಿತ್ರವಿದು. ಜಿಗರ್ ಖ್ಯಾತಿಯ ಪ್ರವೀಣ್ ತೇಜ್ ಹಾಗೂ ಯುವ ನಟಿ ಅಂಜಲಿ ಎಸ್.ಅನೀಶ್ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದಾರೆ.

ಟೀಸರ್ ಬಿಡುಗಡೆ ಬಳಿಕ ತಮ್ಮ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಶ್ರೀಧರ್, ಒಡೆಯ ನಂತರ ಗ್ಯಾಪ್ ತೆಗೆದುಕೊಂಡು ಈ ಚಿತ್ರ ಮಾಡಿದ್ದೇನೆ. ಜಂಬೂ ಸರ್ಕಸ್ ಸಿನಿಮಾ ಆಗಲು ಕಾರಣ ನಿರ್ಮಾಪಕರು. ಮದುವೆ ಕಾರ್ಯಕ್ರಮವೊಂದರಲ್ಲಿ ಹೆಚ್.ಸಿ.ಸುರೇಶ್ ಅವರು ಸಿಕ್ಕಿದ್ದರು. ಆಗ ಒನ್​​ ಲೈನ್ ಹೇಳಿ ನಮಗೊಂದು ಸಿನಿಮಾ ಮಾಡಿಕೋಡಿ ಎಂದರು. ನಿರ್ಮಾಪಕರು ಕೆಲ ವರ್ಷಗಳ ಹಿಂದೆ ಬೇರೆ ಸಿನಿಮಾಗಾಗಿ ಅಡ್ವಾನ್ಸ್ ಕೊಟ್ಟಿದ್ದರು. ಆ ಚಿತ್ರ ಆಗಿರಲಿಲ್ಲ. ಇದೀಗ ಈ ಸಿನಿಮಾ ಮಾಡಿದ್ದೇವೆ. ಪ್ರಾರಂಭದಲ್ಲಿ ನಿರ್ಮಾಪಕರಿಗೆ ಮತ್ತೋರ್ವರು ಸಾಥ್ ನೀಡಿದ್ದರು. ನಂತರ ಈ ಕಮಿಟ್​ಮೆಂಟ್​​ ಮುಂದುವರಿಯಲಿಲ್ಲ. ಹಾಗಾಗಿ ಸುರೇಶ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ಗೆದ್ದರೆ ಅವರು ಇನ್ನಷ್ಟು ಸಿನಿಮಾ ಮಾಡುತ್ತಾರೆ ಎಂದು ತಿಳಿಸಿದರು.

ಇದು ಗೆಳೆಯರಿಬ್ಬರ ಕಥೆ. ಒಂದೇ ಶಾಲೆ, ಕಾಲೇಜ್‌ನಲ್ಲಿ ವಿದ್ಯಾಭ್ಯಾಸ ಪಡೆದು ನಂತರ ಒಂದೇ ಮಂಟಪದಲ್ಲಿ ಒಂದೇ ದಿನ ಮದುವೆ ಆಗುತ್ತಾರೆ. ಒಂದೇ ಏರಿಯಾದಲ್ಲಿ ಎದುರು ಬದುರು ಮನೆ ಮಾಡಿಕೊಳ್ಳುತ್ತಾರೆ. ಕೊನೆಗೆ ಅವರಿಗೆ ಒಂದೇ ದಿನ ಮಕ್ಕಳೂ ಕೂಡ ಆಗುತ್ತವೆ. ಇವರ ಗೆಳೆತನ ಅವರ ಹೆಂಡತಿಯರಿಗೆ ಇಷ್ಟ ಇರುವುದಿಲ್ಲ. ಹಾಗಾಗಿ ಮಕ್ಕಳನ್ನು ವೈರಿಗಳಂತೆ ಬೆಳೆಸುತ್ತಾರೆ. ಮುಂದೆ ಏನೆಲ್ಲಾ ನಡೆಯುತ್ತದೆ ಎಂಬುದೇ ಈ ಚಿತ್ರದ ಕಾನ್ಸೆಪ್ಟ್. ಇದರಲ್ಲಿ ಮೂರು ಫೈಟ್, ಸಾಂಗ್‌ಗಳು ಇವೆ. ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಶೀಘ್ರದಲ್ಲೇ ಸಿನಿಮಾ ಬಿಡುಗಡೆಗೊಳಿಸಲಿದ್ದೇವೆ ಎಂದು ತಿಳಿಸಿದರು.

'Jumboo Circus' film team
'ಜಂಬೂ ಸರ್ಕಸ್' ಚಿತ್ರತಂಡ (ETV Bharat)

ನಂತರ ಮಾತನಾಡಿದ ಚಿತ್ರದ ನಾಯಕ ಪ್ರವೀಣ್ ತೇಜ್, ನನಗೆ ಇಂದು ಜಾಲಿಡೇಸ್ ಸಿನಿಮಾ ದಿನಗಳು ನೆನಪಿಗೆ ಬರುತ್ತಿದೆ. ನಾನು ಚಿತ್ರರಂಗಕ್ಕೆ ಬಂದು 15 ವರ್ಷಗಳಾಯ್ತು. ಆದ್ರೆ ಈಗಲೂ ಭಯ ಇದೆ. ನನ್ನ ಮೊದಲ ಸಿನಿಮಾ ನಿರ್ದೇಶಕರ ಜೊತೆ ಮತ್ತೆ ಸಿನಿಮಾ ಮಾಡಿದ್ದು ಸ್ಪೆಷಲ್ ಎನ್ನಬಹುದು. ನನಗಿದು ಒಳ್ಳೆಯ ಅವಕಾಶ. ಎರಡು ಫ್ಯಾಮಿಲಿ ನಡುವಿನ ಕಥೆ ಈ ಚಿತ್ರದಲ್ಲಿದೆ. ಕಿತ್ತಾಡಿಕೊಂಡಿದ್ದವರ ನಡುವೆ ಲವ್ ಆದ್ರೆ ಏನಾಗುತ್ತದೆ ಎನ್ನುವುದು ಕೂಡಾ ಈ ಚಿತ್ರದಲ್ಲಿದೆ ಎಂದರು.

ನಾಯಕಿ ಅಂಜಲಿ ಮಾತನಾಡಿ, ಇದು ನನ್ನ ಎರಡನೇ ಸಿನಿಮಾ. ಪದವಿ ಪೂರ್ವ ಚಿತ್ರದ ಬಳಿಕ ದೊಡ್ಡ ತಂತ್ರಜ್ಞರೊಂದಿಗೆ ಕೆಲಸ ಮಾಡಿದ ಅನುಭವ ಚೆನ್ನಾಗಿತ್ತು ಎಂದು ತಿಳಿಸಿದರು. ಈ ಚಿತ್ರದಲ್ಲಿ ಪ್ರವೀಣ್, ಅಂಜಲಿ ಅಲ್ಲದೇ ಮುಖ್ಯ ಪಾತ್ರಗಳಲ್ಲಿ ಸ್ವಾತಿ, ಲಕ್ಷ್ಮೀ ಸಿದ್ದಯ್ಯ, ಅಚ್ಯುತ್ ಕುಮಾರ್, ರವಿಶಂಕರ್ ಗೌಡ, ಅವಿನಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಇದ್ದಾರೆ.

ಇದನ್ನೂ ಓದಿ: 'ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನನ್ನ ಕಣ್ಮುಂದೆ ನಡೆದ ಘಟನೆ': ನಿರ್ದೇಶಕ ಹೇಮಂತ್ ರಾವ್ - Director Hemanth Rao

ನಿರ್ಮಾಪಕ ಹೆಚ್.ಸಿ ಸುರೇಶ್ ಮಾತನಾಡಿ, 30 ವರ್ಷಗಳಿಂದ ಸಿನಿಮಾರಂಗದಲ್ಲಿದ್ದೇನೆ‌. ಫ್ಯಾಮಿಲಿ ಎಂಟರ್​ಟೈನರ್ ಸಿನಿಮಾ ಮಾಡಬೇಕೆಂದುಕೊಂಡಾಗ ಈ‌ ಕಥೆ ರೆಡಿಯಾಯಿತು. ಒಂದು ಟೀಮ್ ವರ್ಕ್ ಆಗಿ ಮಾಡಿದ ಸಿನಿಮಾ. ನಿರ್ದೇಶಕರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಒಂದು ಒಳ್ಳೆಯ ಚಿತ್ರ ಮಾಡಿಕೊಟ್ಟಿದ್ದಾರೆ ಎಂದರು.

'Jumboo Circus' film team
'ಜಂಬೂ ಸರ್ಕಸ್' ಚಿತ್ರತಂಡ (ETV Bharat)

ಇದನ್ನೂ ಓದಿ: ''ಎಂಥ ಚೆಂದಾನೆ ಇವಳು'' ಅಂತಿದ್ದಾರೆ ರಿಷಬ್​​ ಶೆಟ್ಟಿ ತಂಡ: 'ಲಾಫಿಂಗ್ ಬುದ್ಧ'ನ ಮೊದಲ ಹಾಡು ಬಿಡುಗಡೆಗೆ ದಿನ ನಿಗದಿ - Enta Chendane Ivalu

ಚಿತ್ರದಲ್ಲಿ ಕೃಷ್ಣ ಕುಮಾರ್ ಛಾಯಾಗ್ರಹಣ ನಿರ್ವಹಿಸಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆಯಿದೆ. ಜ್ಞಾನೇಶ್ ಸಂಕಲನ ನಿರ್ವಹಿಸಿದ್ದಾರೆ. ಸುಪ್ರೀತ ಶೆಟ್ಟಿ ಸಹ ನಿರ್ಮಾಪಕರಾಗಿರುವ ಈ ಚಿತ್ರದ ಹಾಡುಗಳಿಗೆ ಜಯಂತ್ ಕಾಯ್ಕಿಣಿ, ಡಾ. ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಜಂಬೂ ಸರ್ಕಸ್ ಚಿತ್ರ ತೆರೆಗೆ ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.