ETV Bharat / entertainment

ಸಾನ್ಯಾ ಅಯ್ಯರ್, ಇಂದ್ರಜಿತ್ ಲಂಕೇಶ್ ಪುತ್ರನ 'ಟೈಮ್ ಬರುತ್ತೆ' ಹಾಡಿಗೆ ಫ್ಯಾನ್ಸ್ ಫಿದಾ - Gowri movie - GOWRI MOVIE

ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಗೌರಿ ಚಿತ್ರದ "ಟೈಮ್ ಬರುತ್ತೆ" ಹಾಡು ಅನಾವರಣಗೊಂಡಿದೆ.

Gowri movie song release event
'ಗೌರಿ'ಯ ಟೈಮ್ ಬರತ್ತೆ ಹಾಡು ಅನಾವರಣ (ETV Bharat)
author img

By ETV Bharat Karnataka Team

Published : May 12, 2024, 3:01 PM IST

ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ "ಗೌರಿ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ಅವರೇ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ "ಗೌರಿ" ಚಿತ್ರದ ಮೊದಲ ಹಾಡು ಅನಾವರಣಗೊಂಡಿತು.

Gowri movie song release event
ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯಾ ಅಯ್ಯರ್ (ETV Bharat)
Gowri movie song release event
'ಗೌರಿ' ಸಿನಿಮಾ ಈವೆಂಟ್ (ETV Bharat)

ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಸೆರಿದಂತೆ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್ ಈಶ್ವರ್ ಬರೆದಿರುವ "ಟೈಮ್ ಬರುತ್ತೆ" ಎಂಬ ಹಾಡು ಈ ಚಿತ್ರದ ಚೊಚ್ಚಲ ಗೀತೆಯಾಗಿ ಬಿಡುಗಡೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

  • " class="align-text-top noRightClick twitterSection" data="">

ಹಾಡು ಬಿಡುಗಡೆಯ ನಂತರ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು ಗೌರಿ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿವೆ. ಐವರು ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಭಾರತದ 12ಕ್ಕೂ ಅಧಿಕ ಹೆಸರಾಂತ ಗಾಯಕರು ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಇದೀಗ ಚಂದನ್ ಶೆಟ್ಟಿ ಸಂಗೀತ ನೀಡಿ ಹಾಡಿರುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಆಗಿದೆ‌. ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್​ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಉಳಿದ ಹಾಡುಗಳು ಶೀಘ್ರದಲ್ಲೇ ಅನಾವರಣವಾಗಲಿವೆ. ಜೊತೆಗೆ ಆದಷ್ಟು ಬೇಗ ಚಿತ್ರವನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಯುತ್ತಿದೆ‌‌ ಎಂದು ಮಾಹಿತಿ ಹಂಚಿಕೊಂಡರು.

Gowri movie song release event
ಟೈಮ್ ಬರುತ್ತೆ ಸಾಂಗ್ ರಿಲೀಸ್ ಈವೆಂಟ್ (ETV Bharat)

ಇದನ್ನೂ ಓದಿ: ನಟ ಅಲ್ಲು ಅರ್ಜುನ್​ ವಿರುದ್ಧ ಪ್ರಕರಣ ದಾಖಲು: ಕಾರಣ? - Allu Arjun

ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಮಾತನಾಡಿ, ಗೌರಿ ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ. ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ ಎಂದು ಕೇಳಿಕೊಂಡರು.

ಇದನ್ನೂ ಓದಿ: 'ರಾಧಾ ರಮಣ' ನಟಿ ಪವಿತ್ರಾ ಜಯರಾಮ್ ರಸ್ತೆ ಅಪಘಾತದಲ್ಲಿ​ ದುರ್ಮರಣ - Pavitra Jayaram

ETV Bharat Logo

Copyright © 2025 Ushodaya Enterprises Pvt. Ltd., All Rights Reserved.