ETV Bharat / entertainment

ಅಂತಿಮ ಹಂತದಲ್ಲಿ 'ಪರವಶ': ಹೊಸ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್

ಸ್ಯಾಂಡಲ್​ವುಡ್​​ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಪರವಶ ಚಿತ್ರೀಕರಣ ಅಂತಿಮ ಘಟ್ಟದಲ್ಲಿದೆ.

paravasha title release event
'ಪರವಶ' ಟೈಟಲ್​ ರಿಲೀಸ್​ ಈವೆಂಟ್​
author img

By ETV Bharat Karnataka Team

Published : Mar 3, 2024, 1:40 PM IST

'ರವಿ ಬೋಪಣ್ಣ' ಚಿತ್ರದ ಬಳಿಕ ಸ್ಯಾಂಡಲ್​ವುಡ್​​ ಕ್ರೇಜಿಸ್ಟಾರ್ ರವಿಚಂದ್ರನ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಿರತರಾಗಿದ್ದಾರೆ. ಇದೀಗ 'ಪರವಶ' ಎಂಬ ಕ್ಯಾಚೀ ಟೈಟಲ್ ಹೊಂದಿರುವ ಸಿನಿಮಾದ ಶೂಟಿಂಗ್​​ ಸದ್ದಿಲ್ಲದೇ ಅಂತಿಮ ಘಟ್ಟ ತಲುಪಿದೆ. ಈ ಚಿತ್ರದಲ್ಲಿ ರವಿಚಂದ್ರನ್ ಎಂದೂ ಕಾಣಿಸಿಕೊಂಡಿರದ ಪಾತ್ರ ನಿರ್ವಹಿಸಿದ್ದಾರೆ. ಅದುವೇ ಘೋಸ್ಟ್. ಈ ಪಾತ್ರದಲ್ಲಿ ರವಿಮಾಮ ಹೇಗೆ ಕಾಣಿಸಲಿದ್ದಾರೆ? ಅನ್ನೋದು ಅಭಿಮಾನಿಗಳ ಕುತೂಹಲ.

paravasha title release event
'ಪರವಶ' ಟೈಟಲ್​ ರಿಲೀಸ್​ ಈವೆಂಟ್​

ಯುವ ನಟ ರಘು ಭಟ್ ಹಾಗೂ ನಟಿ ಸೋನಲ್ ಮೊಂತೆರೋ ಅಭಿನಯದ 'ಪರವಶ' ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಹಿನ್ನೆಲೆ ಇತ್ತೀಚಿಗೆ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಅನ್ನು ನೆಲಮಂಗಲದ ಬಳಿ ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು. ಯುವ ನಿರ್ದೇಶಕ ಸುಧೀಂದ್ರ ನಾಡಿಗರ್ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈವೆಂಟ್​ನಲ್ಲಿ ಚಿತ್ರತಂಡ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದೆ.

ಪರವಶ ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿರೋ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, ''ಹೊಸತಂಡದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ನಾನು ಈವರೆಗೆ ನಿರ್ವಹಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ನನ್ನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ನಿರ್ದೇಶಕ ಸುಧೀಂದ್ರ ನಾಡಿಗರ್ ಅವರ ‌ನಿರ್ದೇಶನದ ಶೈಲಿ ವಿನೂತನವಾಗಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ'' ಎಂದು ತಿಳಿಸಿದರು.

paravasha title release event
'ಪರವಶ' ಟೈಟಲ್​ ರಿಲೀಸ್​ ಈವೆಂಟ್​

ಯುವ ನಿರ್ದೇಶಕ ಸುಧೀಂದ್ರ ನಾಡಿಗರ್ ಮಾತನಾಡಿ, ''ರವಿಚಂದ್ರನ್ ಸರ್, ರಘು ಭಟ್, ಸೋನಲ್​​ ಮೊಂತೆರೋ, ಪವಿತ್ರ ಲೋಕೇಶ್, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ನಾಯಕ ರಘು ಭಟ್​​ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಹಾಗೂ ಪ್ರತೀಕ್ ಶೆಟ್ಟಿ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ರಚಿಸಿದ್ದಾರೆ. ಸಂಭಾಷಣೆಯನ್ನು ರಘು ನಿಡವಳ್ಳಿ ಬರೆದಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ನಲವತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲ ದಿನಗಳ ಶೂಟಿಂಗ್​ ಬಾಕಿಯಿದೆ. ಮಂಗಳೂರು, ಉಡುಪಿ, ಮಣಿಪಾಲ ಹಾಗೂ ಕುಂದಾಪುರದಲ್ಲಿ ಚಿತ್ರೀಕರಣವಾಗಿದೆ'' ಎಂದು ಮಾಹಿತಿ ಹಂಚಿಕೊಂಡರು.

paravasha title release event
'ಪರವಶ' ಟೈಟಲ್​ ರಿಲೀಸ್​ ಈವೆಂಟ್​

ಈ ಚಿತ್ರದ ನಿರ್ಮಾಪಕ ಹರೀಶ್ ಗೌಡ ಮಾತನಾಡಿ, ''ನಮ್ಮೂರಿನಲ್ಲಿ ನಾನು ನಿರ್ಮಿಸುತ್ತಿರುವ "ಪರವಶ" ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿರುವುದು ಖುಷಿಯಾಗಿದೆ. ಹೊಸತಂಡಕ್ಕೆ ಪ್ರೋತ್ಸಾಹ ನೀಡುತ್ತಿರುವ ರವಿಚಂದ್ರನ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ'' ಎಂದು ತಿಳಿಸಿದರು‌.

ಇದನ್ನೂ ಓದಿ: ಅಂಬಾನಿ ಪುತ್ರನ ಪ್ರಿ-ವೆಡ್ಡಿಂಗ್ ವೈಭವ: ಒಂದೇ ವೇದಿಕೆಯಲ್ಲಿ ಶಾರುಖ್​, ಅಮೀರ್​, ಸಲ್ಮಾನ್ ಡ್ಯಾನ್ಸ್​ ಝಲಕ್‌

ಯುವನಟ ರಘು ಭಟ್ ಮಾತನಾಡಿ, ''ಥ್ರಿಲ್ಲರ್, ಕೌಟುಂಬಿಕ ಹಾಗೂ ಪ್ರೇಮ ಕಥಾಹಂದರವುಳ್ಳ "ಪರವಶ" ಚಿತ್ರದಲ್ಲಿ ಜನರಿಗೆ ಬೇಕಾದ ಎಲ್ಲಾ ಅಂಶಗಳು ಇವೆ. ಒಟ್ಟಿನಲ್ಲಿ ಪ್ರೇಕ್ಷಕರು ಕೊಟ್ಟ ದುಡ್ಡಿಗೆ ದುಪ್ಪಟ್ಟು ಮನರಂಜನೆ ನೀಡುವ ಚಿತ್ರವಿದು. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಕೂಡ ಮನಸ್ಸಿಗೆ ಮುದ ನೀಡುತ್ತದೆ'' ಎಂದು ತಿಳಿಸಿದರು. ಜೊತೆಗೆ, ಚಿತ್ರದಲ್ಲಿ ನನ್ನ ಪಾತ್ರ ಕೂಡ ಚೆನ್ನಾಗಿದೆ.‌ ಈ ತಂಡದ ಜೊತೆಗೆ ಕೆಲಸ ಮಾಡಿದ್ದು, ಸಂತೋಷವಾಗಿದೆ ಎಂದರು.

ಇದನ್ನೂ ಓದಿ: ವಿಡಿಯೋ: ಪತ್ನಿ ಉಪಾಸನಾ ಬಗ್ಗೆ ಕಾಳಜಿ ವಹಿಸಿದ ರಾಮ್​ಚರಣ್​​​ಗೆ ಫ್ಯಾನ್ಸ್ ಮೆಚ್ಚುಗೆ

ನಾಯಕಿ ಸೋನಲ್ ಮೊಂತೆರೋ, ಕಲಾವಿದರಾದ ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಹಾಗೂ ಛಾಯಾಗ್ರಾಹಕ ಆನಂದ್ ಮೀನಾಕ್ಷಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅವ್ಯಕ್ತ ಸಿನಿಮಾಸ್ ಲಾಂಛನದಲ್ಲಿ ಹರೀಶ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲೇ ಸಂಪೂರ್ಣ ಶೂಟಿಂಗ್ ಮುಗಿಸಿ ಟ್ರೇಲರ್​ ಬಿಡುಗಡೆ ಮಾಡಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.