ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಆಂಧ್ರಪ್ರದೇಶದಲ್ಲಿ ಈವರೆಗೂ 15ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ವಿನಾಶಕಾರಿ ಪ್ರವಾಹ ಹಿನ್ನೆಲೆ, ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಸಹಾಯ ಹಸ್ತ ಚಾಚಿದ್ದಾರೆ.
రెండు తెలుగు రాష్ట్రాల్లో ఇటీవల కురిసిన భారీ వర్షాల వల్ల జరుగుతున్న వరద భీభత్సం నన్ను ఎంతగానో కలచివేసింది. అతిత్వరగా ఈ విపత్తు నుండి తెలుగు ప్రజలు కోలుకోవాలని నేను ఆ దేవుడిని ప్రార్థిస్తున్నాను.
— Jr NTR (@tarak9999) September 3, 2024
వరద విపత్తు నుండి ఉపశమనం కోసం రెండు తెలుగు రాష్ట్రాల ప్రభుత్వాలు తీసుకొనే చర్యలకి…
ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. 'ಕಲ್ಕಿ 2898 ಎಡಿ' ಚಿತ್ರತಂಡ ಕೂಡಾ ಆಂಧ್ರಪ್ರದೇಶದ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡುವುದಾಗಿ ತಿಳಿಸಿದೆ. ರಾಜ್ಯ ಸರ್ಕಾರಗಳು ಕೈಗೊಳ್ಳುತ್ತಿರುವ ಪ್ರವಾಹ ಪರಿಹಾರ ಕ್ರಮಗಗಳಿಗೆ ಈ ದೇಣಿಗೆ ಸಹಾಯ ಆಗಲಿದೆ.
ಆರ್ಅರ್ಆರ್ ನಟ ಜೂನಿಯರ್ ಎನ್ಟಿಆರ್ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪ್ರವಾಹ ಪೀಡಿತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. 'ಇತ್ತೀಚೆಗೆ ಎರಡು ತೆಲುಗು ರಾಜ್ಯಗಳಲ್ಲಿ ಸಂಭವಿಸಿರುವ ಪ್ರವಾಹದಿಂದಾಗಿ ನಾನು ತುಂಬಾ ದುಃಖಿತನಾಗಿದ್ದೇನೆ' ಎಂದು ತಿಳಿಸಿದ್ದಾರೆ. ಜೊತೆಗೆ ತೆಲುಗು ಜನರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
Let's strive for a better tomorrow.@AndhraPradeshCM pic.twitter.com/AvneI83YAo
— Vyjayanthi Movies (@VyjayanthiFilms) September 2, 2024
ಅಲ್ಲದೇ, "ನನ್ನ ಕಡೆಯಿಂದ, ಪ್ರವಾಹ ಪರಿಹಾರಕ್ಕಾಗಿ ಎರಡು ತೆಲುಗು ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳಿಗೆ ಸಹಾಯವಾಗೋ ನಿಟ್ಟಿನಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆಯನ್ನು ಘೋಷಿಸುತ್ತಿದ್ದೇನೆ" ಎಂದು ಸಹ ತಿಳಿಸಿದ್ದಾರೆ.
ಇವರ ಜೊತೆಗೆ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ 'ಕಲ್ಕಿ 2898 ಎಡಿ' ಚಿತ್ರದ ನಿರ್ಮಾಪಕರು ಸಹ ಪರಿಹಾರ ಕಾರ್ಯಕ್ಕೆ ನೆರವಾಗಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ಘೋಷಿಸಿದ್ದಾರೆ. ಪ್ರವಾಹದಿಂದ ತೀವ್ರ ಪರಿಣಾಮಕ್ಕೊಳಗಾಗಿರುವ ರಾಜ್ಯದ ಚೇತರಿಕೆಗಾಗಿ ಈ ದೇಣಿಗೆ ಘೋಷಿಸಲಾಗಿದೆ.
ಕಲ್ಕಿ 2898 ಎಡಿ ಚಿತ್ರ ಹಿಂದಿರುವ ಚಲನಚಿತ್ರ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ತನ್ನ ಅಧಿಕೃತ ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಪ್ರವಾಹ ಪರಿಹಾರ ಕಾರ್ಯಗಳನ್ನು ಬೆಂಬಲಿಸಲು ವೈಜಯಂತಿ ಮೂವೀಸ್ ಕಡೆಯಿಂದ 25,00,000 ರೂಪಾಯಿಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲು ಇಚ್ಛಿಸಿದ್ದೇವೆ. ಈ ರಾಜ್ಯ ನಮಗೆ ಬಹಳಷ್ಟನ್ನು ನೀಡಿವೆ. ಸವಾಲಿನ ಸಮಯದಲ್ಲಿ ನಾವು ಅವರ ಪರ ನಿಲ್ಲುವುದು ನಮ್ಮ ಕರ್ತವ್ಯ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕ್ರಿಶ್ಚಿಯನ್ ಪದ್ಧತಿಯಲ್ಲಿ ತರುಣ್ ಸುಧೀರ್-ಸೋನಾಲ್ ಮೊಂತೆರೋ ಮದುವೆ: ವಿಡಿಯೋ - Tharun Sonal Wedding
ತೆಲಂಗಾಣದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ಸೋಮವಾರದ ವೇಳೆಗೆ ಸಾವಿನ ಸಂಖ್ಯೆ 21ಕ್ಕೆ ತಲುಪಿತ್ತು. ಆಂಧ್ರಪ್ರದೇಶದಲ್ಲೂ ಕೂಡಾ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.