ETV Bharat / entertainment

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಪಟ್ಟಿಯಲ್ಲಿನ ದರ್ಶನ್ ವಿರುದ್ಧದ ರಹಸ್ಯ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ - Renukaswamy Murder Case - RENUKASWAMY MURDER CASE

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್​ನಲ್ಲಿ ದಾಖಲಾಗಿರುವ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು ಕೋರಿ ಆರೋಪಿ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Darshan Case
ನಟ ದರ್ಶನ್ (ETV Bharat)
author img

By ETV Bharat Karnataka Team

Published : Sep 10, 2024, 1:44 PM IST

Updated : Sep 10, 2024, 1:53 PM IST

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಕುರಿತು ಆರೋಪಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಧ್ಯಮಗಳಿಗೆ ಹೈಕೋರ್ಟ್ ಇಂದು ನಿರ್ಬಂಧ ವಿಧಿಸಿದೆ.

ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ಏಕಪಕ್ಷೀಯವಾಗಿ ಈ ಆದೇಶ ಮಾಡಿತು. ಅಲ್ಲದೇ, ಹೊಸದಾಗಿ ಸೇರ್ಪಡೆ ಮಾಡಿದ್ದ ಮಾಧ್ಯಮ ಸಂಸ್ಥೆಗಳಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯ ಕುರಿತು ವಿಚಾರಣಾ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ ಆರೋಪಪಟ್ಟಿಯ ಯಾವುದೇ ಗುಪ್ತ ಮಾಹಿತಿಯನ್ನು ಪ್ರಸಾರಮಾಡದಂತೆ ಕೋರ್ಟ್ ತಾಕೀತು ಮಾಡಿದೆ.

ಇದೇ ಪ್ರಕರಣದಲ್ಲಿ ದರ್ಶನ್ ಪತ್ನಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣಾ ನ್ಯಾಯಾಲಯ, ದರ್ಶನ್ ವಿರುದ್ಧ ಯಾವುದೇ ಆಧಾರರಹಿತ ಮಾಹಿತಿ ಪ್ರಸಾರ ಮಾಡದಂತೆ ಏಕಪಕ್ಷೀಯವಾಗಿ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ. ಆದರೂ, ಮಾಧ್ಯಮಗಳು ಆರೋಪಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ ಮಾಡುತ್ತಿವೆ ಎಂದು ಅರ್ಜಿದಾರರ ಪರ ವಕೀಲರ ವಾದವನ್ನು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

ಅಲ್ಲದೇ, ಮುಂದಿನ ಆದೇಶವರೆಗೂ ಮಾಧ್ಯಮಗಳು ಆರೋಪಪಟ್ಟಿಯಲ್ಲಿನ ಗೌಪ್ಯ ಮಾಹಿತಿ ಪ್ರಸಾರ ಮಾಡುವುದು/ಮುದ್ರಿಸುವುದು/ಪ್ರಕಟಿಸುವುದು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಷನ್ ಆಕ್ಟ್ 1995ರ ನಿಯಮ 5 ಮತ್ತು ಸುಪ್ರೀಂ ಕೋರ್ಟ್‌ನ ತrರ್ಪಿಗೆ ವಿರುದ್ಧವಾಗುತ್ತದೆ. ಹೀಗಾಗಿ ದರ್ಶನ್ ಕುರಿತಂತೆ ಆರೋಪಪಟ್ಟಿಯಲ್ಲಿನ ಗುಪ್ತ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: 'ರೇಣುಕಾಸ್ವಾಮಿ ಬಿಡಬೇಡಿ' ಎಂದಿದ್ದ ಪವಿತ್ರಾಗೌಡ!; ಇದು ಚಾರ್ಜ್​​​​ಶೀಟ್​​ನಲ್ಲಿರುವ ಸ್ಫೋಟಕ ಅಂಶ! - PAVITRA GOWDA STATEMENTS

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸೆಪ್ಟೆಂಬರ್​ 4ರಂದು ಚಾರ್ಜ್​ಶೀಟ್ ಸಲ್ಲಿಸಿದ್ದರು. ದರ್ಶನ್​ರನ್ನು ಎ2 ಆರೋಪಿಯಾಗಿಯೇ ಮುಂದುವರಿಸಲಾಗಿದೆ. ಪ್ರಕರಣದ ಆರೋಪಿಗಳಿಗೆ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಈ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳಲ್ಲಿ ಆರೋಪಪಟ್ಟಿ ಪ್ರಸಾರ ತಡೆಯುವಂತೆ ಕೋರಿ ಹೈಕೋರ್ಟ್​ಗೆ ದರ್ಶನ್ ಅರ್ಜಿ - Renukaswamy Murder Case

ಆರೋಪಪಟ್ಟಿಯ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವಂತೆ ಕೋರಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠವು ಮಂಗಳವಾರದಂದು ಆದೇಶ ಹೊರಡಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ಆದೇಶ ಪ್ರಕಟವಾಗಿದೆ.

Last Updated : Sep 10, 2024, 1:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.