ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಚಂದನವನದ 'ರಾಮನ ಅವತಾರ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಚಿತ್ರದ ಮೊದಲ ನೋಟ ಕೂಡ ಅನಾವರಣ ಮಾಡಲಾಯಿತು. ಈ ವೇಳೆ, ನಟ - ನಟಿ ಸೇರಿದಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
- " class="align-text-top noRightClick twitterSection" data="">
ನಾಯಕ ನಟ ರಿಷಿ ಮಾತನಾಡಿ, ಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ಆಪರೇಷನ್ ಅಲಮೇಲಮ್ಮ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಮನಂಜನಾತ್ಮಕ ಸಿನಿಮಾ ಮಾಡುವಂತೆ, ಅದೇ ರೀತಿಯ ಹಾಸ್ಯಭರತಿ ಚಿತ್ರ ಮಾಡುವಂತೆ ಸಲಹೆ ನೀಡುತ್ತಿದ್ದ್ರು. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿರು. ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. ರಾಮಾಯಣ ಮೌಲ್ಯವನ್ನು ಈ ಚಿತ್ರದ ಮೂಲಕ ತೋರಿಸುತ್ತಿರುವುದು ನನಗೆ ಖುಷಿ ಇದೆ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಹಾಡುಗಳು ಸಹ ನನಗೆ ತುಂಬಾ ಇಷ್ಟ ಆಗಿವೆ. ಇಡೀ ಸಿನಿಮಾಗೆ ದುಡಿದ ಎಲ್ಲರಿಗೂ ಧನ್ಯವಾದ ಎಂದರು.
ನಿರ್ದೇಶಕ ವಿಕಾಸ್ ಪಂಪಾಪತಿ ಮಾತನಾಡಿ, ಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮನ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಿರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳೇನು? ಅವನನ್ನು ಕಾಲ ಹೇಗೆ ಬದಲಾಯಿಸುತ್ತದೆ? 'ರಾಮನ ಅವತಾರ' ಎಂದು ಯಾಕೆ ಇಟ್ಟಿದ್ದೇವೆ? ರಾಮ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅನ್ನುವುದನ್ನು ಮನರಂಜನಾತ್ಮಕವಾಗಿ ಹೇಳಿದ್ದೇವೆ. 'ರಾಮನ ಅವತಾರ' ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಜೀವನದಲ್ಲಿಯೂ ಒಂದಲ್ಲ ಒಂದು ರಾಮಾಯಣ ಇದ್ದೇ ಇರುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ, ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದು ಹೇಳಿದರು.
ನಟಿ ಪ್ರಣೀತಾ ಸುಭಾಷ್ ಮಾತನಾಡಿ, 'ರಾಮನ ಅವತಾರ' ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾರ್ಡನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣದ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ. ನಾಯಕ ನಟರಾಗಿರುವ ರಿಷಿ ಅವರ ಬೇರೆ ಬೇರೆ ಚಿತ್ರಗಳನ್ನು ಸಹ ನೋಡಿದ್ದೇನೆ. ಶೂಟಿಂಗ್ ಜರ್ನಿ ತುಂಬಾ ಚೆನ್ನಾಗಿತ್ತು ಎಂದು ಹೇಳಿದರು. ನಟಿ ಶುಭ್ರ ಅಯ್ಯಪ್ಪ ಮಾತನಾಡಿ, ನಾನು ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿರುವುದಾಗಿ ಹೇಳಿದರು.
'ರಾಮನ ಅವತಾರ' ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಟ್ರೇಲರ್ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್ ಸೀರಿಸ್ ಮೂಲಕವೂ ಮೋಡಿ ಮಾಡಿದ್ದಾರೆ. ಇದೀಗ ಕಾಮಿಡಿ ಕಥೆ ಹೊತ್ತು ನಿಮ್ಮನ್ನು ನಗಿಸಲು ಬರ್ತಿದ್ದಾರೆ.
'ರಾಮನ ಅವತಾರ' ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.
ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’ ಅಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೇ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಮರನಾಥ್ ಸಂಕಲನ ಚಿತ್ರಕ್ಕಿದೆ. ಮೇ 10ಕ್ಕೆ ರಾಮನ ಅವತಾರ ರಾಜ್ಯಾದ್ಯಂತ ತೆರೆಗೆ ಬರ್ತಿದೆ.
ಇದನ್ನೂ ಓದಿ: '777 ಚಾರ್ಲಿ'ಗೆ ಮತ್ತೊಂದು ಗರಿ: ಜೂ.28ಕ್ಕೆ ಜಪಾನ್ನಲ್ಲಿ ಬಿಡುಗಡೆ - 777 Charlie