ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ 'ಮೂರನೇ ಕೃಷ್ಣಪ್ಪ'. ಸಿನಿಮಾ ಶುರುವಾದಾಗಿನಿಂದ ಈವರೆಗೆ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈ ಚಿತ್ರದ ಮೊದಲ ನೋಟ ಪ್ರೇಕ್ಷಕರನ್ನು ಆವರಿಸಿಕೊಂಡಿದೆ.
ಮೂರನೇ ಕೃಷ್ಣಪ್ಪ ಟ್ರೇಲರ್ ಅನಾವರಣಗೊಂಡಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್‌ನಲ್ಲಿ ಕೋಲಾರ ಕನ್ನಡದ ಜೊತೆ ರಂಗಾಯಣ ರಘು, ಸಂಪತ್ ಮೈತ್ರೇಯ ಅವರಂತಹ ಅದ್ಭುತ ಕಲಾವಿದರ ಅಭಿನಯ ಹಾಗೂ ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಭರವಸೆಯಿಂದ ಮೂಡಿ ಬಂದಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರಂಟಿ ಎಂಬ ಸಂದೇಶ ರವಾನಿಸಿದೆ.
- " class="align-text-top noRightClick twitterSection" data="">
'ಮೂರನೇ ಕೃಷ್ಣಪ್ಪ' ಸಿನಿಮಾಗೆ ನವೀನ್ ರೆಡ್ಡಿ ಆ್ಯಕ್ಷನ್ ಕಟ್ ಹೇಳಿದ್ದು, ವಿಭಿನ್ನ ಶೀರ್ಷಿಕೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೇಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ರವೀನಾ ಟಂಡನ್: ಮಸ್ತ್ ಮಸ್ತ್ ಹುಡ್ಗಿ ಬಂದ್ಲು ಹಾಡಿಗೆ ಮಸ್ತ್ ಡ್ಯಾನ್ಸ್ - Raveen Tandon in Mysuru
ಇವರೊಂದಿಗೆ ತುಕಾಲಿ ಸಂತೋಷ್, ಉಗ್ರಂ ಮಂಜು ಸೇರಿದಂತೆ ಹಲವರು ನಟಿಸಿದ್ದಾರೆ. 'ಮೂರನೇ ಕೃಷ್ಣಪ್ಪ' ಸಿನಿಮಾಕ್ಕೆ ಆನಂದ್ ರಾಜವಿಕ್ರಮ್ ಸಂಗೀತ ನೀಡಿದ್ದು, ಶ್ರೀಕಾಂತ್ ಎಡಿಟಿಂಗ್ ಮಾಡಿದ್ದರೆ, ಯೋಗಿ ಕ್ಯಾಮರಾ ನಿರ್ವಹಿಸಿದ್ದಾರೆ. ಇದೇ ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.