ETV Bharat / entertainment

ಲೈಂಗಿಕ ಕಿರುಕುಳ ಆರೋಪ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್​ಗೆ 14 ದಿನಗಳ ನ್ಯಾಯಾಂಗ ಬಂಧನ - Jani Master Case - JANI MASTER CASE

ಜೂನಿಯರ್​ ನೃತ್ಯ ಸಂಯೋಜಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖ್ಯಾತ ನೃತ್ಯ ನಿರ್ದೇಶಕ​ ಜಾನಿ ಮಾಸ್ಟರ್ ಇತ್ತೀಚೆಗೆ​ ಅರೆಸ್ಟ್ ಆಗಿದ್ದರು. ಇದೀಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

Choreographer Jani Master Case
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಪ್ರರಕಣ (Photo: IANS/ETV Bharat)
author img

By ETV Bharat Entertainment Team

Published : Sep 21, 2024, 1:00 PM IST

ಹೈದರಾಬಾದ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಡಿ ಅರೆಸ್ಟ್ ಆಗಿದ್ದರು. ಇದೀಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಇವರ ಮೇಲಿದ್ದು, ಸೈಬರಾಬಾದ್ ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಶೇಕ್ ಜಾನಿ ಬಾಷಾ ಎಂಬುದು ಜಾನಿ ಮಾಸ್ಟರ್ ಅವರ ನಿಜ ಹೆಸರು.

ಹಿರಿಯ ಪೊಲೀಸ್ ಅಧಿಕಾರಿ ಪ್ರಕಾರ, ಜಾನಿ ಮಾಸ್ಟರ್ ಅವರನ್ನು ಗುರುವಾರ ಗೋವಾದಲ್ಲಿ ಬಂಧಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೋರ್ಟ್ ಆರೋಪಿಯ ಸ್ಥಳಾಂತರಕ್ಕೆ ಅವಕಾಶ ನೀಡಿತು. ನಂತರ ಅವರನ್ನು ನಗರಕ್ಕೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜಾನಿ ಮಾಸ್ಟರ್ ಸದ್ಯ ಚಂಚಲಗುಡ ಕೇಂದ್ರ ಕಾರಾಗೃಹದಲ್ಲಿದ್ದಾರೆ. ತನಿಖಾಧಿಕಾರಿಗಳು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ "ತಪ್ಪೊಪ್ಪಿಗೆ" ಹೇಳಿಕೆಯನ್ನು ಸಹ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಜಾನಿ ಮಾಸ್ಟರ್ ಪತ್ನಿ ಸುಮಲತಾ, ''ಅವರು ನಿರಪರಾಧಿ ಎಂಬುದನ್ನು ಸಾಬೀತುಪಡಿಸಲು ನಾವು ನಮ್ಮ ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ'' ಎಂದು ತಿಳಿಸಿದ್ದಾರೆ. ನೃತ್ಯ ಸಂಯೋಜಕರ ವಕೀಲರು ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಸಂತ್ರಸ್ತೆ (ಮಹಿಳಾ ನೃತ್ಯ ಸಂಯೋಜಕಿ)ಯು 2020ರಲ್ಲಿ ಮುಂಬೈ ವರ್ಕ್​​ ಟ್ರಿಪ್​​ ವೇಳೆ ಜಾನಿ ಮಾಸ್ಟರ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಈ ಘಟನೆಯನ್ನು ಬಹಿರಂಗಪಡಿಸಿದರೆ ತನ್ನ ವೃತ್ತಿಜೀವನವನ್ನು ಹಾಳುಮಾಡುವುದಾಗಿ ಬೆದರಿಕೆ ಹಾಕುತ್ತಾ ಕಿರುಕುಳ ನೀಡುತ್ತಲೇ ಬಂದಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಪ್ರಶಾಂತ್​​ ನೀಲ್​ - ಜೂ.NTR ಸಿನಿಮಾ ಶೂಟಿಂಗ್​ ಯಾವಾಗ? ಇಲ್ಲಿದೆ ಅಪ್ಡೇಟ್ಸ್ - NTR31

ನರ್ಸಿಂಗಿ ಪೊಲೀಸರು ಸೆಪ್ಟೆಂಬರ್ 15 ರಂದು ಐಪಿಸಿ ಸೆಕ್ಷನ್ 376(2)(ಎನ್), 506, 323ರ ಅಡಿ ಪ್ರಕರಣ ದಾಖಲಿಸಿದ್ದರು. ಘಟನೆ ನಡೆದ ಸಂದರ್ಭ ಸಂತ್ರಸ್ತೆ ಅಪ್ರಾಪ್ತೆ ಆಗಿದ್ದ ಹಿನ್ನೆಲೆ, ಪೊಲೀಸರು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳನ್ನು ಸಹ ಸೇರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪ: ಕವಾಲಾ ಖ್ಯಾತಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್​ - RAPE CASE

ಸಂತ್ರಸ್ತೆ ಹೇಳಿಕೆ ಪ್ರಕಾರ, ಜಾನಿ ಮಾಸ್ಟರ್ 2020 ರಿಂದ ಶೂಟಿಂಗ್ ಸ್ಪಾಟ್‌ಗಳು, ಆಕೆಯ ನಿವಾಸ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಅನೇಕ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ತಮ್ಮನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾರೆ. ಅಸಿಸ್ಟೆಂಂಟ್​​ ಕೆಲಸ ನೀಡುವ ಮೂಲಕ ಆಕೆಯ ಮುಗ್ಧತೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. (ಏಜೆನ್ಸಿ ಇನ್‌ಪುಟ್‌).

ETV Bharat Logo

Copyright © 2024 Ushodaya Enterprises Pvt. Ltd., All Rights Reserved.