ETV Bharat / entertainment

'ಯುವ' ಚಿತ್ರದ ಹಾಡು ಬಿಡುಗಡೆಗೊಳಿಸಿದ ಪುನೀತ್ ರಾಜ್‌ಕುಮಾರ್ ಪುತ್ರಿ

author img

By ETV Bharat Karnataka Team

Published : Mar 18, 2024, 11:13 AM IST

ಯುವ ಚಿತ್ರದ 'ಅಪ್ಪುಗೆ..' ಹಾಡನ್ನು ಪುನೀತ್​ ರಾಜ್​ ಕುಮಾರ್​ ಮಗಳು ವಂದಿತಾ ಬಿಡುಗಡೆಗೊಳಿಸಿದರು.

Puneeth Raj Kumar Daughter released Yuva movie Appuge Song
ಅಪ್ಪುಗೆ ಹಾಡು ಬಿಡುಗಡೆಗೊಳಿಸಿದ ಪುನೀತ್​ ಮಗಳು ವಂದಿತ

'ಯುವ' ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗುತ್ತಿರುವ ಹೊಸ ಸಿನಿಮಾ. ದೊಡ್ಮನೆಯ ಮೂರನೇ ತಲೆಮಾರಿನ ಕುಡಿ ಯುವ ರಾಜ್​ಕುಮಾರ್ ಅಭಿನಯದ ಈ ಚಿತ್ರ ಅಭಿಮಾನಿ ಬಳಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಟೈಟಲ್ ಹಾಡಿನಿಂದಲೇ ಧೂಳೆಬ್ಬಿಸಿರುವ 'ಯುವ' ಚಿತ್ರತಂಡ ಮತ್ತೊಂದು ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಿತು.

ಸಂತೋಷ್ ಆನಂದರಾಮ್ ನಿರ್ದೇಶನದ ಚಿತ್ರದ ಅಪ್ಪುಗೆ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ರಿಲೀಸ್ ಆಗಿದೆ. ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್‌ ವೀಕ್ಷಣೆ ಪಡೆದಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಹಾಡು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

  • " class="align-text-top noRightClick twitterSection" data="">

ನಿರ್ದೇಶಕ ಸಂತೋಷ್ ಆನಂದರಾಮ್ ಮಾತನಾಡಿ, "ಯುವ ಕೌಟುಂಬಿಕ ಹಾಗೂ ಆ್ಯಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ-ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನೂ ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ "ಅಪ್ಪುಗೆ" ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತರಿಗೆ ಧನ್ಯವಾದ" ಎಂದರು.

"ಚಿತ್ರದ ಕಥೆಗೂ ಹಾಗೂ ನನ್ನ ಜೀವನಕ್ಕೂ ಸುಮಾರು ವಿಷಯಗಳು ಹೋಲುತ್ತವೆ" ಎಂದು ಮಾತು ಆರಂಭಿಸಿದ ನಾಯಕ ಯುವ ರಾಜ್​ಕುಮಾರ್, "ತಂದೆ-ಮಗನ ಸಂಬಂಧ ಬೇರೆಯದೇ ರೀತಿಯದು. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ. ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತ್​ ಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ-ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ ಅಪ್ಪುಗೆ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ" ಎಂದು ಹೇಳಿದರು.

"ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿವೆ. ಅಪ್ಪುಗೆ ಮೂರನೇ ಹಾಡಾಗಿ ಬಿಡುಗಡೆಯಾಗಿದೆ. ಅಪ್ಪ-ಮಗನ ಸಂಬಂಧದ ಈ ಹಾಡು ತುಂಬಾ ಚೆನ್ನಾಗಿದೆ. ಇದನ್ನು ಕೇಳಿದಾಗಲೆಲ್ಲಾ ನನಗೆ ನಮ್ಮ ತಂದೆ ನೆನಪಾಗುತ್ತಾರೆ" ಎಂದು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಭಾವುಕರಾದರು.

"'ಯುವ' ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ" ಎಂದು ಆನಂದ್ ಆಡಿಯೋ ಶ್ಯಾಮ್ ಹೇಳಿದರು.

ಛಾಯಾಗ್ರಾಹಕ ಶ್ರೀಶ ಕುದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ.ರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮಾರ್ಚ್ 21 ರಂದು 'ಯುವ' ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಾಣ ಮಾಡಿದ್ದು, ಮಾರ್ಚ್ 29ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: ಶೀಘ್ರದಲ್ಲೇ 'ಪುಷ್ಪ 2' ಸಾಂಗ್​ ರಿಲೀಸ್​: ಅಲ್ಲು ಅರ್ಜುನ್​, ರಶ್ಮಿಕಾ ಅಭಿಮಾನಿಗಳಲ್ಲಿ ಕುತೂಹಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.