ETV Bharat / entertainment

'ಒಂದು ಮೊಟ್ಟೆಯ ಕಥೆ'ಯೊಂದಿಗೆ ರಾಜ್ ಬಿ ಶೆಟ್ಟಿ 'ರೂಪಾಂತರ': ಸದ್ಯದಲ್ಲೇ ಹೊಸ ಸಿನಿಮಾ ನಿಮ್ಮ ಮುಂದೆ - Roopantara

ರಾಜ್ ಬಿ ಶೆಟ್ಟಿ ಅವರ ಮುಂದಿನ 'ರೂಪಾಂತರ' ಚಿತ್ರದ ಕುತೂಹಲಕಾರಿ ಪೋಸ್ಟರ್ ಅನಾವರಣಗೊಂಡಿದೆ.

author img

By ETV Bharat Karnataka Team

Published : Jun 28, 2024, 9:05 AM IST

Raj B Shetty's Roopantara
ರಾಜ್ ಬಿ ಶೆಟ್ಟಿಯ ರೂಪಾಂತರ ಪೋಸ್ಟರ್ ರಿಲೀಸ್ (ETV Bharat)

ರಾಜ್ ಬಿ ಶೆಟ್ಟಿ, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ. ಇತ್ತೀಚೆಗಷ್ಟೇ 'ಟರ್ಬೋ' ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ ಎಂಬ ಪಾತ್ರದ ಮೂಲಕ ಖ್ಯಾತ ನಟ ಮಮ್ಮುಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ಶೆಟ್ರು ಇದೀಗ ತಮ್ಮ ಹೊಸ ಸಿನಿಮಾ ಘೋಷಿಸಿದ್ದಾರೆ. ತಮ್ಮ ಅಧಿಕೃತ ಇನ್ಸ್​ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಳ್ಳುವ ಮುಖೇನ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದಾರೆ.

ರಾಜ್ ಬಿ ಶೆಟ್ಟಿ ಇನ್​​​ಸ್ಟಾ ಪೋಸ್ಟ್​: ''ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ. ರೂಪಾಂತರದ ಪೋಸ್ಟರ್ ಈಗ ನಿಮ್ಮ ಮುಂದೆ. ಸದ್ಯದಲ್ಲೇ ಚಿತ್ರವೂ ನಿಮ್ಮ ಮುಂದೆ ಬರಲಿರುವುದು. ಎಂದಿನಂತೆ ಜೊತೆಗಿರಿ'' ಎಂದು ಬರೆದುಕೊಂಡಿರುವ ನಟ ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ 'ರೂಪಾಂತರ' ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಿದು. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನದ ಜವಾಬ್ದಾರಿ ಭುವನೇಶ್ ಮಣಿವಣ್ಣನ್ ಮೇಲಿದೆ. ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

ಇದನ್ನೂ ಓದಿ: ಯಾವ ಓಟಿಟಿಯಲ್ಲಿ ಬರಲಿದೆ ಕಲ್ಕಿ; ಮೊದಲ ದಿನವೇ 200 ಕೋಟಿ ರೂ. ಕಲೆಕ್ಷನ್​ ಸಾಧ್ಯತೆ - Kalki 2898 AD

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೇ, ಸಂಭಾಷಣೆಯನ್ನೂ ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ 'ಲೈಟರ್ ಬುದ್ಧ ಫಿಲ್ಮ್ಸ್' ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ನಿರ್ವಹಿಸಿದ್ದರೆ, ಮಿಧುನ್ ಮುಕುಂದನ್ ಸಂಗೀತ ನೀಡುವ ಮೂಲಕ ಈ ತಂಡ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಹೊರಟಿದೆ.

ಇದನ್ನೂ ಓದಿ: ತುಂಗಾ ನದಿ ಕುರಿತು ಸಿಎಂಗೆ ಅನಿರುದ್ಧ್ ಮನವಿ ಸಲ್ಲಿಸಿದ್ಯಾಕೆ; ಪತ್ರದಲ್ಲೇನಿದೆ, ನಟ ಹೇಳಿದ್ದೇನು? - Anirudh Jatkar

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುಧ್ಧ ಫಿಲ್ಮ್ಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವನಕರ್ ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.