ಮತ್ತೆ ಭರ್ಜರಿ ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್, ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್ ಮೂಲಕ ಫ್ಯಾನ್ಸ್ ಎದುರು ಪ್ರತ್ಯಕ್ಷರಾಗಿದ್ದಾರೆ. ಮಾಸ್ ಆಕ್ಷನ್ ಶೈಲಿಯ 'ಸಲಾರ್', 'ಕಲ್ಕಿ ಎಡಿ 2898' ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್ ಬಾಯ್ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.
ಪ್ಯಾನ್ ಇಂಡಿಯಾ ಚಿತ್ರ 'ದಿ ರಾಜಾಸಾಬ್' ಸಣ್ಣ ಝಲಕ್ ಅನ್ನು ಚಿತ್ರತಂಡ ಸೋಮವಾರ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌ನಲ್ಲಿ ಡಾರ್ಲಿಂಗ್ ಪ್ರಭಾಸ್ ಅವರ ಡ್ಯಾಶಿಂಗ್ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
Mass uuu….Class uuu….
— The RajaSaab (@rajasaabmovie) July 29, 2024
Swag uuu…Unlimited entertainment uuu..
April 10th,2025 Theatres lo Vaibhavam guaranteed…..🤗🤗🔥🔥
Let’s all celebrate our Darling #Prabhas ❤️❤️#TheRajaSaab Fan India Glimpse.
- https://t.co/6gGGEnDwXW#TheRajaSaabOnApril10th… pic.twitter.com/E1soA7OJUQ
ಗ್ಲಿಂಪ್ಸ್ ಜೊತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. 'ರಾಜಾ ಸಾಬ್' 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕೇವಲ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್ ತೆರಕಾಣಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.
ಈಗಾಗಲೇ ಚಿತ್ರದ ಶೇಕಡಾ 40ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ಹಾಗೂ ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿ ಈ ಸಿನಿಮಾಕ್ಕಿದೆ. ಹೀಗಾಗಿ, ಭರ್ಜರಿ ಆಕ್ಷನ್ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.
ಮಾರುತಿ ನಿರ್ದೇಶನದ ರಾಜಾ ಸಾಬ್ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. 'ಪ್ರತಿ ರೋಜು ಪಂಡಗ', ತೆಲುಗಿನ ಹಾರರ್ ಕಾಮಿಡಿ 'ಪ್ರೇಮ ಕಥಾ ಚಿತ್ರಂ' ಮತ್ತು ರೊಮ್ಯಾಂಟಿಕ್ ಕಾಮಿಡಿ 'ಮಹಾನುಭಾವುಡು' ಸೇರಿ ಹಲವು ಸೂಪರ್‌ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಮಾರುತಿ, ಇದೀಗ ಮತ್ತೊಂದು ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜೊತೆ ಬರುತ್ತಿದ್ದಾರೆ.
'ಕಾರ್ತಿಕೇಯ 2' ಮತ್ತು 'ಧಮಾಕಾ' ಸೇರಿ ಹಲವು ಹಿಟ್ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ತೆಲುಗು ಚಿತ್ರೋದ್ಯಮದಲ್ಲಿ ಸಾಕಷ್ಟು ಹೆಸರು ಮಾಡಿದೆ. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ನಿರ್ಮಿಸುತ್ತಿದೆ. ಕೋಟಗಿರಿ ಈ ಚಿತ್ರಕ್ಕೆ ವೆಂಕಟೇಶ್ವರ ರಾವ್ ಸಂಕಲನ, ಕಾರ್ತಿಕ್ ಪಳನಿ ಛಾಯಾಗ್ರಹಣ, ಎಸ್.ಎಸ್.ಥಮನ್ ಸಂಗೀತ ಹಾಗೂ ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸವಿದೆ.
ಇದನ್ನೂ ಓದಿ: ರಾಮೋಜಿ ಫಿಲ್ಮ್ ಸಿಟಿಯಲ್ಲಿ ಪುಷ್ಪ 2 ಶೂಟಿಂಗ್ ಪುನಾರಂಭ; ಶೀಘ್ರ ಶೆಟ್ಗೆ ಅಲ್ಲು ಅರ್ಜುನ್ - Pushpa 2