ETV Bharat / entertainment

ಟೀಸರ್​ನಲ್ಲೇ ಕುತೂಹಲ ಕೆರಳಿಸಿದ ರವಿಚಂದ್ರನ್​​ ಅಭಿನಯದ 'ದಿ ಜಡ್ಜ್​​​ಮೆಂಟ್' - The Judgement Teaser - THE JUDGEMENT TEASER

ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಭೂಮಿಕೆಯ 'ದ ಜಡ್ಜ್​​​ಮೆಂಟ್' ಟೀಸರ್ ಅನಾವರಣಗೊಂಡಿದೆ.

The Judgement Teaser
'ದಿ ಜಡ್ಜ್​​​ಮೆಂಟ್' ಟೀಸರ್
author img

By ETV Bharat Karnataka Team

Published : May 2, 2024, 2:20 PM IST

ಸ್ಯಾಂಡಲ್​ವುಡ್​​ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ 'ದ ಜಡ್ಜ್​​​ಮೆಂಟ್'. ನ್ಯಾಯ ಕೊಡಿಸುವ ವಕೀಲನಾಗಿ ಅಭಿನಯಿಸಿರುವ ಚಿತ್ರದ ಕುತೂಹಲಕಾರಿ ಟೀಸರ್ ಅನಾವರಣಗೊಂಡಿದೆ.

Ravichandran
ಸ್ಯಾಂಡಲ್​ವುಡ್​​ ಕ್ರೇಜಿಸ್ಟಾರ್ ರವಿಚಂದ್ರನ್

ಬಹು ತಾರಾಬಳಗ ಹೊಂದಿರುವ ದ ಜಡ್ಜ್​​ಮೆಂಟ್ ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್​ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಸದ್ಯ ಬಿಡುಗಡೆ ಆಗಿರುವ ಚಿತ್ರದ ಟೀಸರ್ ಪ್ರೇಕ್ಷಕರ ಕುತೂಹಲ ಕೆರಳಿಸಿದೆ. ಸಿನಿಮಾ ವೀಕ್ಷಿಸುವ ಸಿನಿಪ್ರಿಯರ ಕಾತರ ಹೆಚ್ಚಿಸಿದೆ.

ನಿರ್ಮಾಪಕ-ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಮಾತನಾಡಿ, ಇತ್ತೀಚೆಗೆ ಡಾ. ರಾಜ್​​ಕುಮಾರ್ ಅವರ ಜನ್ಮದಿನೋತ್ಸವದಂದು ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿವೆ. ಮತ್ತೊಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪ್ರತಿಷ್ಠಿತ ರಿಲಯನ್ಸ್ ಎಂಟರ್​ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ.

Ravichandran
ಸ್ಯಾಂಡಲ್​ವುಡ್​​ ಕ್ರೇಜಿಸ್ಟಾರ್ ರವಿಚಂದ್ರನ್

ಈ ಹೆಸರಾಂತ ಸಂಸ್ಥೆಯ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಈ ಚಿತ್ರದ ವಿತರಣೆ ಅಷ್ಟೇ ಅಲ್ಲದೇ, ಮುಂದೆ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುವ ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ರಿಲಯನ್ಸ್ ಎಂಟರ್​ಟೈನ್ಮೆಂಟ್​ ಸಂಸ್ಥೆ ತಿಳಿಸಿದೆ. ಈವರೆಗೂ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ಈ ಸಂಸ್ಥೆ ವಿತರಣೆ ಮಾಡಿದೆ. ಆ ಪೈಕಿ 19 ಚಿತ್ರಗಳು ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ ಚಿತ್ರಗಳಾಗಿವೆ. ಇಂತಹ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ. ಕೋರ್ಟ್ ಡ್ರಾಮಾ ಜಾನರ್​ನ ಈ ಚಿತ್ರವನ್ನು ಶೀಘ್ರದಲ್ಲೇ ತೆರೆಗೆ ತರುವುದಾಗಿ ಮಾಹಿತಿ ಹಂಚಿಕೊಂಡರು.

Ravichandran
ವಕೀಲನಾಗಿ ರವಿಚಂದ್ರನ್

ಇದನ್ನೂ ಓದಿ: ರಿಷಿ ಅಭಿನಯದ 'ರುದ್ರ ಗರುಡ ಪುರಾಣ'ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಾಥ್ - Rudhra Garuda Purana

ವಿ. ರವಿಚಂದ್ರನ್ ಅಲ್ಲದೇ ದಿಗಂತ್ , ಧನ್ಯಾ ರಾಮ್​​ಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಇದೆ. ಜಿ9 ಕಮ್ಯುನಿಕೇಶನ್​​​​ ಮೀಡಿಯಾ ಆ್ಯಂಡ್​​ ಎಂಟರ್​​ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣ ಆಗಿರುವ ಈ ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್ ಅವರ ಸಂಕಲನವಿದೆ. ಸದ್ಯ ಟೀಸರ್​ನಿಂದ ಗಮನ ಸೆಳೆಯುತ್ತಿರೋ ದ ಜಡ್ಜ್​​ಮೆಂಟ್ ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ. ಕ್ರೇಜಿಸ್ಟಾರ್ ಮುಖ್ಯಭೂಮಿಕೆಯ ಈ ಸಿನಿಮಾ ಎಷ್ಟರ ಮಟ್ಟಿಗೆ ಗೆಲ್ಲಲಿದೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: 'ವೀರ್' ಆಗಿ ಜೆ.ಕೆ: ಯುವ ನಿರ್ದೇಶಕನ ಜೊತೆ ಕೈ ಜೋಡಿಸಿದ ಕಾರ್ತಿಕ್ ಜಯರಾಮ್ - The Veer

ETV Bharat Logo

Copyright © 2024 Ushodaya Enterprises Pvt. Ltd., All Rights Reserved.