ETV Bharat / entertainment

ಶಾಖಾಹಾರಿ ಚಿತ್ರತಂಡದಿಂದ 'ಅಭಿನಯಾಸುರ' ಬಿರುದು ಪಡೆದ ರಂಗಾಯಣ ರಘು

ಶಾಖಾಹಾರಿ ಸಿನಿಮಾ ತಂಡ ರಂಗಾಯಣ ರಘು ಅವರಿಗೆ ಅಭಿನಯಾಸುರ ಎಂಬ ಬಿರುದು ನೀಡಿದೆ.

Etv Bharatrangayana-raghu-got-the-title-of-abhinayasura-from-shakhahaari-movie-team
Etv Bharatಶಾಖಾಹಾರಿ ಚಿತ್ರತಂಡದಿಂದ 'ಅಭಿನಯಾಸುರ' ಬಿರುದು ಪಡೆದ ರಂಗಾಯಣ ರಘು
author img

By ETV Bharat Karnataka Team

Published : Feb 9, 2024, 10:49 PM IST

ಸ್ಯಾಂಡಲ್‌ವುಡ್‌ನ ಅದ್ಭುತ ಕಲಾವಿದರ ಪೈಕಿ ಹಿರಿಯ ನಟ ರಂಗಾಯಣ ರಘು ಓರ್ವರು. ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ಇವರಿಗೆ ಇದೀಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಲಾಗಿದೆ. ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ಶಾಖಾಹಾರಿ. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ. ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರದ ಈ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರ ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆಗೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

Rangayana Raghu got the title of Abhinayasura from shakhahaari  movie team
ಶಾಖಾಹಾರಿ ಚಿತ್ರತಂಡ

ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ, "ನಾನು ಈ ರೀತಿ ಮೈಕ್ ಹಿಡಿದು ಮಾತನಾಡುತ್ತಿದ್ದೇನೆ. ನನ್ನ ನಿರ್ದೇಶಕ ಅಂತಾ ಕರೆಯುತ್ತಾರೆ ಎಂದರೆ. ಈ ಹಿಂದೆ ನಾವು ಯೋಗರಾಜ್ ಭಟ್‌ ಅವರ ಮಣಿ ಸಿನಿಮಾ ಮಾಡಬೇಕಾದರೆ ರಘು ಸರ್ ಸಿಕ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜೊತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ಅವರ ದೊಡ್ಡ ಪಾಲಿದೆ. ನಮ್ಮ ಬರವಣಿಗೆಗೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಂಗಾಯಣ ರಘು ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ ಅನಿಸುತ್ತೆ" ಎಂದರು.

ನಂತರ ನಟ ರಂಗಾಯಣ ರಘು ಮಾತನಾಡಿ, "ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂಥವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರೀಗೆ ಬಂದು ಸುಮಾರು 35 ವರ್ಷವಾಯ್ತು. 1994 ರಿಂದ 2001ರವೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲ್ಲೆಲ್ಲಾ ಹಾಗೆ ಹೀಗೆ ಎಂದೆಲ್ಲ ಹೇಳಿಕೊಂಡು ಬರುತ್ತಿದ್ದೆ. ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೆ ಕಡಿಮೆ. ನಾನು ಈವರೆಗೂ 350 ಸಿನಿಮಾಗಳಲ್ಲಿ ನಟಿಸಿದ್ದೇನೆ. ಅದರಲ್ಲೂ ಅಪ್ಪು ಅವರ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ" ಎಂದು ಹೇಳಿದರು.

ಶಾಖಾಹಾರಿ ಸಿನಿಮಾ ತಂಡ

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, "ಈ ರೀತಿ ಕಥೆಯನ್ನು ಪ್ರೊಡ್ಯೂಸರ್ ಮಾಡೋದಕ್ಕೆ ಧೈರ್ಯ ಬೇಕು. ಒಂದು ಸಾಹಿತ್ಯದ ಹಿನ್ನೆಲೆ ಬೇಕು. ಅಷ್ಟೇ ಪ್ರಬಲ ಪ್ರಜ್ಞೆ ಬೇಕು. ಬ್ಯುಸಿನೆಸ್ ಮೈಂಡ್ ಸೆಟ್ ಬೇಕು. ಎಲ್ಲಾ ತರಹದ ಅನುಕೂಲ ಕಲ್ಪಿಸಿಕೊಟ್ಟು, ಅಷ್ಟೇ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಯಾವುದೇ ಟೈಮ್ ನಲ್ಲಿಯೂ ಇಲ್ಲ ಅಂದಿಲ್ಲ. ಬಜೆಟ್ ಹೆಚ್ಚು ಕಮ್ಮಿಯಾದ್ರೂ ಯಾವುದೇ ಅಡ್ಡಿ ಆತಂಕ ತೆಗೆದುಕೊಳ್ಳದೇ ಫ್ರೀಡಂ ಕೊಟ್ಟಿದ್ದಾರೆ. ಇದೇ ಕಾರಣಕ್ಕೆ ಚಿತ್ರ ನಿರ್ಮಾಣಕ್ಕೆ ಕಾರಣವಾಗಿದ್ದು" ಎಂದರು.

ಸಿನಿಮಾ ಕಥೆ ಏನು?: ಶಿವಮೊಗ್ಗದ ತೀರ್ಥಹಳ್ಳಿ ಬಳಿಯ ಒಂದು ಊರಿನಲ್ಲಿ ನಡೆಯುವ ಕಥೆ. ಮಲೆನಾಡಿನಲ್ಲಿ ನಡೆಯುವ ಒಂದಿಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಕಥೆಯನ್ನು ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ರಂಗಾಯಣ ರಘು

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ 'ಶಾಖಾಹಾರಿ' ಸಿನಿಮಾ ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಸಂದೀಪ್​ಗೆ ಜೊತೆಗಾಗಿ ವಿಶ್ವಜಿತ್ ರಾವ್ ಕ್ಯಾಮರಾ, ಶಶಾಂಕ್ ನಾರಾಯಣ ಎಡಿಟಿಂಗ್, ಮಯೂರ್ ಅಂಬೆಕಲ್ಲು ಸಂಗೀತ ಸಿನಿಮಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 'ಟೆಲಿವಿಷನ್ ಪ್ರೀಮಿಯರ್ ಲೀಗ್': ಫೆ.28ರಿಂದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.