ETV Bharat / entertainment

ರಶ್ಮಿಕಾ ಮಂದಣ್ಣ ಇದ್ದ ವಿಮಾನ ತುರ್ತು ಭೂಸ್ಪರ್ಶ: 'ಪ್ರಾಣಾಪಾಯದಿಂದ ಪಾರಾದೆ' ಎಂದ ನಟಿ - ಶ್ರದ್ಧಾ ದಾಸ್

ನಟಿ ರಶ್ಮಿಕಾ ಮಂದಣ್ಣ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ಸಮಸ್ಯೆ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದೆ.

Rashmika Mandanna
ರಶ್ಮಿಕಾ ಮಂದಣ್ಣ
author img

By ETV Bharat Karnataka Team

Published : Feb 18, 2024, 11:25 AM IST

Updated : Feb 18, 2024, 12:10 PM IST

'ನ್ಯಾಶನಲ್ ಕ್ರಶ್' ಖ್ಯಾತಿಯ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರತಂಗದಿಂದ ವೃತ್ತಿಜೀವನ ಆರಂಭಿಸಿ ಸದ್ಯ ಬಹುಭಾಷೆಗಳಲ್ಲಿ ಮಿಂಚುತ್ತಿರುವ ತಾರೆ. ಇತ್ತೀಚೆಗಷ್ಟೇ ತೆರೆಕಂಡ 'ಅನಿಮಲ್' ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ನಟಿಯ ಜನಪ್ರಿಯತೆ ಹೆಚ್ಚಿಸಿದೆ. ಮುಂದಿನ ಬಹುನಿರೀಕ್ಷಿತ ಸಿನಿಮಾ ಪುಷ್ಪಾ 2ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ನಟಿಯ ಲೇಟೆಸ್ಟ್ ಸೋಷಿಯಲ್​​ ಮೀಡಿಯಾ ಪೋಸ್ಟ್‌ ಅಭಿಮಾನಿಗಳಿಗೆ ಶಾಕ್​​ ನೀಡಿದೆ. ಸಂಭವನೀಯ ಅಪಾಯದಿಂದ ಸ್ವಲ್ಪದರಲ್ಲೇ ಪಾರಾದೆ ಎಂದು ರಶ್ಮಿಕಾ ಮಂದಣ್ಣ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿನಲ್ಲಿ ಬರೆದುಕೊಂಡಿದ್ದು, ಈ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿರಂತರ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೇ ಮುಂಬೈಗೆ ತೆರಳಿದ್ದರು. ತಮ್ಮ ಚಿತ್ರೀಕರಣ ಪೂರ್ಣಗೊಳಿಸಿ, ಹೈದರಾಬಾದ್​ಗೆ ವಾಪಸ್ಸಾಗಲು ಫ್ಲೈಟ್ ಹತ್ತಿದ್ದಾರೆ.. ನಟಿ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ಸಮಸ್ಯೆ ಹಿನ್ನೆಲೆ, ಮುಂಬೈ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ಈ ವಿಚಾರವನ್ನು ರಶ್ಮಿಕಾ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿನಲ್ಲಿ ಶೇರ್ ಮಾಡಿದ್ದಾರೆ. ಇದೇ ವಿಮಾನದಲ್ಲಿ ಶ್ರದ್ಧಾ ದಾಸ್ ಕೂಡ ಪ್ರಯಾಣಿಸುತ್ತಿದ್ದರು. ಶ್ರದ್ಧಾ ದಾಸ್ ಜೊತೆಗಿರುವ ಫೋಟೋವನ್ನು ರಶ್ಮಿಕಾ ಹಂಚಿಕೊಂಡು, "ಇಂದು ನಾವು ಸಾವಿನಿಂದ ಪಾರಾಗಿದ್ದೇವೆ" ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳಿಗೆ ಆಘಾತವಾಗಿದೆ. ತಮ್ಮ ಮೆಚ್ಚಿನ ನಟಿ ಸುರಕ್ಷಿತರಾಗಿದ್ದಾರೆಂಬುದನ್ನು ಖಚಿತಪಡಿಸಿಕೊಂಡ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಇದನ್ನೂ ಓದಿ: ಪುಷ್ಪ 3 ಬಗ್ಗೆ ಖಚಿತ ಮಾಹಿತಿ ಕೊಟ್ಟ ಅಲ್ಲು ಅರ್ಜುನ್

ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು ಹಿಂದಿ ಚಿತ್ರಗಳಲ್ಲಿ ನಟಿಸುತ್ತಿದ್ದು, ಸ್ಟಾರ್ ಹೀರೋಯಿನ್ ಸಾಲಿಗೆ ಸೇರಿದ್ದಾರೆ. ಅಲ್ಲು ಅರ್ಜುನ್ ಜೊತೆಗಿನ ಪುಷ್ಪ ಸಿನಿಮಾ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ್ದು ನಿಮಗೆ ಗೊತ್ತೇ ಇದೆ. ಚಿತ್ರದ ಮುಂದುವರಿದ ಭಾಗ ನಿರ್ಮಾಣ ಹಂತದಲ್ಲಿದೆ. 'ಪುಷ್ಪ 2: ದಿ ರೂಲ್​' ಅಲ್ಲದೇ ದಿ ಗರ್ಲ್​​ಫ್ರೆಂಡ್​, ರೈನ್​ಬೋ ಸಿನಿಮಾಗಳು ಸಹ ನಟಿ ಕೈಯಲ್ಲಿವೆ. ಕೊನೆಯದಾಗಿ ಕಾಣಿಸಿಕೊಂಡ ಅನಿಮಲ್​ ಸಿನಿಮಾ ಯಶಸ್ವಿ ಆಗಿದೆ. ಚಿತ್ರ ಮಿಶ್ರ ಪ್ರತಿಕ್ರಿಯೆ ಸ್ವೀಕರಿಸಿದರೂ, ಗಲ್ಲಾಪೆಟ್ಟಿಗೆಯಲ್ಲಿ ಬರೋಬ್ಬರಿ 900 ಕೋಟಿ ರೂ. ಕಲೆಕ್ಷನ್​ ಮಾಡಿದೆ. ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್ ರಣ್​ಬಿರ್​ ಜೊತೆ ತೆರೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ಲಕ್ಕಿ ಫ್ಯಾನ್​: ರಶ್ಮಿಕಾಗೆ ಕೆಂಗುಲಾಬಿ​ ಕೊಟ್ಟು ಪ್ರೀತಿ ವ್ಯಕ್ತಪಡಿಸಿದ ಅಭಿಮಾನಿ - ವಿಡಿಯೋ ವೈರಲ್

ನೇಹಾ ಧೂಪಿಯಾ ಅವರ ಚಾಟ್ ಶೋ 'ನೋ ಫಿಲ್ಟರ್ ನೇಹಾ'ದ ಶೂಟಿಂಗ್​ನಲ್ಲಿ ಭಾಗಿಯಾಗೋ ಸಲುವಾಗಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು. ಪಾಪರಾಜಿಗಳು ನಟಿ ವಿಡಿಯೋ ಹಂಚಿಕೊಂಡಿದ್ದರು. ಪಾಪರಾಜಿಗಳ ಕ್ಯಾಮರಾಗಳಿಗೆ ಪೋಸ್ ಕೊಡುವ ವೇಳೆ, ಅಭಿಮಾನಿಯೊಬ್ಬರು ಆಗಮಿಸಿ ನಟಿಗೆ ಕೆಂಗುಲಾಬಿ ಕೊಟ್ಟು ತಮ್ಮ ಅಭಿಮಾನ ವ್ಯಕ್ತಪಡಿಸಿದ್ದರು. ನಟಿ ಕೂಡ ಬಹಳ ವಿನಮ್ರತೆಯಿಂದ ಪ್ರತಿಕ್ರಿಯಿಸಿ, ನೆಟ್ಟಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Last Updated : Feb 18, 2024, 12:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.