ETV Bharat / entertainment

ಯುವ ಪ್ರತಿಭೆ ರೋಹಿತ್ ಕನಸಿಗೆ ವಿಜಯ್ ರಾಘವೇಂದ್ರ ಸಾಥ್: 'ರಕ್ತಾಕ್ಷ' ಟ್ರೇಲರ್ ರಿಲೀಸ್ - Raktaksha Trailer

author img

By ETV Bharat Karnataka Team

Published : Jul 13, 2024, 12:05 PM IST

ಯುವ ಪ್ರತಿಭೆ ರೋಹಿತ್ ನಟಿಸಿ, ನಿರ್ಮಿಸಿರುವ 'ರಕ್ತಾಕ್ಷ' ಚಿತ್ರದ ಟ್ರೇಲರ್ ಅನಾವರಣಗೊಂಡಿದೆ.

Raktaksha trailer Release event
'ರಕ್ತಾಕ್ಷ' ಟ್ರೇಲರ್ ರಿಲೀಸ್​ ಈವೆಂಟ್ (ETV Bharat)

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲ ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ ಯುವ ಪ್ರತಿಭೆ ರೋಹಿತ್ ಅವರ ಮೊದಲ‌ ಕೂಸು 'ರಕ್ತಾಕ್ಷ' ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ.

'ರಕ್ತಾಕ್ಷ' ಚಿತ್ರದ ಟ್ರೇಲರ್ ಅನಾವರಣಗೊಂಡಿದ್ದು, ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ರಕ್ತಾಕ್ಷ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟ ವಿಜಯ್ ರಾಘವೇಂದ್ರ, ನಟಿ ಸುಮನ್ ನಗರ್ಕರ್ ಟ್ರೇಲರ್ ಬಿಡುಗಡೆ ಮಾಡಿ ಹೊಸಬರ ಪ್ರಯತ್ನಕ್ಕೆ ಬೆನ್ನುತಟ್ಟಿದ್ದಾರೆ.

ನಟ ವಿಜಯ್ ರಾಘವೇಂದ್ರ ಮಾತನಾಡಿ, ಕಥೆ ಬಗ್ಗೆ ಕಡಿಮೆ ಗೊತ್ತಿದ್ದರೆ ಒಳ್ಳೆಯದು. ಕಥೆ ಹೆಚ್ಚು ಬಿಟ್ಟು ಕೊಟ್ಟರೂ ಕಷ್ಟ. ಕಥೆಯ ಸುಳಿವೇ ಇಲ್ಲದೇ ಕೆಲ ಊಹಾಪೋಹ ಮಾಡಿಕೊಂಡು ಥಿಯೇಟರ್​ಗೆ ಬರುವಂತೆ ಮಾಡಿದರೂ ಕಷ್ಟ. ಯಾಕೆಂದರೆ, ಜನರೀಗ ಎಷ್ಟರ ಮಟ್ಟಿಗೆ ಮುಂದುವರಿದಿದ್ದಾರೆ ಎಂದರೆ ಸಣ್ಣ ಟ್ರೇಲರ್, ಟೀಸರ್ ವೀಕ್ಷಿಸಿ ತಮ್ಮದೇ ಕಲ್ಪನೆ‌ ಮೂಲಕ ಚಿತ್ರಮಂದಿರಗಳಿಗೆ ಪ್ರವೇಶಿಸುತ್ತಾರೆ. ಕಥೆ ಅವರದ್ದು ಆದರೆ ಒಪ್ಪಿಕೊಳ್ಳುತ್ತಾರೆ. ಕಥೆ ಬೇರೆಯವರದ್ದಾದರೆ ನಾವು ಅಂದುಕೊಂಡು ಬಂದ ಕಥೆಯಲ್ಲ ಎಂದು ಬೇಜಾರಾಗುತ್ತಾರೆ. ಆದರೆ ಸಣ್ಣ ಎಳೆ ಜನರ ವಿಶ್ವಾಸ ಗೆಲ್ಲುವುದು, ಸಿನಿಮಾದ ಮುಖಾಂತರ ಗೆಲ್ಲುವುದು ಒಂದು ಸಾಹಸ. ಅಂತಹ ಸಾಹಸಕ್ಕೆ ರೋಹಿತ್ ಕೈ ಹಾಕಿದ್ದಾರೆ. ಬಹಳ ಚೆನ್ನಾಗಿ ಟ್ರೇಲರ್ ಮೂಡಿ ಬಂದಿದೆ. ಕುತೂಹಲ ಕೆರಳಿಸುತ್ತದೆ. ಆ್ಯಕ್ಷನ್, ಥ್ರಿಲ್ಲರ್ ಎಲಿಮೆಂಟ್ಸ್ ಇದೆ. ನನಗೂ ಆಡಿಯನ್ಸ್ ಆಗಿ ಕ್ಯೂರಿಯಾಸಿಟಿ ಹೆಚ್ಚುವಂತೆ ಮಾಡಿದೆ. ಬಹಳ ಕಷ್ಟಪಟ್ಟಿದ್ದಾರೆ ರೋಹಿತ್. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

ನಟಿ ಸುಮನ್ ನಗರ್ಕರ್ ಮಾತನಾಡಿ, ಟ್ರೇಲರ್ ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಸರಣಿ ಕೊಲೆ ಇದೆ ಅನ್ನೋ ಕ್ಲ್ಯೂ ಇದೆ. ಮೂರ್ನಾಲ್ಕು ಹೀರೋಯಿನ್ ಇರುವುದು ಗೊತ್ತಾಗುತ್ತದೆ. ಹೀಗಾಗಿ ಸರಣಿ ಕೊಲೆಯಾಗುತ್ತದೆ ಎಂಬ ಕ್ಲ್ಯೂ ಕೂಡ ಸಿಕ್ತು. ನನ್ನ ಪತಿ ಪೊಲೀಸ್ ಪಾತ್ರದಲ್ಲಿ ನಡಿಸಿದ್ದಾರೆ. ಕಥೆಯನ್ನು ಅವರು ಕೂಡ ಹೇಳಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಪ್ರೋತ್ಸಾಹ ಸಿಗಬೇಕು, ಎಲ್ಲರೂ ಪ್ರೋತ್ಸಾಹ ಕೊಡಬೇಕು. ಜನ ಥಿಯೇಟರ್​​​ಗೆ ಬರಬೇಕು. ಅವರು ನಾವು ಮಾಡುವ ಕೆಲಸ ನೋಡಬೇಕು. ಈ ರೀತಿಯ ಮಿಸ್ಟ್ರೀ ಸ್ಟೋರಿಯನ್ನು ಥಿಯೇಟರ್​ನಲ್ಲಿ ನೋಡಿ‌ ಎಂದು ಹೇಳಿದರು.

ವಕೀಲರಾದ ಹರ್ಷ ಮುತಾಲಿಕ್ ಮಾತಾನಾಡಿ, ರೋಹಿತ್ ನೋಡಿದರೆ ಹೆಮ್ಮೆ ಎನಿಸುತ್ತದೆ. ಚಿಕ್ಕ ವಯಸ್ಸಿನಲ್ಲೇ ಮಾಡೆಲಿಂಗ್ ಮಾಡಿ, ಅಲ್ಲಿ ಒಂದು ರೀತಿ ಸಾಧನೆ ಮಾಡಿ, ಸದ್ಯ ಸಿನಿಮಾ ಮಾಡಿದ್ದಾರೆ. ನನ್ನ ಊರಿನ ಹುಡುಗ ಅನ್ನೋದು ವಿಶೇಷ. ಇಷ್ಟು ಎತ್ತರಕ್ಕೆ ಬೆಳೆಯುತ್ತಾನೆ, ಹಿರಿಯ ನಟರ ಹೊಗಳಿಕೆ ಪಾತ್ರರಾಗುತ್ತಾನೆ ಎಂದರೆ ನಮಗೆ, ನಮ್ಮ ಜಿಲ್ಲೆಗೂ ಹೆಮ್ಮೆ ಎಂದರು.

ನಟ ರೋಹಿತ್ ಮಾತನಾಡಿ, ಹಾರ್ಡ್ ವರ್ಕ್ ಮಾಡಿ‌ ಇಲ್ಲಿಗೆ ಬಂದಿದ್ದೇನೆ. ಥಿಯೇಟರ್​ನಲ್ಲಿ‌ ಒಳ್ಳೆ ಪರ್ಫಾಮರ್ ಅನ್ನೋ ಹೆಸರು ಬಂತು. ಭಿಕ್ಷುಕ ರೋಲ್ ಮಾಡಿದೆ. ಅದೇ ರೋಲ್ ಹಿಟ್ ಆಯ್ತು. ಕನ್ನಡ ಚಿತ್ರರಂಗ ಒಂದು ಹೆಮ್ಮರ. ಈ ಹೆಮ್ಮರದಲ್ಲಿ ನಾನು ಒಂದು ಚಿಕ್ಕ ಹಸಿರು ಎಲೆಯಾಗಿದ್ದರೆ ನನ್ನ ಲೈಫ್ ಸಾರ್ಥಕ. ಉತ್ತರ ಕರ್ನಾಟಕಕ್ಕೆ ನೂರಾರು ವರ್ಷಗಳ ಕಲೆ ಇತಿಹಾಸವಿದೆ. ಬಹಳಷ್ಟು ಕಲಾವಿದರು ಬಂದಿದ್ದಾರೆ . ನಮ್ಮಲ್ಲಿ ಯಾರು ಹೀರೋ ಇಲ್ಲ ಎಂಬ ಕೊರಗು ಇದೆ. ಬಹಳಷ್ಟು ಕಲೆ ಇದೆ. ದಾರಿ ಗೊತ್ತಿಲ್ಲ. ನನ್ನಿಂದ ಹತ್ತಾರು ಜನರಿಗೆ ಆ ದಾರಿ ಕ್ರಿಯೇಟ್ ಆಯಿತು ಎಂದರೆ ನನ್ನ ಜೀವನ ಸಾರ್ಥಕ ಎಂದು ಅಭಿಪ್ರಾಯಪಟ್ಟರು.

ರೋಹಿತ್ ಈಗಾಗಲೇ ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಹೀರೋ ಆಗಿರುವ ಜೊತೆಗೆ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಸಹ ಮಾಡಿದ್ದಾರೆ. ವಾಸುದೇವ್ ಎಸ್.ಎನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೋಹಿತ್​ ರೀತಿಯಲ್ಲಿಯೇ ವಾಸುದೇವ್ ಅವರಿಗೂ ಇದು ಮೊದಲ ಸಿನಿಮಾ. ರೋಹಿತ್, ವಾಸುದೇವ್ ಜೊತೆಗೆ ಇನ್ನೊಂದಿಷ್ಟು ಹೊಸ ಪ್ರತಿಭೆಗಳು ಸೇರಿ ಈ ಸಿನಿಮಾವನ್ನು ಮಾಡಿದ್ದು, ಧೀರೇಂದ್ರ ದಾಸ್ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಅಂಬಾನಿ ಕುಟುಂಬದ ಅದ್ಧೂರಿ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳಿವರು: ಕಂಪ್ಲೀಟ್​ ವಿಡಿಯೋ ಇಲ್ಲಿದೆ ನೋಡಿ! - Celebrities in Ambani Wedding

ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಬರೆದಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ನಟಿಸಿರುವ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ನಿವೀಕ್ಷ ನಾಯ್ಡು, ಗುರುದೇವ ನಾಗರಾಜ, ಪ್ರಭು, ವಿಶ್ವ, ಭದ್ರಿ ನಾರಾಯಣ,, ಬಸವರಾಜ ಆದಾಪುರ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಖಳನಾಯಕನ ಪಾತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅನಂತ್ - ರಾಧಿಕಾ: ವೈಭವೋಪೇತ ಮದುವೆಗೆ ಸಾಕ್ಷಿಯಾದ ಅಂಬಾನಿ ಕುಟುಂಬ - Anant Radhika wedding

ರಕ್ತಾಕ್ಷ ಟ್ರೇಲರ್ ಬಹಳ ಇಂಪ್ರೆಸಿಂಗ್ ಆಗಿ‌ ಮೂಡಿ ಬಂದಿದೆ. ಮಾಸ್ ಜೊತೆಗೆ ಥ್ರಿಲ್ಲಿಂಗ್ ಅಂಶಗಳು ಚಿತ್ರದಲ್ಲಿದ್ದು, ಪ್ರೇಕ್ಷಕರ ಕುತೂಹಲ ಕೆರಳಿಸೋದು ಪಕ್ಕಾ. ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಿರುವ ಚಿತ್ರತಂಡ ಇದೇ ಜುಲೈ 26ಕ್ಕೆ ಸಿನಿಮಾವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿದೆ. ಇನ್ನೂ, ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಶ್ರೀಕಾಂತ್ ಕಟಗಿ ಹಾಗೂ ಮೊಹಮದ್ ಗೌಸ್ ಪೀರ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.