ETV Bharat / entertainment

ಪಂಚ ಭಾಷೆಗಳಲ್ಲಿ ಬರಲಿದೆ ರಾಮಾಯಣ ಕಥಾಧಾರಿತ ಪ್ಯಾನ್​ ಇಂಡಿಯಾ ಸಿನಿಮಾ; ಹೆಸರೇನು ಗೊತ್ತಾ?

author img

By ETV Bharat Karnataka Team

Published : Jan 22, 2024, 7:24 PM IST

ಕನ್ನಡ ಸೇರಿದಂತೆ ಪಂಚಭಾಷೆಗಳಲ್ಲಿ ರಾಮಾಯಣ ಆಧಾರಿತ ಮತ್ತೊಂದು ಸಿನಿಮಾ ತೆರೆಗೆ ಬರಲಿದೆ. ಕೆ.ಎ. ಸುರೇಶ್​ ನಿರ್ಮಾಣ ಮಾಡಲಿದ್ದಾರೆ.

ಪ್ಯಾನ್​ ಇಂಡಿಯಾ ಸಿನಿಮಾ
ಪ್ಯಾನ್​ ಇಂಡಿಯಾ ಸಿನಿಮಾ

ಶ್ರೀರಾಮಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ದೇಶವೇ ಸಾಕ್ಷಿಯಾಗಿದೆ. ಎಲ್ಲರೂ ರಾಮ ನಾಮ ಸ್ಮರಣೆಯಲ್ಲಿ ತೊಡಗಿರುವ ಶುಭ ಘಳಿಗೆಯಲ್ಲಿ 'ಶ್ರೀರಾಮ್, ಜೈ ಹನುಮಾನ್' ಎಂಬ ಹೊಚ್ಚ ಹೊಸ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿದೆ.

ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ನಿರ್ಮಾಣವಾಗಲಿರುವ ಸಿನಿಮಾದ ಟೈಟಲ್ ಪೋಸ್ಟರ್ ಕೂಡ ಇಂದು ಬಿಡುಗಡೆ ಮಾಡಲಾಯಿತು. ರಾಮ ಮಂದಿರ ಉದ್ಘಾಟನೆಯಾದ ಬಳಿಕ ಸರಿಯಾಗಿ ಮಧ್ಯಾಹ್ನ 12.33 ಕ್ಕೆ ಸಿನಿಮಾವನ್ನು ಘೋಷಿಸಲಾಯಿತು. An Untold Epic of RAMAYANA ಎಂಬ ಅಡಿಬರಹ ಈ ಚಿತ್ರಕ್ಕಿರಲಿದೆ.

ರಾಮಾಯಣದ ಬಹುತೇಕರಿಗೆ ಗೊತ್ತಿದೆ. ಆದರೆ, ಎಲ್ಲೂ ದಾಖಲಾಗದ ಕೆಲವು ವಿಷಯಗಳನ್ನು ಈ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರಲು ಸಿನಿಮಾ ತಂಡ ತಯಾರಿ ನಡೆಸಿದೆ. ಐತಿಹಾಸಿಕ ಘಟನಾವಳಿಗಳನ್ನು ಜನರ ಮುಂದೆ ತೆರೆದಿಡುವುದೇ ಈ ಸಿನಿಮಾದ ಮತ್ತೊಂದು ವಿಶೇಷ.

ಸದ್ಯ ಬಿಡುಗಡೆ ಮಾಡಲಾಗಿರುವ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಬೆಟ್ಟ, ಗುಡ್ಡ, ಬೆಂಕಿ, ನೀರು, ರಾಮ, ಹನುಮ. ಹೀಗೆ ಅನೇಕ ಸಂಗತಿಗಳು ಪೋಸ್ಟರ್​ನಲ್ಲಿ ಅಡಕವಾಗಿವೆ. ಒಂದೆಡೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಖುಷಿಯಲ್ಲಿರುವ ಜನರಿಗೆ, ಈ ಪೋಸ್ಟರ್ ನೋಡುತ್ತಲೇ ಗಮನ ಸೆಳೆಯುವಂತೆ ಮಾಡಿರುವುದು ಚಿತ್ರದ ಮೇಲೆ ಈಗಲೇ ಸಾಕಷ್ಟು ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

ಸಿನಿಮಾಕ್ಕೆ ಯುವ ನಿರ್ದೇಶಕನ ಆ್ಯಕ್ಷನ್​ ಕಟ್​; ಇನ್ನು, ಕನ್ನಡ ಚಿತ್ರರಂಗದಲ್ಲಿ ಶ್ರಾವಣಿ ಸುಬ್ರಹ್ಮಣ್ಯ, ಶಿವಲಿಂಗ ಅಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಕೆ ಎ ಸುರೇಶ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಯುವ ನಿರ್ದೇಶಕ ಅವಧೂತ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಕನ್ನಡದಲ್ಲಿ ಈಗಾಗಲೇ ಯಶಸ್ವಿ ನಿರ್ಮಾಣ ಸಂಸ್ಥೆ ಎನ್ನಿಸಿಕೊಂಡಿರುವ ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಈ ಪ್ಯಾನ್ ಇಂಡಿಯಾ ಸಿನಿಮಾ ತಯಾರಾಗಲಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನ ಖ್ಯಾತ ನಟರು, ಕಲಾವಿದರು ಸೇರಿದಂತೆ ದೊಡ್ಡ ತಾರಾಬಳಗವೇ ಇದರಲ್ಲಿ ಇರಲಿದೆ ಎಂದು ಸಿನಿಮಾ ತಂಡ ತಿಳಿಸಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ಸದ್ಯ ಸ್ಟೋರಿ ಬೋರ್ಡ್ ಮತ್ತು ವಿಎಫ್ಎಕ್ಸ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಮತ್ತಷ್ಟು ವಿವರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

ಇದನ್ನೂ ಓದಿ: ರಾಮನ ಸ್ಮರಿಸಿದ ಮಹೇಶ್​ಬಾಬು, ದೀಪಿಕಾ ಸೇರಿ ಹಲವು ಸೆಲೆಬ್ರಿಟಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.