ETV Bharat / entertainment

ದರ್ಶನ್ ಮತ್ತಿತರ ಆರೋಪಿಗಳನ್ನು ಮೈಸೂರಿಗೆ ಕರೆದೊಯ್ಯಲು ಪೊಲೀಸರ ಸಿದ್ಧತೆ - Renukaswamy murder case - RENUKASWAMY MURDER CASE

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದ ನಟ ದರ್ಶನ್​, ಪ್ರಕರಣದಲ್ಲಿ ಶರಣಾಗಲು ಹೇಳಿದಾಗ, ಪೊಲೀಸರನ್ನು ಮೈಸೂರಿಗೆ ಕರೆಸಿ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದರು ಎನ್ನಲಾಗಿದೆ.

Actor Darshan
ನಟ ದರ್ಶನ್ (ETV Bharat)
author img

By ETV Bharat Karnataka Team

Published : Jun 18, 2024, 10:25 AM IST

Updated : Jun 18, 2024, 11:22 AM IST

ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಇಂದು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಲು ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ.

ರೇಣುಕಾಸ್ವಾಮಿಯ ಹತ್ಯೆ ಬಳಿಕ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲು ಮೈಸೂರಿಗೆ ತೆರಳಿದ್ದ ದರ್ಶನ್ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದರು. ಪ್ರಕರಣದಲ್ಲಿ ಪೊಲೀಸರೆದುರು ಶರಣಾಗಲು ಹಿಂದೇಟು ಹಾಕಿದ್ದ ದರ್ಶನ್​, ಪೊಲೀಸರನ್ನು ಮೈಸೂರಿಗೆ ಕರೆಸಿ ಅವರ ಮನವೊಲಿಸುವ ಪ್ರಯತ್ನವನ್ನು ಮಾಡಿದ್ದರು ಎನ್ನಲಾಗಿದೆ. ಆದ್ದರಿಂದ, ಪ್ರಕರಣದಲ್ಲಿ ಮೈಸೂರಿನಲ್ಲಿಯೂ ಮಹಜರು ಪ್ರಕ್ರಿಯೆ ಅಗತ್ಯ ಎಂದು ಅಭಿಪ್ರಾಯಪಟ್ಟಿರುವ ಪೊಲೀಸರು, ಇಂದು ನಟ ದರ್ಶನ್ ಹಾಗೂ ಶರಣಾಗಿದ್ದ ಕೆಲ ಆರೋಪಿಗಳನ್ನು ಮೈಸೂರಿಗೆ ಕರೆದೊಯ್ದು ಮಹಜರು ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಈಗಾಗಲೇ ಆರೋಪಿಗಳ ವಿಚಾರಣೆ ನಡೆಯುತ್ತಿರುವ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿದ್ದು, ಪ್ರಕರಣದ ತನಿಖೆಯ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಬೆಳಗ್ಗೆ 10:30ರ ನಂತರ ಆರೋಪಿಗಳನ್ನು ಮೈಸೂರಿಗೆ ಕರೆದೊಯ್ದು ದರ್ಶನ್ ತಂಗಿದ್ದ ಖಾಸಗಿ ಹೋಟೆಲ್, ಜಿಮ್​ನಲ್ಲಿ ಪೊಲೀಸರು ಮಹಜರು ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ಮುಗಿಸಿ ಹೊರಬಂದ ನಟ ಚಿಕ್ಕಣ್ಣ ಹೇಳಿದ್ದೇನು? - Chikkanna about trial

Last Updated : Jun 18, 2024, 11:22 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.